ರಾಜ್ಯಾದ್ಯಂತ ವರುಣನ ಆರ್ಭಟ ಜೋರಾಗಿದ್ದು ಭಾರಿ ಮಳೆಗೆ ಜನ ಜೀವನ ಅಸ್ತವಸ್ತ್ಯಗೊಂಡಿದೆ. ಹೌದು ಕರಾವಳಿ ಭಾಗದಲ್ಲಿ ಈ ಭಾರಿ ಮಳೆಯ ಅವಾಂತರ ಅಷ್ಟೊಂದು ಪರಿಣಾಮಕಾರಿಯಾಗಿ ಬಾರದಿದ್ದರೂ ಸಹ ರಾಜ್ಯದ ಈ ಭಾಗದಲ್ಲಿ ಈ ಸಲ ಮಳೆರಾಯನ ಆರ್ಭಟ ಹೆಚ್ಚಾಗಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹೌದು ರಾಜ್ಯದ ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಮಳೆ ಸ್ರಷ್ಟಿಸಿದ ಅವಾಂತರ ಅಷ್ಟಿಷ್ಟಲ್ಲ.

ಬೆಳಗಾವಿ ಹಾಗು ಮಹಾರಾಷ್ಟ್ರದ ಗಡಿ ಭಾಗದಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದು ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ ಕಾಲೇಜಿಗೆ ರಜೆ ಘೋಷಿಸಲಾಗಿದೆ. ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮಳೆಯ ಅಬ್ಬರ ಜೋರಾಗಿದೆ. ಮುಂಗಾರು ಮಳೆ ಈಗ ಚುರುಕು ಪಡೆದುಕೊಂಡಿದೆ. ಮಹಾರಾಷ್ಟ್ರದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ನೀರಿನ ಹರಿವು ಹೆಚ್ಚಾಗಿದೆ. ಇದರಿಂದ ಬೆಳಗಾವಿಯಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ.

ಗಡಿ ಭಾಗದ ಬಹುತೇಕ ಎಲ್ಲ ನದಿಗಳು ತುಂಬಿ ತುಳುಕುತ್ತಿವೆ. ಜಲಾಶಯಗಳು ಭರ್ತಿಯಾಗಿವೆ. ನದಿ ಪಾತ್ರದ ಜನರಿಗೆ ಎಚ್ಚರಿಕೆಯಿಂದ ಇರಲು ಸೂಚನೆ ನೀಡಲಾಗಿದೆ.ಕೃಷ್ಣಾ, ದೂದಗಂಗಾ, ವೇದ ಗಂಗಾ ನದಿಗಳು ಉಕ್ಕಿ ಹರಿಯುತ್ತಿವೆ. ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಕೃಷ್ಣಾ ನದಿಯ ಒಳ ಹರಿವು ಪ್ರಮಾಣ ಗಣನೀಯವಾಗಿ ಏರಿಕೆಯಾಗಿದೆ.

ಮಹಾರಾಷ್ಟ್ರದಲ್ಲಿ ಭಾರಿ ಮಳೆಯ ಹಿನ್ನೆಲೆಯಲ್ಲಿ ಹೈ ಅಲರ್ಟ್‌ ಘೋಷಿಸಲಾಗಿದೆ. ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಧಾರಕಾರ ಮಳೆಯಿಂದಾಗಿ ಚಿಕ್ಕೋಡಿ ತಾಲೂಕಿನಲ್ಲಿ ಕೃಷ್ಣಾ ನದಿಯ ಕೆಳ ಹಂತದ ಮೂರು ಸೇತುವೆಗಳು ಜಲಾವೃತ್ತಗೊಂಡಿವೆ.


ಜಮಖಂಡಿ ತಾಲೂಕಿನ ಹಿಪ್ಪರಗಿ ಜಲಾಶಯದಿಂದ 65,100 ಕ್ಯೂಸೆಕ್‌ ನೀರನ್ನು ಆಲಮಟ್ಟಿ ಜಲಾಶಯಕ್ಕೆ ಹರಿ ಬಿಡಲಾಗುತ್ತಿದೆ. ಮಹಾರಾಷ್ಟ್ರದಿಂದ ಬರುವ ನೀರಿನ ಪ್ರಮಾಣದಷ್ಟೇ ನೀರನ್ನು ಹಿಪ್ಪರಗಿ ಬ್ಯಾರೇಜ್‌ ಮೂಲಕ ಆಲಮಟ್ಟಿ ಜಲಾಶಯಕ್ಕೆ ಹರಿಬಿಡುವುದರಿಂದ ಚಿಕ್ಕೋಡಿ ಉಪವಿಭಾಗದಲ್ಲಿ ಪ್ರವಾಹದ ಅಪಾಯವಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Please follow and like us:
error0
http://karnatakatoday.in/wp-content/uploads/2019/07/BELAGAVI-RAIN-1024x576.jpghttp://karnatakatoday.in/wp-content/uploads/2019/07/BELAGAVI-RAIN-150x104.jpgKarnataka Trendingಅಂಕಣಎಲ್ಲಾ ಸುದ್ದಿಗಳುರಾಜ್ಯಾದ್ಯಂತ ವರುಣನ ಆರ್ಭಟ ಜೋರಾಗಿದ್ದು ಭಾರಿ ಮಳೆಗೆ ಜನ ಜೀವನ ಅಸ್ತವಸ್ತ್ಯಗೊಂಡಿದೆ. ಹೌದು ಕರಾವಳಿ ಭಾಗದಲ್ಲಿ ಈ ಭಾರಿ ಮಳೆಯ ಅವಾಂತರ ಅಷ್ಟೊಂದು ಪರಿಣಾಮಕಾರಿಯಾಗಿ ಬಾರದಿದ್ದರೂ ಸಹ ರಾಜ್ಯದ ಈ ಭಾಗದಲ್ಲಿ ಈ ಸಲ ಮಳೆರಾಯನ ಆರ್ಭಟ ಹೆಚ್ಚಾಗಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹೌದು ರಾಜ್ಯದ ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಮಳೆ ಸ್ರಷ್ಟಿಸಿದ ಅವಾಂತರ ಅಷ್ಟಿಷ್ಟಲ್ಲ. ಬೆಳಗಾವಿ ಹಾಗು ಮಹಾರಾಷ್ಟ್ರದ ಗಡಿ ಭಾಗದಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದು...Film | Devotional | Cricket | Health | India