ಸ್ನೇಹಿತರೆ ಕಳೆದ ನಾಲ್ಕು ಐದು ತಿಂಗಳುಗಳಿಂದ ರಾಜ್ಯದಲ್ಲಿ ಭಾರಿ ಸುದ್ದಿಯಾಗುತ್ತಿರುವ ವಿಷಯ ಅಂದರೆ ಅದೂ ಚಿನ್ನ ಮತ್ತು ಬೆಳ್ಳಿಯ ಬೆಲೆ ಎಂದು ಹೇಳಿದರೆ ತಪ್ಪಾಗಲ್ಲ. ಹೌದು ಸ್ನೇಹಿತರೆ ಚಿನ್ನದ ಬೆಲೆ ಗಗನಕ್ಕೆ ಏರಿ ಕೈಗೆ ಸಿಗದಂತೆ ಆಗಿದ್ದು ನಿಮಗೆ ಗೊತ್ತೇ ಇದೆ, ಆದರೆ ಕೆಲವು ಒಂದು ತಿಂಗಳಿನಿಂದ ಚಿನ್ನದ ಬೆಲೆಯಲ್ಲಿ ಸ್ವಲ್ಪ ಇಳಿಕೆಯಾಗಿ ಗ್ರಾಹಕರ ಮುಖದಲ್ಲಿ ಮಂದಹಾಸವನ್ನ ಮೂಡಿಸಿತ್ತು. ಇನ್ನು ನವೆಂಬರ್ ತಿಂಗಳ ಆರಂಭದಲ್ಲಿ ಚಿನ್ನದ ಬೆಲೆಯಲ್ಲಿ ಭಾರಿ ಪ್ರಮಾಣದ ಇಳಿಕೆಯಾಗಿ ಚಿನ್ನವನ್ನ ಕೊಂಡುಕೊಳ್ಳಲು ಜನರು ಚಿನ್ನದ ಅಂಗಡಿಗೆ ಸಾಲು ಸಾಲಾಗಿ ಬರುತ್ತಿದ್ದರು, ಆದರೆ ಡಿಸೆಂಬರ್ ತಿಂಗಳ ಆರಂಭದಲ್ಲಿ ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆಯಾಗಿದೆ.

ಹೌದು ಸ್ನೇಹಿತರೆ ನಿನ್ನೆಯಿಂದ ಚಿನ್ನದ ಬೆಲೆ ಏರಿಕೆಯತ್ತ ಮುಖ ಮಾಡಿದ್ದು ಜನರಿಗೆ ಮತ್ತೆ ಶಾಕ್ ಆಗಿದೆ, ಷೇರು ಮಾರುಕಟ್ಟೆ ಮತ್ತೆ ಕುಸಿತ ಕಂಡ ಕಾರಣ ಚಿನ್ನದ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಮತ್ತೆ ಏರಿಕೆಯತ್ತ ಮುಖ ಮಾಡಿದೆ. ಹಾಗಾದರೆ ಚಿನ್ನದ ಬೆಲೆ ಎಷ್ಟು ಏರಿಕೆಯಾಗಿದೆ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಚಿನ್ನದ ಬೆಲೆಯಲ್ಲಿ ಏರಿಕೆಯಾಗುತ್ತಿರುವುದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಹೌದು ಸ್ನೇಹಿತರೆ ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ ಕಂಡಿದೆ, ಷೇರು ಮಾರುಕಟ್ಟೆಯಲ್ಲಿ ದಿಡೀರ್ ಕುಸಿತ ಕಂಡ ಕಾರಣ ದೇಶಿಯ ಚಿನ್ನದ ಮಾರುಕಟ್ಟೆ ಮಲ್ಟಿ ಎಕ್ಸ್ಚೇಂಜ್ ಕಮಾಡಿಟಿಯಲ್ಲಿ ಚಿನ್ನದ ಬೆಲೆಯಲ್ಲಿ ಏರಿಕೆ ಕಂಡಿದೆ.

gold rate rise

ನವೆಂಬರ್ ತಿಂಗಳ ಕೊನೆಯಲ್ಲಿ 22 ಕ್ಯಾರೆಟ್ ನ ಒಂದು ಗ್ರಾಂ ಚಿನ್ನದ ಬೆಲೆ 3545 ರೂಪಾಯಿ ಆಗಿತ್ತು ಮತ್ತು 22 ಕ್ಯಾರೆಟ್ ನ ಹತ್ತು ಗ್ರಾಂ ಚಿನ್ನದ ಬೆಲೆ 35450 ರೂಪಾಯಿ ಆಗಿತ್ತು. ಇನ್ನು 24 ಕ್ಯಾರೆಟ್ ನ ಒಂದು ಗ್ರಾಂ ಚಿನ್ನದ ಬೆಲೆ 3740 ರೂಪಾಯಿ ಮತ್ತು ಹತ್ತು ಗ್ರಾಮ ಚಿನ್ನದ ಬೆಲೆ 37400 ರೂಪಾಯಿ ಆಗಿತ್ತು. ಡಿಸೆಂಬರ್ ತಿಂಗಳ ಆರಂಭದಲ್ಲಿ ಚಿನ್ನದ ಬೆಲೆ ಏರಿಕೆಯತ್ತ ಮುಖ ಮಾಡಿದ್ದು ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಅಂತ ನಾವು ಹೇಳುತೀವಿ ಓದಿ, ಇಂದು 22 ಕ್ಯಾರೆಟ್ ನ ಒಂದು ಗ್ರಾಂ ಚಿನ್ನದ ಬೆಲೆ 3585 ರೂಪಾಯಿ ಆಗಿದೆ ಮತ್ತು ಹತ್ತು ಗ್ರಾಂ ಚಿನ್ನದ ಬೆಲೆ 35850 ರೂಪಾಯಿ ಆಗಿದೆ.

ಹೌದು ಸ್ನೇಹಿತರೆ ಚಿನ್ನದ ಬೆಲೆಯಲ್ಲಿ 40 ರೂಪಾಯಿ ಏರಿಕೆ ಆಗಿದ್ದು ಪ್ರತಿ ಹತ್ತು ಗ್ರಾಂ ಚಿನ್ನಕ್ಕೆ 400 ರೂಪಾಯಿ ಏರಿಕೆ ಆಗಿದೆ, ಇನ್ನು ಮುಂದಿನ ದಿನಗಳಲ್ಲಿ ಚಿನ್ನದ ಬೆಲೆಯಲ್ಲಿ ಇನ್ನಷ್ಟು ಏರಿಕೆ ಆಗಲಿದ್ದು 3800 ರ ಗಡಿಗೆ ತಲುಪುವ ಸಾಧ್ಯತೆ ಇದೆ ಎಂದು ತಜ್ಞರು ಅಭಿಪ್ರಾಯವನ್ನ ವ್ಯಕ್ತಪಡಿಸಿದ್ದಾರೆ. ಹೀಗೆ ಚಿನ್ನದ ಬೆಲೆ ಏರಿಕೆಯಾದರೆ ಮತ್ತೆ ಬಡವರಿಗೆ ಚಿನ್ನವನ್ನ ಕೊಂಡುಕೊಳ್ಳುವ ಕನಸು ಕನಸಾಗಿಯೇ ಉಳಿಯುತ್ತದೆ, ಸ್ನೇಹಿತರೆ ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆಯಾಗಿರುವುದರ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.

gold rate rise

Please follow and like us:
error0
http://karnatakatoday.in/wp-content/uploads/2019/12/gold-rate-is-rise-1024x576.jpghttp://karnatakatoday.in/wp-content/uploads/2019/12/gold-rate-is-rise-150x104.jpgeditorಎಲ್ಲಾ ಸುದ್ದಿಗಳುನಗರಬೆಂಗಳೂರುಮಂಗಳೂರುಸುದ್ದಿಜಾಲಸ್ನೇಹಿತರೆ ಕಳೆದ ನಾಲ್ಕು ಐದು ತಿಂಗಳುಗಳಿಂದ ರಾಜ್ಯದಲ್ಲಿ ಭಾರಿ ಸುದ್ದಿಯಾಗುತ್ತಿರುವ ವಿಷಯ ಅಂದರೆ ಅದೂ ಚಿನ್ನ ಮತ್ತು ಬೆಳ್ಳಿಯ ಬೆಲೆ ಎಂದು ಹೇಳಿದರೆ ತಪ್ಪಾಗಲ್ಲ. ಹೌದು ಸ್ನೇಹಿತರೆ ಚಿನ್ನದ ಬೆಲೆ ಗಗನಕ್ಕೆ ಏರಿ ಕೈಗೆ ಸಿಗದಂತೆ ಆಗಿದ್ದು ನಿಮಗೆ ಗೊತ್ತೇ ಇದೆ, ಆದರೆ ಕೆಲವು ಒಂದು ತಿಂಗಳಿನಿಂದ ಚಿನ್ನದ ಬೆಲೆಯಲ್ಲಿ ಸ್ವಲ್ಪ ಇಳಿಕೆಯಾಗಿ ಗ್ರಾಹಕರ ಮುಖದಲ್ಲಿ ಮಂದಹಾಸವನ್ನ ಮೂಡಿಸಿತ್ತು. ಇನ್ನು ನವೆಂಬರ್ ತಿಂಗಳ ಆರಂಭದಲ್ಲಿ ಚಿನ್ನದ ಬೆಲೆಯಲ್ಲಿ ಭಾರಿ...Film | Devotional | Cricket | Health | India