ಲಿಂಗೈಕ್ಯರಾದ ಶ್ರೀ ಶಿವಕುಮಾರ ಸ್ವಾಮಿಜಿಗಳ ಅಂತಿಮ ದರ್ಶನಕ್ಕಾಗಿ ತುಮಕೂರಿನ ಶ್ರೀಮಠದತ್ತ ಭಕ್ತ ಸಾಗರವೇ ಹರಿದು ಬರುತ್ತಿದ್ದು, ಅಂತಿಮ ದರ್ಶನಕ್ಕೆ ಭದ್ರತಾ ಕಾರಣಗಳಿಂದಾಗಿ ಪ್ರಧಾನಿ ಮೋದಿ ಗೈರಾಗಿದ್ದಾರೆ. ಸ್ವಾಮೀಜಿಗಳ ಅಂತಿಮ ದರ್ಶನ ಪಡೆಯಲು ಕಳೆದ ರಾತ್ರಿ ರಾಜ್ಯದ ವಿವಿಧ ಜಿಲ್ಲೆಗಳಿಂದ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭಕ್ತ ಸಾಗರವೇ ಹರಿದು ಬಂದಿದೆ. ಈ ವೇಳೆ ಜನ ಸಾಗರದಿಂದ ಮಹಿಳೆಯರು ವೃದ್ಧರು ಅವಕಾಶ ಸಿಗದೇ ಇಂದು ಬೆಳಗ್ಗೆ ಶ್ರೀಗಳ ದರ್ಶನಕ್ಕೆ ಮುಂದಾಗಿದ್ದಾರೆ. ರಾತ್ರಿ ವೇಳೆ ಬಂದಿರುವ ಭಕ್ತರು ಸಿದ್ದಗಂಗಾ ಮಠದ ಆವರಣದಲ್ಲಿಯೇ ಕೆಲಕಾಲ ವಿಶ್ರಾಂತಿಯನ್ನ ಪಡೆದರು.

ಇಂದು ಭಕ್ತರ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆಯಿದೆ. ಭಕ್ತರ ದಾಸೋಹಕ್ಕೆ ಯಾವುದೇ ಸಮಸ್ಯೆಯಾಗದೇ ಇರಲು ಮಠದ ಸುತ್ತಲೂ ಹತ್ತು ಕಡೆ ಪ್ರಸಾದ ವ್ಯವಸ್ಥೆ ಮಾಡಲಾಗಿದೆ. ಸಿದ್ದಗಂಗಾ ಶ್ರೀಗಳು ಅಂತ್ಯರಾಗುವ ಮುನ್ನ ಏಳು ದಿವಸದ ಹಿಂದೆ ಸೌರಮಂಡಲದಲ್ಲಿ ಆಗಿದ್ದ ಆ ಬದಲಾವಣೆ ಏನು ಗೊತ್ತಾ, ಹೇಳ್ತಿವಿ ಕೇಳಿ. ಏಳು ದಿನಗಳ ಹಿಂದೆ ಅಂದರೆ ದಿನಾಂಕ ಜನವರಿ 14 ಇದು ಸಂಕ್ರಮಣ ಕಾಲ.

ಸೂರ್ಯನು ಒಂದು ರಾಶಿಯಿಂದ ಮತ್ತೊಂದರತ್ತ ಕ್ರಮಿಸುವುದನ್ನು ಸಂಕ್ರಾಂತಿ ಎನ್ನುತ್ತಾರೆ. ಸೂರ್ಯ ಗ್ರಹವು ಒಂದು ರಾಶಿಯಲ್ಲಿ ಒಂದು ತಿಂಗಳ ಕಾಲ ಇರುತ್ತಾನೆ. ಸೂರ್ಯ, ಧನಸ್ಸು ರಾಶಿಯಿಂದ ಮಕರ ರಾಶಿಗೆ ಸೇರುವ ಸಮಯವನ್ನು ಮಕರ ಸಂಕ್ರಾಂತಿ ಎನ್ನುತ್ತಾರೆ. ಅಲ್ಲದೆ ಇದು ಉತ್ತರಾಯಣ ಆಗಿರುತ್ತದೆ ಇಂತಹ ದಿನ ತುಂಬಾನೇ ಶ್ರೇಷ್ಠವಾದದ್ದು ಜೂನ್ ಹದಿನೈದರವರೆಗೆ ಉತ್ತರಾಯಣವಿರುತ್ತದೆ.

ಶ್ರೀಕೃಷ್ಣನು ಗೀತೆಯಲ್ಲಿ ಆಯಣದಲ್ಲಿ ಉತ್ತರಾಯಣ ಅತಿ ಶ್ರೇಷ್ಠ ಎಂದು ಹೇಳಿರುವನು. ಸೌರಮಂಡಲದಲ್ಲಿ ಉತ್ತರಾಯಣ ಆರಂಭವಾದ ಒಂದು ವಾರದಲ್ಲಿಯೇ ಸ್ವಾಮಿಗಳು ಲಿಂಗೈಕ್ಯರಾಗಿದ್ದಾರೆ. ಇನ್ನೊಂದು ಬಹಳ ಪ್ರಮುಖ ವಿಚಾರ ಎಂದರೆ ಉತ್ತರಾಯಣದಲ್ಲಿ ಸ್ವರ್ಗದ ಬಾಗಿಲು ಸದಾ ತೆರೆದಿರುತ್ತದೆ ಎನ್ನುವುದು ಒಂದು ನಂಬಿಕೆ. ಹಾಗಾಗಿ ಈ ಘಳಿಗೆ ಬಹಳ ಅದ್ಭುತವಾದದ್ದು. ಸಮಯವಿದ್ದರೆ ತ್ರಿವಿಧ ದಾಸೋಹಿಗೆ ನಮೋ ನಮಃ ಎಂದು ತಿಳಿಸಿ.

Please follow and like us:
0
http://karnatakatoday.in/wp-content/uploads/2019/01/souramandala-change-1024x576.jpghttp://karnatakatoday.in/wp-content/uploads/2019/01/souramandala-change-150x104.jpgKarnataka Today's Newsಅಂಕಣಜ್ಯೋತಿಷ್ಯಬೆಂಗಳೂರುಲಿಂಗೈಕ್ಯರಾದ ಶ್ರೀ ಶಿವಕುಮಾರ ಸ್ವಾಮಿಜಿಗಳ ಅಂತಿಮ ದರ್ಶನಕ್ಕಾಗಿ ತುಮಕೂರಿನ ಶ್ರೀಮಠದತ್ತ ಭಕ್ತ ಸಾಗರವೇ ಹರಿದು ಬರುತ್ತಿದ್ದು, ಅಂತಿಮ ದರ್ಶನಕ್ಕೆ ಭದ್ರತಾ ಕಾರಣಗಳಿಂದಾಗಿ ಪ್ರಧಾನಿ ಮೋದಿ ಗೈರಾಗಿದ್ದಾರೆ. ಸ್ವಾಮೀಜಿಗಳ ಅಂತಿಮ ದರ್ಶನ ಪಡೆಯಲು ಕಳೆದ ರಾತ್ರಿ ರಾಜ್ಯದ ವಿವಿಧ ಜಿಲ್ಲೆಗಳಿಂದ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭಕ್ತ ಸಾಗರವೇ ಹರಿದು ಬಂದಿದೆ. ಈ ವೇಳೆ ಜನ ಸಾಗರದಿಂದ ಮಹಿಳೆಯರು ವೃದ್ಧರು ಅವಕಾಶ ಸಿಗದೇ ಇಂದು ಬೆಳಗ್ಗೆ ಶ್ರೀಗಳ ದರ್ಶನಕ್ಕೆ ಮುಂದಾಗಿದ್ದಾರೆ. ರಾತ್ರಿ...Kannada News