CM Siddaramaiah: ಪುಟ್ಟ ಬಾಲಕಿ ಬರೆದ ಪತ್ರಕ್ಕೆ ಫಿದಾ ಆದ ಸಿದ್ದರಾಮಯ್ಯ, ಅಷ್ಟಕ್ಕೂ ಪತ್ರದಲ್ಲಿ ಏನಿದೆ ಗೊತ್ತಾ…?
9ನೇ ತರಗತಿಯಲ್ಲಿ ಓದುತ್ತಿದ್ದಂತ ಬಾಲಕಿಯೊಬ್ಬಳು ಬರೆದ ಪತ್ರವನ್ನು ಸಾಮಾಜಿಕ ಮಾದ್ಯಮದಲ್ಲಿ ಹಚ್ಚಿಕೊಂಡ ಸಿಎಂ ಸಿದ್ದರಾಮಯ್ಯ.
9th Standard Student Wrote A Letter To CM Siddaramaiah: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ (Congress Government) ಅಸ್ತಿತ್ವಕ್ಕೆ ಬಂದ ನಂತರ ಸಿದ್ದರಾಮಯ್ಯ (Siddaaramaiah) ರವರು ಮುಖ್ಯಮಂತ್ರಿ ಆಗಿದ್ದು, ತದನಂತರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು ಕಾಣಬಹುದಾಗಿದೆ.
ಹಾಗೆ ಈಗಾಗಲೇ ಇದ್ದ ಯೋಜನೆಯಲ್ಲೂ ಬಾರಿ ಪ್ರಾಮಾಣದ ಬದಲಾವಣೆ ತಂದಿದ್ದಾರೆ. 01 ನೇ ತರಗತಿಯಿಂದ 8ನೇ ತರಗತಿವರೆಗೆ ನೀಡಲಾಗುತ್ತಿದ್ದಂತ ಮೊಟ್ಟೆಯನ್ನು ಈಗ 10ನೇ ತರಗತಿವರೆಗೆ ವಿಸ್ತರಿಸಲಾಗಿದೆ. ಈ ನಿರ್ಧಾರಕ್ಕೆ ಸಂಭಂದಿಸಿದಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಪುಟಾಣಿ ಬಾಲಕಿಯೊಬ್ಬಳು ಪತ್ರ ಬರೆದಿದ್ದು, ಆ ಪತ್ರವನ್ನು ಓದಿದ ಸಿಎಂ ಸಿದ್ದರಾಮಯ್ಯ ಸಂತೋಷವನ್ನು ವ್ಯಕ್ತ ಪಡಿಸಿದ್ದಾರೆ.

ಪತ್ರವನ್ನು ಸಾಮಾಜಿಕ ಮಾದ್ಯಮದಲ್ಲಿ ಹಂಚಿಕೊಂಡ CM
ವಿದ್ಯಾರ್ಥಿಗಳಿಗೆ ನೀಡಿದ ಮೊಟ್ಟೆ ವಿಸ್ತರಣೆಯ ಬಗ್ಗೆ 9ನೇ ತರಗತಿಯಲ್ಲಿ ಓದುತ್ತಿದ್ದಂತ ಬಾಲಕಿಯೊಬ್ಬಳು ಪತ್ರ ಬರೆದಿದ್ದು, ಬರೆದಂತ ಪತ್ರವನ್ನು ಸಿಎಂ ಸಿದ್ಧರಾಮಯ್ಯ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ.
ಅಲ್ಲದೇ ನಾಡಿನ ಪ್ರತಿ ವಿದ್ಯಾರ್ಥಿಗೂ ಪೌಷ್ಟಿಕ ಆಹಾರ ದೊರಕಬೇಕು, ಯಾರೊಬ್ಬರೂ ಈ ಅವಕಾಶದಿಂದ ವಂಚಿತರಾಗಬಾರದು ಎಂಬ ಸದಾಶಯದೊಂದಿಗೆ ಈ ಮೊದಲು 1 ರಿಂದ 8ನೇ ತರಗತಿಯ ವರೆಗಿನ ಮಕ್ಕಳಿಗೆ ವಿತರಿಸಲಾಗುತ್ತಿದ್ದ ಮೊಟ್ಟೆಯನ್ನು ನಮ್ಮ ಸರ್ಕಾರವು 9 ಮತ್ತು 10ನೇ ತರಗತಿಗೂ ವಿಸ್ತರಿಸಿದೆ ಎಂದಿದ್ದಾರೆ. ಹಾಗೆಯೇ ತನ್ನಆರೋಗ್ಯ ಕಾಳಜಿಯ ಅಪ್ಪುಗೆ ಪತ್ರವನ್ನು ಕಂಡು ಬೆರಗಾಗಿ, ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ.
ನಾಡಿನ ಪ್ರತಿ ವಿದ್ಯಾರ್ಥಿಗೂ ಪೌಷ್ಟಿಕ ಆಹಾರ ದೊರಕಬೇಕು, ಯಾರೊಬ್ಬರೂ ಈ ಅವಕಾಶದಿಂದ ವಂಚಿತರಾಗಬಾರದು ಎಂಬ ಸದಾಶಯದೊಂದಿಗೆ ಈ ಮೊದಲು 1 ರಿಂದ 8ನೇ ತರಗತಿಯ ವರೆಗಿನ ಮಕ್ಕಳಿಗೆ ವಿತರಿಸಲಾಗುತ್ತಿದ್ದ ಮೊಟ್ಟೆಯನ್ನು ನಮ್ಮ ಸರ್ಕಾರವು 9 ಮತ್ತು 10ನೇ ತರಗತಿಗೂ ವಿಸ್ತರಿಸಿದೆ. ನಮ್ಮ ಈ ವಿದ್ಯಾರ್ಥಿಸ್ನೇಹಿ ನಿರ್ಧಾರದ ಬಗ್ಗೆ ಆಶಾ ನೆಹರು ಪಾಟೀಲ್ ಎಂಬ… pic.twitter.com/TR4VB5Jljy
— CM of Karnataka (@CMofKarnataka) September 8, 2023
CM ಅವರ ಯೋಜನೆಯ ಸಾರ್ಥಕತೆಯ ಹೇಳಿಕೆ
ನಮ್ಮ ಈ ವಿದ್ಯಾರ್ಥಿಸ್ನೇಹಿ ನಿರ್ಧಾರದ ಬಗ್ಗೆ ಆಶಾ ನೆಹರು ಪಾಟೀಲ್ ಎಂಬ ಪುಟ್ಟ ಬಾಲಕಿಯೊಬ್ಬಳು ನನಗೆ ಪತ್ರ ಬರೆದು ತನ್ನ ಸಂತಸ ಹಂಚಿಕೊಂಡಿದ್ದಾಳೆ ಮಾತ್ರವಲ್ಲ, ಇಂತಹ ಕಾರ್ಯಕ್ರಮಗಳನ್ನು ನೀಡುತ್ತಿರುವ ತಾವು ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಅಕ್ಕರೆಯಿಂದ ಸಲಹೆ ನೀಡಿದ್ದಾಳೆ ಎಂದು ಹೇಳಿದ್ದಾರೆ.
ಪುಟ್ಟ ಬಾಲಕಿಯ ಪತ್ರವು ಈ ಯೋಜನೆಯನ್ನು ರೂಪಿಸಿ ಜಾರಿಗೊಳಿಸಿದ ನನ್ನ ಉದ್ದೇಶವನ್ನು ಸಾರ್ಥಕವಾಗಿಸಿತು. ಇಂಥ ಮುಗ್ಧ ಮಕ್ಕಳ ಭವಿಷ್ಯವನ್ನು ಉಜ್ವಲವಾಗಿಸುವುದು ನಮ್ಮ ಸರ್ಕಾರದ ಪ್ರಮುಖ ಉದ್ದೇಶವಾಗಿದೆ. ಶಾಂತಿ, ಸೌಹಾರ್ದತೆಯ ಸಮೃದ್ಧ ಕರ್ನಾಟಕ ನಿರ್ಮಾಣದ ನನ್ನ ಸಂಕಲ್ಪಕ್ಕೆ ಈ ದಿನ ಇನ್ನಷ್ಟು ಬಲ ಬಂದಿದೆ ಎಂದು ತಿಳಿಸಿದ್ದಾರೆ ಮತ್ತು ಈ ರೀತಿಯಾಗಿ CM ತನ್ನ ಖುಷಿಯನ್ನು ವ್ಯಕ್ತಪಡಿಸಿದ್ದಾರೆ.