Akrama Sakrama: ಅಕ್ರಮ ಸಕ್ರಮ ಯೋಜನೆಯ ಕುರಿತಂತೆ ಮಹತ್ವದ ಘೋಷಣೆ ಮಾಡಿದ ಸರ್ಕಾರ, ಬೇಗ ನಿಮ್ಮ ಹೆಸರಿಗೆ ಮಾಡಿಕೊಳ್ಳಿ.

ಸರ್ಕಾರಿ ಭೂಮಿಯಲ್ಲಿ ಸಾಗುವಳಿ ಮಾಡುವ ರೈತರಿಗೆ ಶೀಘ್ರದಲ್ಲಿ ಅಕ್ರಮ ಸಕ್ರಮದಡಿಯಲ್ಲಿ ಸಾಗುವಳಿ ಚೀಟಿ ದೊರೆಯಲಿದೆ.

Akrama Sakrama Latest Update 2023: ರೈತರೇ ನೀವು ಸರಕಾರಿ ಜಮೀನಿನಲ್ಲಿ ಸಾಗುವಳಿ ಮಾಡುತ್ತಿದ್ದೀರಾ ಹಾಗಿದ್ದಲ್ಲಿ ಈ ಸುದ್ದಿ ನಿಮಗೆ ಬಹಳ ಉಪಯುಕ್ತಕರ ಆಗಲಿದೆ . ಹಲವು ವರ್ಷಗಳಿಂದ ಸರ್ಕಾರಿ ಭೂಮಿಯಲ್ಲಿ ಕೆಲಸ ಮಾಡಿ ನಿಮಗೂ ಬೇಜಾರಾಗಿರುತ್ತದೆ.

ಈಗ ಸರ್ಕಾರದ ಭೂಮಿ ನಿಮ್ಮ ಸ್ವಂತ ಭೂಮಿ ಆಗುವ ಸಮಯ ಬಂದಿದೆ, ನೀವು ಇಷ್ಟು ಸಮಯ ಕಷ್ಟ ಪಟ್ಟಿದ್ದಕ್ಕೂ ಪ್ರತಿಫಲ ಸಿಗಲಿದೆ. ಸರ್ಕಾರಿ ಜಮೀನಿನಲ್ಲಿ ಕೆಲಸ ಮಾಡುತ್ತಿರುವ ರೈತರಿಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಭರ್ಜರಿ ಸಿಹಿಸುದ್ದಿ ನೀಡಿದ್ದಾರೆ, ಅಕ್ರಮ-ಸಕ್ರಮ ಭೂಮಿಗೆ ಸಾಗುವಳಿ ಚೀಟಿ ನೀಡಲು ಸಲ್ಲಿಕೆಯಾಗಿರುವ ಅರ್ಜಿಗಳನ್ನು ಮುಂದಿನ ಒಂದು ವರ್ಷದಲ್ಲಿ ವಿಲೇವಾರಿ ಆಗಬೇಕು ಎನ್ನಲಾಗಿದೆ .

Akrama Sakrama
Image Credit: Original Source

ಅಕ್ರಮ-ಸಕ್ರಮ ಭೂಮಿಗೆ ಸಾಗುವಳಿ ಚೀಟಿ ನೀಡುವ ಕುರಿತು ಆದೇಶ

ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ನಗರದ ಜಿಲ್ಲಾಡಳಿತದ ಸಭಾಂಗಣದಲ್ಲಿ ಮಂಗಳವಾರ ನಡೆದ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಅವರು,ಅಕ್ರಮ-ಸಕ್ರಮಗೊಳಿಸಿ ಸಾಗುವಳಿ ಚೀಟಿ ನೀಡಲು ಕೋರಿ ಬಳ್ಳಾರಿಯಲ್ಲಿ ನಮೂನೆ 50, 53, 57ಕ್ಕೆ ಸಂಬಂಧಿಸಿದಂತೆ ಸಾವಿರಾರು ಅರ್ಜಿಗಳು ಸಲ್ಲಿಕೆಯಾಗಿವೆ. ಸುಮಾರು 25,000 ಅರ್ಜಿಗಳು ನಮೂನೆ 53ರ ಅಡಿಯಲ್ಲೇ ಬಾಕಿ ಇವೆ. ನಮೂನೆ 53 ರ ಅರ್ಜಿಯನ್ನು 1998ರಲ್ಲೇ ಕರೆಯಲಾಗಿತ್ತು.

25 ವರ್ಷ ಆದ್ರೂ ಈ ಅರ್ಜಿಗಳು ಇನ್ನೂ ವಿಲೇವಾರಿ ಆಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ಅವರು, ನಮೂನೆ 57 ರ ಅರ್ಜಿಯೂ ಸೇರಿ ಜಿಲ್ಲೆಯಲ್ಲಿ ಒಟ್ಟಾರೆ 1 ಲಕ್ಷಕ್ಕೂ ಅಧಿಕ ಅರ್ಜಿಗಳು ಸಲ್ಲಿಕೆಯಾಗಿವೆ. ಮುಂದಿನ ಒಂದು ವರ್ಷದಲ್ಲಿ ಈ ಎಲ್ಲಾ ಅರ್ಜಿಗಳೂ ವಿಲೇವಾರಿ ಆಗಬೇಕು. ಪ್ರತಿ ವಾರದ ಪ್ರಗತಿಯು ಆಪ್‍ನಲ್ಲಿ ಅಪ್‍ಡೇಟ್ ಆಗಬೇಕು. ಇಲ್ಲದಿದ್ದರೆ ತಹಶೀಲ್ದಾರ್ ಗಳಿಗೆ ನೋಟೀಸ್ ನೀಡಲಾಗುತ್ತದೆ ಎಂದು ಅಧಿಕಾರಿಗಳನ್ನು ಸಚಿವ ಕೃಷ್ಣ ಬೈರೇಗೌಡ ಅವರು ಎಚ್ಚರಿಸಿದರು.

Akrama Sakrama Latest Update 2023
Image Credit: Original Source

ಶೀಘ್ರ ಪ್ರಕ್ರಿಯೆಗೆ ಈ ಆಪ್ ಸಹಕಾರಿಯಾಗಲಿದೆ

ಕೃಷಿಯೇತರ ಚಟುವಟಿಕೆಗಳಲ್ಲಿ ತೊಡಗಿರುವವರಿಗೂ ಸಹ ಸಾಗುವಳಿ ಚೀಟಿ ನೀಡುವುದು ಅಸಾಧ್ಯ. ಹೀಗಾಗಿ ಬಗರ್ ಹುಕುಂ ತಂತ್ರಾಶದ ಮೂಲಕ ಅಕ್ರಮ ಸಾಗುವಳಿ ಭೂಮಿಯಲ್ಲಿ ಕೃಷಿ ಅಥವಾ ಇನ್ಯಾವುದೇ ಚಟುವಟಿಕೆ ಬಗ್ಗೆ ಸ್ಯಾಟಲೈಟ್ ಇಮೇಜ್ ಮೂಲಕ ಮಾಹಿತಿ ಪಡೆದು ಅರ್ಜಿ ವಿಲೇವಾರಿ ಮಾಡುವುದು ನ್ಯಾಯಸಮ್ಮತವಾಗಲಿದೆ. ಅಲ್ಲದೆ, ಶೀಘ್ರ ಪ್ರಕ್ರಿಯೆಗೂ ಈ ಆಪ್ ಸಹಕಾರಿಯಾಗಲಿದೆ. ಈ ಆಪ್ ಸಹಾಯದೊಂದಿಗೆ ಅಧಿಕಾರಿಗಳು ತ್ವರಿತಗತಿಯಲ್ಲಿ ಬಹರ್ ಹುಕುಂ ಅರ್ಜಿ ವಿಲೇವಾರಿಗೊಳಿಸಬಹುದು ಶೀಘ್ರದಲ್ಲೇ ಈ ಆಪ್ ಅಧಿಕಾರಿಗಳ ಕೈಸೇರಲಿದೆ ಎಂದು ತಿಳಿಸಿದರು.

Leave A Reply

Your email address will not be published.