Akrama Sakrama: ಸರ್ಕಾರೀ ಜಾಗದಲ್ಲಿ ವಾಸ ಇರುವವರಿಗೆ ಮತ್ತು ವ್ಯವಸಾಯ ಮಾಡುವವರಿಗೆ ಗುಡ್ ನ್ಯೂಸ್, ಅಕ್ರಮ ಸಕ್ರಮಕ್ಕೆ ಅರ್ಜಿ ಆಹ್ವಾನ.
ಅನಧಿಕೃತ ಸಾಗುವಳಿ ಭೂಮಿ ಹೊಂದಿದ ರೈತರಿಗೆ ಭೂಮಿಯನ್ನು ಸಕ್ರಮ ಮಾಡಿಕೊಡುವ ಕುರಿತು ಕ್ರಮ.
Akrama Sakrama Latest Update 2023: ಹಲವು ವರ್ಷಗಳಿಂದ ಸಾಗುವಳಿ ಮಾಡಿಕೊಂಡು ಬರುತ್ತಿರುವ ರೈತರ ಸಾಗುವಳಿ ಭೂಮಿ ಇನ್ನು ಅವರ ಹೆಸರಿಗೆ ಸಕ್ರಮ ಆಗಿಲ್ಲ.
ವಿಕಾಸ ಸೌಧದಲ್ಲಿ ಕಂದಾಯ ಇಲಾಖೆ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಸಚಿವರಿಗೆ ಬಗರ್ ಹುಕುಂ ತಂತ್ರಾಂಶ ಬಳಕೆ ಕುರಿತಾಗಿ ಪ್ರಾತ್ಯಕ್ಷಿಕೆ ತೋರಿಸಲಾಗಿದೆ. ಬಗರ್ ಹುಕುಂ ಸಾಗುವಳಿ ಭೂಮಿ ಶೀಘ್ರವೇ ಸಕ್ರಮಗೊಳಿಸಿ ಕೊಡುವಂತೆ ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಸಾಗುವಳಿ ಭೂಮಿಯನ್ನು ಬಗರ್ ಹುಕುಂ ಕುಂತ್ರಾಂಶದ ಮೂಲಕ ಸಕ್ರಮಗೊಳಿಸುವ ಪ್ರಕ್ರಿಯೆ
ಸಾಗುವಳಿ ಭೂಮಿಯನ್ನು ಸಕ್ರಮ ಮಾಡುವ ಕುರಿತು ಭೂಪರಿಶೀಲನೆಗೆ ಬಗರ್ ಹುಕುಂ ತಂತ್ರಾಂಶವನ್ನು ಕಾರ್ಯಗತಗೊಳಿಸಬೇಕು. ಅನಧಿಕೃತ ಸಾಗುವಳಿ ಭೂಮಿಯನ್ನು ಬಗರ್ ಹುಕುಂ ಕುಂತ್ರಾಂಶದ ಮೂಲಕ ಸಕ್ರಮಗೊಳಿಸುವ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ನಮೂನೆ ಸಂಖ್ಯೆ 50, 53, 57 ಅರ್ಜಿಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಅವುಗಳನ್ನು ನ್ಯಾಯಯುತವಾಗಿ ವಿಲೇವಾರಿ ಮಾಡಬೇಕು. ಅನಧಿಕೃತವಾಗಿ ಸಾಗುವಳಿದಾರರು ಕೃಷಿಯಲ್ಲಿ ತೊಡಗಿದ್ದರೆ ಆಕ್ರಮ ಸಕ್ರಮ ಅಡಿಯಲ್ಲಿ ಸಾಗುವಳಿ ಚೀಟಿ ನೀಡಲು ಇಲಾಖೆ ಬದ್ಧವಾಗಿದೆ. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಹೇಳಿದ್ದಾರೆ.