Anna Bhagya: ಅಕ್ಟೋಬರ್ ತಿಂಗಳ ಅನ್ನಭಾಗ್ಯ ಹಣ ಬಂದಿದೆಯಾ…? ಈ ರೀತಿಯಾಗಿ ಚೆಕ್ ಮಾಡಿಕೊಳ್ಳಿ.
ಅನ್ನಭಾಗ್ಯ ಹಣ ಬಂದಿದೆಯಾ ಎಂದು ಈ ರೀತಿಯಾಗಿ ಚೆಕ್ ಮಾಡಿಕೊಳ್ಳಿ.
Anna Bhagya Latest Update: ಕರ್ನಾಟಕದ ಮುಖ್ಯಮಂತ್ರಿ ಸಿದ್ಧರಾಮಯ್ಯ (Siddaramaiah) ನೇತೃತ್ವದ ಕಾಂಗ್ರೆಸ್ ಸರ್ಕಾರವು ಅನ್ನ ಭಾಗ್ಯ ಯೋಜನೆಯಡಿಯಲ್ಲಿ ಫಲಾನುಭವಿಗಳಿಗೆ 10 ಕೆಜಿ ಅಕ್ಕಿಯನ್ನು ನೀಡಲು ನಿರ್ಧಾರ ಮಾಡಿತ್ತು. ಆದರೆ ಅದಾದ ಬಳಿಕ ಅಕ್ಕಿ ಕೊರತೆಯ ಬೆನ್ನಲ್ಲೇ ಯೋಜನೆಯಲ್ಲಿ ಕೊಂಚ ಬದಲಾವಣೆಯನ್ನು ಸರ್ಕಾರ ಮಾಡಿದ್ದು, 5 ಕೆಜಿ ಅಕ್ಕಿಯನ್ನು ನೀಡಲಾಗುವುದು ಎಂದು ಹೇಳಿದೆ.
ಉಳಿದ 5 ಕೆಜಿಯ ಅಕ್ಕಿಯ ಬದಲಾಗಿ ಪ್ರತಿ ಕೆಜಿಗೆ 34 ರೂಪಾಯಿಗಳ ದರದಲ್ಲಿ ನಗದನ್ನು ಸರ್ಕಾರ ಪಾವತಿಸುತ್ತಿದೆ. ಯೋಜನೆಯಡಿ ಫಲಾನುಭವಿಗಳ ಮೊತ್ತವನ್ನು ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡುವುದನ್ನು ಸೋಮವಾರ, ಜುಲೈ 10, 2023 ರಿಂದ ಪ್ರಾರಂಭಿಸಿದೆ. ಈಗಾಗಲೇ ಸೆಪ್ಟೆಂಬರ್ ತಿಂಗಳ ಮೊತ್ತ ಲಭ್ಯವಾಗಿದೆ. ಈಗ ಅಕ್ಟೋಬರ್ ತಿಂಗಳ ಮೊತ್ತ ಜಮಾ ಆಗಬೇಕಾಗಿದೆ.

ಅನ್ನಭಾಗ್ಯ ಯೋಜನೆ ಆರಂಭ
ಐದು ಯೋಜನೆಗಳ ಪೈಕಿ ಅನ್ನಭಾಗ್ಯ ಯೋಜನೆ ಕೂಡ ಒಂದಾಗಿದೆ. ರಾಜ್ಯದಲ್ಲಿ ಜುಲೈ 2013 ರಿಂದ ‘ಅನ್ನಭಾಗ್ಯ’ ಯೋಜನೆಯನ್ನು ಸಿಎಂ ಸಿದ್ಧರಾಮಯ್ಯ ಜಾರಿಗೆ ತಂದಿದ್ದಾರೆ. ಅನ್ನಭಾಗ್ಯ ಯೋಜನೆ ಅಡಿಯಲ್ಲಿ 2015 ರಿಂದ ಅರ್ಹ ಬಿಪಿಎಲ್ ಏಕ ಸದಸ್ಯ ಕುಟುಂಬಗಳಿಗೆ 10 ಕೆ.ಜಿ, ದ್ವಿ ಸದಸ್ಯ ಕುಟುಂಬಗಳಿಗೆ 20 ಕೆ.ಜಿ, 3 ಮತ್ತು ಹೆಚ್ಚಿನ ಸದಸ್ಯರನ್ನು ಹೊಂದಿರುವ ಕುಟುಂಬಗಳಿಗೆ 30 ಕೆ.ಜಿ ಆಹಾರ ಧಾನ್ಯವನ್ನು ಪ್ರತಿ ಕೆಜಿಗೆ ಒಂದು ರೂಪಾಯಿಯಂತೆ ಹಂಚಿಕೆಯನ್ನು ಮಾಡಲಾಗುತ್ತಿತ್ತು.
ಅನ್ನ ಭಾಗ್ಯ ಯೋಜನೆಯ ಡಿಬಿಟಿ ಸ್ಟೇಟಸ್ ಪರಿಶೀಲಿಸುವ ವಿಧಾನ
ಮೊದಲು ಕರ್ನಾಟಕ ಆಹಾರ ಇಲಾಖೆಯ ಅಧಿಕೃತ ವೆಬ್‌ಸೈಟ್ https://ahara.kar.nic.in/ಗೆ ಭೇಟಿ ನೀಡಿ, ಹೋಮ್‌ಪೇಜ್‌ನಲ್ಲಿ ಇ-ಸೇವೆಗಳ ಟ್ಯಾಬ್ ಅನ್ನು ಕ್ಲಿಕ್ ಮಾಡ, ಈ ಡಿಬಿಟಿ ಸ್ಟೇಟಸ್ ಲಿಂಕ್ ಅನ್ನು ಕ್ಲಿಕ್ ಮಾಡಿ, ತಿಂಗಳು, ವರ್ಷವನ್ನು ಆಯ್ಕೆ ಮಾಡಿ. ನಿಮ್ಮ ಪಡಿತರ ಚೀಟಿ ಸಂಖ್ಯೆ (ಆರ್‌ಸಿ ಸಂಖ್ಯೆ) ನಮೂದಿಸಿ ಮತ್ತು continue ಕ್ಲಿಕ್ ಮಾಡಿ, ಅನ್ನ ಭಾಗ್ಯ ಅಡಿಯಲ್ಲಿ ನಿಮ್ಮ ಡಿಬಿಟಿ ಸ್ಟೇಟಸ್ ಪರದೆಯ ಮೇಲೆ ಕಾಣಲಿದೆ.

Onlineprosess
ಬರಪೀಡಿತ ತಾಲೂಕುಗಳಲ್ಲಿ ಅಕ್ಕಿ ನೀಡಲು ಸರ್ಕಾರ ಚಿಂತನೆ
ಕರ್ನಾಟಕ ಸರ್ಕಾರವು ಅನ್ನ ಭಾಗ್ಯ ಯೋಜನೆಯಡಿ ಫಲಾನುಭವಿಗಳಿಗೆ ಧನಸಹಾಯವನ್ನು ನೀಡುವ ಬದಲಾಗಿ ಬರಪೀಡಿತ ಎಂದು ಗೊತ್ತುಪಡಿಸಿದ ತಾಲ್ಲೂಕುಗಳಲ್ಲಿ 5 ಕೆಜಿ ಅಕ್ಕಿಯನ್ನು ವಿತರಿಸಲು ಯೋಜಿಸುತ್ತಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ಇತ್ತೀಚೆಗೆ ಹೇಳಿದರು.
ಸರ್ಕಾರ ಬರ ಪೀಡಿತ ತಾಲ್ಲೂಕುಗಳ ಪಟ್ಟಿಯನ್ನು ಅಂತಿಮಗೊಳಿಸಿದ ನಂತರ ಅಕ್ಕಿ ವಿತರಣೆಯನ್ನು ಪ್ರಾರಂಭಿಸಲಾಗುವುದು ಎಂದು ಮುನಿಯಪ್ಪ ಹೇಳಿದರು. ಪ್ರಸ್ತುತ, ಸಾಕಷ್ಟು ಅಕ್ಕಿ ದಾಸ್ತಾನು ಇಲ್ಲದ ಕಾರಣ, ಸರ್ಕಾರವು ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭರವಸೆ ನೀಡಿದಂತೆ ಹೆಚ್ಚುವರಿ 5 ಕೆಜಿ ಅಕ್ಕಿಯ ಬದಲಿಗೆ ಫಲಾನುಭವಿಗಳಿಗೆ ಹಣಕಾಸು ನೆರವನ್ನು ನೀಡುತ್ತಿದೆ.