Govt Employees: ಪ್ರತಿನಿತ್ಯ ಕೆಲಸಕ್ಕೆ ಸರ್ಕಾರೀ ನೌಕರರಿಗೆ ಹೊಸ ನಿಯಮ, ಸರ್ಕಾರದ ಖಡಕ್ ಆದೇಶ.
ಸಮಯ ಪ್ರಜ್ಞೆ ಇಲ್ಲದ ಸರ್ಕಾರಿ ನೌಕರರಿಗೆ ಕಟ್ಟುನಿಟ್ಟಿನ ಕ್ರಮ.
Attend Office On Time: ಸರ್ಕಾರಿ ಕಚೇರಿಗಳಲ್ಲಿ (Government Office) ಅಧಿಕಾರಿಗಳ ಸಮಯ ಪ್ರಜ್ಞೆಯ ಬಗ್ಗೆ ಸಾರ್ವಜನಿಕರು ಸರಿಯಾಗಿ ಹೇಳುತ್ತಾರೆ. ಯಾಕೆಂದರೆ ಹೆಚ್ಚಿನ ಅಧಿಕಾರಿಗಳಲ್ಲಿ ಸಮಯಕ್ಕೆ ಸರಿಯಾಗಿ ಕರ್ತವ್ಯಕ್ಕೆ ಹಾಜರಾಗುವವರ ಸಂಖ್ಯೆ ಕಡಿಮೆ. ಅಷ್ಟೇ ಅಲ್ಲದೆ ಅನವಶ್ಯಕ ಕಾರಣಗಳನ್ನು ನೀಡಿ ಸಾರ್ವಜನಿಕರ ಸಮಯ ಹಾಳುಮಾಡುತ್ತಾರೆ.
ಹಾಗಾಗಿ ನಿಗದಿತ ವೇಳೆಯಲ್ಲಿ ಕಚೇರಿಗೆ ಹಾಜರಾಗುವ, ಕಚೇರಿ ಸಮಯದಲ್ಲಿ ಅನವಶ್ಯಕವಾಗಿ ಹೊರಗೆ ಓಡಾಡುವ ಸಿಬ್ಬಂದಿಗಳ ವಿರುದ್ದ ಕಠಿಣ ಕ್ರಮಕ್ಕೆ ರಾಜ್ಯ ಸರ್ಕಾರ ಮುಂದಾಗಿದ್ದು,ನಿಗದಿತ ವೇಳೆಯಲ್ಲಿ ಕಚೇರಿಗೆ ಹಾಜರಾಗಿ ಅಂತ ಕಂದಾಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಟಾರಿಯಾ ಅವರು ಆದೇಶ ಹೊರಡಿಸಿದ್ದಾರೆ.
ಸಮಯಕ್ಕೆ ಸರಿಯಾಗಿ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿಗಳು
ರಾಜೇಂದರ್ ಕುಮಾರ್ ಕಟಾರಿ ಅವರು ಆದೇಶದಲ್ಲಿ ಉಲ್ಲೇಖ ಮಾಡಿರುವಂತೆ ನಿಗಧಿತ ವೇಳೆಯಲ್ಲಿ ಕಚೇರಿಗೆ ಹಾಜರಾಗುವ ಬಗ್ಗೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಕಂದಾಯ ಇಲಾಖೆಯಲ್ಲಿ ಹಲವಾರು ಬಾರಿ ಕಂದಾಯ ಇಲಾಖೆಯ ಅಧೀನ ಶಾಖೆಗಳಿಗೆ ನಾನು ಖುದ್ದಾಗಿ ಪೂರ್ವಾಹ್ನ 10.45 ಗಂಟೆಗೆ ತಪಾಸಣೆಗೆಂದು ಭೇಟಿ ನೀಡಿದಾಗಲೆಲ್ಲ ಶಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಕರ್ತವ್ಯಕ್ಕೆ ಇನ್ನೂ ಹಾಜರಾಗದೆ ಇರುವುದು, ಅಲ್ಲದೇ ಸಾಯಂಕಾಲ ಕಚೇರಿ ತುರ್ತು ಕೆಲಸ ನಿರ್ವಹಣೆಗಾಗಿ ಸಿಬ್ಬಂದಿಗಳನ್ನು ಕರದಾಗಲೂ ಕಚೇರಿಯಿಂದ ಅತೀ ಬೇಗ ನಿರ್ಗಮಿಸಿರುವುದು ಕಂಡು ಬಂದಿರುತ್ತದೆ. ಇದರಿಂದಾಗಿ ಕಚೇರಿ ಕೆಲಸಕ್ಕೆ ಅಡಚಣೆಯುಂಟಾಗುತ್ತಿರುತ್ತದೆ.
ನಿಯಮ ಉಲ್ಲಂಘಿಸಿದವರ ವಿರುದ್ಧ ಕಠಿಣಕ್ರಮ
ಕಚೇರಿ ವೇಳೆಯಲ್ಲಿ ಸಾರ್ವಜನಿಕರು ಟಪಾಲು/ಕಡತ ಚಲನವಲನ ವಿಚಾರಣೆಗಾಗಿ ಬಂದಾಗ ವಿನಾಕಾರಣ ಅವರೊಂದಿಗೆ ಕಾಲಹರಣ ಮಾಡುತ್ತಿರುವುದು, ಗಂಟೆಗಟ್ಟಲೆ ಟೀ/ಕಾಫಿ/ಉಪಹಾರಕ್ಕೆಂದು ಕಚೇರಿ ಬಿಟ್ಟು ಹೋಗುವುದು, ಸಂತೆ ಬೀದಿಗಳಲ್ಲಿ ಓಡಾಡುತ್ತಿರುವುದು ಮುಂತಾದವುಗಳು ನನ್ನ ಗಮನಕ್ಕೆ ಬಂದಿದ್ದು, ಇನ್ನುಮುಂದೆ ಈ ರೀತಿ ಪುನರಾವರ್ತನೆಯಾದಲ್ಲಿ ಅಂತಹ ನೌಕರರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು.
ಕಂದಾಯ ಇಲಾಖೆಯ ಎಲ್ಲಾ ನೌಕಕರು ಪ್ರತಿ ದಿನ ಕಚೇರಿಗೆ ಬೆಳ್ಳಿಗ್ಗೆ 10.30 ರೊಳಗಾಗಿ ಕಡ್ಡಾಯವಾಗಿ ಹಾಜರಿರುವುದು ಹಾಗೂ ಸಾಯಂಕಾಲ ಕಚೇರಿಯಿಂದ ತೆರಳುವಾಗ ತಮ್ಮ ಶಾಖೆಯ ಸಂಬಂಧಪಟ್ಟ ಜಂಟಿ/ಉಪ ಕಾರ್ಯದರ್ಶಿಯವರ ಅನುಮತಿ ಪಡೆದ ಕಚೇರಿಯಿಂದ ತೆರಳುವುದು. ಮೇಲ್ಕಂಡ ಸೂಚನೆಗಳನ್ನು ಕಂದಾಯ ಇಲಾಖೆಯ ಎಲ್ಲಾ ನೌಕರರು ಕಟ್ಟುನಿಟ್ಟಾಗಿ ಪಾಲಿಸುವುದು, ಇಲ್ಲವಾದಲ್ಲಿ ಅವರ ಮೇಲೆ ಸೂಕ್ತ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದ.