Health Insurance: BPL ಕಾರ್ಡ್ ಇದ್ದವರಿಗೆ ಕೇಂದ್ರ ಸರ್ಕಾರದಿಂದ 5 ಲಕ್ಷ ರೂ ಘೋಷಣೆ, ಇಂದೇ ಯೋಜನೆಗೆ ಸೇರಿಕೊಳ್ಳಿ.

BPL ಕಾರ್ಡ್‌ದಾರರಿಗೆ ಕೇಂದ್ರ ಸರ್ಕಾರದಿಂದ ಗುಡ್‌ ನ್ಯೂಸ್‌.

Ayushman Bhav Health: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಡಾ.ರಾಜ್‍ಕುಮಾರ್ ರಸ್ತೆಯ ಜಿಲ್ಲಾ ಆಸ್ಪತ್ರೆ ಆವರಣದ ಡಿ.ಎನ್.ಬಿ ಹಾಲ್‍ನಲ್ಲಿ ಬುಧವಾರ ಏರ್ಪಡಿಸಿದ್ದ ಸಮುದಾಯಕ್ಕೆ ಆರೋಗ್ಯ ಸೇವೆಗಳನ್ನು ಸಂಪೂರ್ಣವಾಗಿ ತಲುಪಿಸುವ ‘ಆಯುಷ್ಮಾನ್ ಭವ’ ಅಭಿಯಾನ ಶುಭಾರಂಭ ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆಯ ಉಪ ಮೇಯರ್ ಬಿ.ಜಾನಕಿ ಅವರು ಮಾತನಾಡಿದರು.

ಆರೋಗ್ಯವು ಎಲ್ಲಾರಿಗೂ ಪ್ರಮುಖವಾದುದು, ಪ್ರತಿ ಉದ್ದೇಶಿತ ಫಲಾನುಭವಿಗೂ ಆರೋಗ್ಯ ಯೋಜನೆಗಳನ್ನು ತಲುಪಿಸುತ್ತಿದ್ದು, ಪ್ರತಿಯೊಬ್ಬರೂ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ಹೇಳಿದರು.

5 lakh health insurance for BPL card holders under Ayushman Bharat Yojana
Image Credit: bhaskar

ಪ್ರತಿಯೊಬ್ಬರೂ ಆರೋಗ್ಯ ಕುರಿತಾಗಿ ಜಾಗೃತಿ ಹೊಂದಬೇಕು. ಕೇಂದ್ರ ಮತ್ತು ರಾಜ್ಯ ಸರಕಾರದ ಆರೋಗ್ಯ ಸೇವೆಗಳನ್ನು ಎಲ್ಲರೂ ಪಡೆದುಕೊಳ್ಳಬೇಕು. ‘ಆಯುಷ್ಮಾನ್ ಭವ’ ಸಾರ್ವಜನಿಕ ಆರೋಗ್ಯ ಅಭಿಯಾನವಾಗಿದ್ದು, ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ ಸೇರಿದ ಜನರಿಗಾಗಿ ಸೆ.17 ರಿಂದ ಈ ಅಭಿಯಾನ ಪ್ರಾರಂಭವಾಗಲಿದೆ. ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳುವಂತೆ ಕೋರಿದರು.

ಹಲವು ರೋಗಗಳ ಬಗ್ಗೆ ಮಾಹಿತಿ ಹಾಗು ಚಿಕಿತ್ಯೆ :
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ.ರಮೇಶ್ ಬಾಬು ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಸೆ.17 ರಿಂದ ಪ್ರತಿ ಮಂಗಳವಾರ ಆರೋಗ್ಯ ತಪಾಸಣಾ ಶಿಬಿರಗಳನ್ನು ಗ್ರಾಮೀಣ ಭಾಗದಲ್ಲಿ ಹಮ್ಮಿಕೊಂಡು ರಕ್ತದೊತ್ತಡ, ಸಕ್ಕರೆ ಖಾಯಿಲೆ, ಮತ್ತು ಬಾಯಿ, ಸ್ಥನ, ಗರ್ಭಕೋಶದ ಕ್ಯಾನ್ಸರ್ ಗಳ ತಪಾಸಣೆಗೆ ಒತ್ತು ನೀಡಲಾಗುವುದು.

Notification from Center to apply for Ayushman Bharat Scheme 3.0
Image Credit: inextlive

ಇಲ್ಲಿಯವರೆಗೆ 17,92,727 ಜನರ ನೋಂದಣಿ ಮಾಡಿಸಲಾಗಿದ್ದು, ಇವರಲ್ಲಿ 30 ವರ್ಷ ಮೇಲ್ಪಟ್ಟ 6,70,047 ಮಹಿಳೆಯರ ತಪಾಸಣೆ ಮಾಡಲಾಗಿದೆ. ಅಲ್ಲದೆ ಕ್ಷಯರೋಗಿಗಳಿಗೆ ಚಿಕಿತ್ಸೆಯನ್ನು ಸಂಪೂರ್ಣವಾಗಿ ಒದಗಿಸುವ ಖಾತ್ರಿ ಕೈಗೊಳ್ಳಲಾಗುವುದು. ಹಾಗೂ ನೀಕ್ಷಯ ಮಿತ್ರದಡಿ ದಾನಿಗಳಿಂದ ಉಚಿತ ಪೌಷ್ಟಿಕ ಅಹಾರ ಕಿಟ್‍ಗಳನ್ನು ಒದಗಿಸಲಾಗುತ್ತಿದೆ ಪ್ರಸ್ತುತ 1450 ಕಿಟ್‍ಗಳನ್ನು ವಿತರಿಸಲಾಗಿದೆ ಎಂದು ಮಾಹಿತಿ ನೀಡಿದರು.

ಬಹಳಷ್ಟು ಜನತೆಗೆ ಅಂಗಾಂಗಗಳ ಅವಶ್ಯಕತೆ ಇರುವ ಹಿನ್ನಲೆಯಲ್ಲಿ ನಿರ್ದಿಷ್ಟ ಮಾನದಂಡಗಳ ಆಧಾರವಾಗಿಟ್ಟುಕೊಂಡು, ಅಂಗಾಂಗ ದಾನಕ್ಕೆ ಹೆಸರು ನೋಂದಣಿಗೆ ಜಾಗೃತಿ ನೀಡಲಾಗುವುದು. ಪ್ರಸ್ತುತ 84 ಜನರು ನೇತ್ರದಾನ ಮಾಡಿದ್ದಾರೆ ಎಂದು ತಿಳಿಸಿದ ಅವರು, ರಕ್ತದಾನ ಶಿಬಿರಗಳು ಪ್ರತಿಯೊಬ್ಬರಲ್ಲೂ ರಕ್ತದಾನದ ಅವಶ್ಯಕತೆಯ ಮಹತ್ವ ಸಾರಲೂ ಗ್ರಾಮ ಪಂಚಾಯತಿಗಳ ಸಹಕಾರದೊಂದಿಗೆ ಉಚಿತ ರಕ್ತದಾನ ಶಿಬಿರಗಳನ್ನು ಏರ್ಪಡಿಸಲಾಗುವುದು ಎಂದರು.

ಉಚಿತ ಚಿಕಿತ್ಯೆ ಹಾಗು ಸೌಲಭ್ಯ ಮಾಹಿತಿ:
ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮರಿಯಂಬಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಆಯುಷ್ಮಾನ್ ಕಾರ್ಡ್, ಎಬಿ-ಪಿಎಮ್‍ಜೆಎವೈ-ಆರ್‍ಕೆ ಕಾರ್ಡ್‍ಗಳ ಮೂಲಕ ಬಿಪಿಎಲ್ ಕುಟುಂಬಗಳಿಗೆ ವಾರ್ಷಿಕ 5 ಲಕ್ಷದ ವರೆಗೆ ಹಾಗೂ ಎಪಿಎಲ್ ಕುಟುಂಬಗಳಿಗೆ ವಾರ್ಷಿಕ 1.5 ಲಕ್ಷದವರೆಗೆ ಉಚಿತ ಚಿಕಿತ್ಸಾ ವೆಚ್ಚವನ್ನು ಸುಸಜ್ಜಿತ ಸರಕಾರಿ ಅಥವಾ ನೊಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸಾ ಸೌಲಭ್ಯ ನೀಡಲಾಗುವುದು. ಪ್ರಸ್ತುತ ಜಿಲ್ಲೆಯಲ್ಲಿ ಗ್ರಾಮ್-ಒನ್ ಹಾಗೂ ವಿವಿಧ ಸೇವಾ ಕೇಂದ್ರಗಳ ಮೂಲಕ 4,85,395 ಜನರ ನೊಂದಣಿ ಮಾಡಿಸಲಾಗಿದೆ ಎಂದು ತಿಳಿಸಿದರು.

In Ayushman Bharat Yojana, you will get insurance up to 5 lakhs
Image Credit: jagran

ಅಭಾ ಕಾರ್ಡ್ ಡಿಜಿಟಲ್ ಆರೋಗ್ಯ ದಾಖಲೀಕರಣ ಅಕೌಂಟ್ ಮೂಲಕ ಒಮ್ಮೆ ತಮ್ಮ ಹೆಸರಿನ ನೊಂದಣಿ ಮಾಡಿಸಿದಲ್ಲಿ ದೇಶದ ಯಾವುದೇ ಭಾಗದಲ್ಲಿ ಚಿಕಿತ್ಸೆಗೆ ತೆರಳಿದರೂ ಸಹ ಆರೋಗ್ಯದ ಮಾಹಿತಿ ಲಭ್ಯವಾಗುವುದು. ಪ್ರಸ್ತುತ ಜಿಲ್ಲೆಯಲ್ಲಿ 7,32,102 ಜನರ ನೊಂದಣಿ ಮಾಡಿಸಲಾಗಿದೆ. ಪ್ರಸ್ತುತ ಅಭಿನಯಾನದಲ್ಲಿ ಹೆಚ್ಚು ಒತ್ತು ನೀಡಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಜುಬೇರ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎನ್.ಬಸರೆಡ್ಡಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮರಿಯಂಬಿ.ವಿ.ಕೆ, ಜಿಲ್ಲಾ ಆರ್‍ಸಿಹೆಚ್ ಅಧಿಕಾರಿ ಡಾ.ಆರ್.ಅನೀಲ್ ಕುಮಾರ್, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಇಂದ್ರಾಣಿ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ.ಪೂರ್ಣಿಮಾ ಕಟ್ಟಿಮನಿ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅಧಿಕಾರಿ ಡಾ.ವೀರೇಂದ್ರ ಕುಮಾರ್, ಡಾ.ಗುರುನಾಥ್ ಚೌವ್ಹಾಣ್, ತಾಲೂಕು ಆರೋಗ್ಯಾಧಿಕಾರಿ ಡಾ.ಮೋಹನ ಕುಮಾರಿ ಸೇರಿದಂತೆ ನರ್ಸಿಂಗ್ ವಿದ್ಯಾರ್ಥಿಗಳು, ಆರೋಗ್ಯ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ರಾಷ್ಟ್ರಪತಿಯವರಿಂದ ಅಭಿಯಾನಕ್ಕೆ ಚಾಲನೆ
ದೇಶದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಗುಜರಾತ್‍ನ ರಾಜಭವನದಲ್ಲಿ ಆರೋಗ್ಯ ಇಲಾಖೆಯ ಒಂದೇ ಸೂರಿನಡಿ ಹಲವು ಕಾರ್ಯಕ್ರಮಗಳನ್ನು ಹೊಂದಿರುವ ‘ಆಯುಷ್ಮಾನ್ ಭವ’ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ.

Leave A Reply

Your email address will not be published.