Ayushman Card: ಇನ್ನುಮುಂದೆ ಅಯುಷ್ಮಾನ್ ಕಾರ್ಡ್ ಮಾಡಲು ಈ ದಾಖಲೆ ಅತ್ಯಗತ್ಯ, ಕೇಂದ್ರ ಸರ್ಕಾರದ ಆದೇಶ.
ಆಯುಷ್ಮಾನ್ ಕಾರ್ಡ್ ಗೆ ಅರ್ಜಿ ಹಾಕುವಾಗ ಈ ದಾಖಲೆಗಳ ಅಗತ್ಯವಿರುತ್ತದೆ.
Documents For Ayushman Card: ಕೇಂದ್ರ ಸರ್ಕಾರ (Central Government) ಅನೇಕ ರೀತಿಯ ಪ್ರಯೋಜನಕಾರಿ ಮತ್ತು ಕಲ್ಯಾಣ ಯೋಜನೆಗಳನ್ನು ನಡೆಸುತ್ತಿದೆ. ನಿರ್ಗತಿಕರಿಗೆ ಮತ್ತು ಬಡವರಿಗೆ ಸವಲತ್ತುಗಳನ್ನು ಒದಗಿಸುವುದು ಅವರ ಉದ್ದೇಶವಾಗಿದೆ. ಈ ಯೋಜನೆಗಳಲ್ಲಿ ಪ್ರಧಾನ ಮಂತ್ರಿ ಆಯುಷ್ಮಾನ್ ಭಾರತ್ (Ayushman Bharat) ಯೋಜನೆ ಕೂಡ ಒಂದಾಗಿದ್ದು ಈ ಯೋಜನೆಯಡಿಯಲ್ಲಿ ಅರ್ಹ ವ್ಯಕ್ತಿಗಳಿಗೆ ಆಯುಷ್ಮಾನ್ ಕಾರ್ಡ್‌ಗಳನ್ನು ವಿತರಿಸಲಾಗುತ್ತದೆ.
ಪ್ರತಿ ಕಾರ್ಡ್‌ದಾರರಿಗೆ 5 ಲಕ್ಷ ರೂಪಾಯಿಗಳವರೆಗೆ ವಿಮಾ ರಕ್ಷಣೆಯನ್ನು ನೀಡಲಾಗುತ್ತದೆ, ಅಂದರೆ, ಅಗತ್ಯವಿದ್ದರೆ, ನೀವು 5 ಲಕ್ಷದ ವರೆಗೆ ಉಚಿತ ಚಿಕಿತ್ಸೆಯನ್ನು ಪಡೆಯಬಹುದು. ಯೋಜನೆಯಡಿ ಅರ್ಹರಿಗೆ ಆಯುಷ್ಮಾನ್ ಗೋಲ್ಡನ್ ಕಾರ್ಡ್ ನೀಡಲಾಗುತ್ತಿದೆ.ಈ ಯೋಜನೆಯನ್ನು ಪಡೆಯಲು ಅರ್ಜಿ ಸಲ್ಲಿಸಬಹುದು ಹಾಗು ಕೆಲವು ದಾಖಲೆಗಳು ಈ ಯೋಜನೆಗೆ ಕಡ್ಡಾಯವಾಗಿದೆ.

ಆಯುಷ್ಮಾನ್ ಭಾರತ್ ಯೋಜನೆಗೆ ಈ ದಾಖಲೆಗಳು ಅವಶ್ಯಕ
ಪ್ರಧಾನ ಮಂತ್ರಿ ಆಯುಷ್ಮಾನ್ ಭಾರತ್ ಯೋಜನೆಗೆ ಅರ್ಜಿ ಹಾಕಲು ಬೇಕಾಗುವ ದಾಖಲೆಗಳು ಆಧಾರ್ ಕಾರ್ಡ್, ಪಡಿತರ ಚೀಟಿ, ಮೊಬೈಲ್ ನಂಬರ್ , ವಿಳಾಸ ಪುರಾವೆ. ಇಲ್ಲಿ ನಮೂದಿಸಲಾದ ದಾಖಲೆಗಳನ್ನು ನೀವು ಹೊಂದಿಲ್ಲದಿದ್ದರೆ, ಅಂತಹ ಪರಿಸ್ಥಿತಿಯಲ್ಲಿ ನೀವು ಅರ್ಜಿ ಸಲ್ಲಿಸಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಈ ದಾಖಲೆಗಳನ್ನು ಸಿದ್ಧವಾಗಿರಿಸಿಕೊಳ್ಳುವುದು ಕಡ್ಡಾಯವಾಗಿದೆ.

ಪ್ರಧಾನ ಮಂತ್ರಿ ಆಯುಷ್ಮಾನ್ ಭಾರತ್ ಯೋಜನೆಗೆ ಅರ್ಜಿ ಸಲ್ಲಿಸುವ ವಿಧಾನ
ಈ ಯೋಜನೆಗಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು, ಇದಕ್ಕಾಗಿ ರಾಷ್ಟ್ರೀಯ ಆರೋಗ್ಯ ಮಿಷನ್‌ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬೇಕು. ಹಾಗು ಈ ಯೋಜನೆಗೆ ಅರ್ಜಿ ಹಾಕುವ ಅರ್ಜಿದಾರನ ವಯಸ್ಸು 18 ವರ್ಷಕ್ಕಿಂತ ಹೆಚ್ಚಿರಬೇಕು. ಆನ್‌ಲೈನ್‌ನಲ್ಲಿ ಮಾತ್ರವಲ್ಲದೆ ಆಫ್‌ಲೈನ್‌ನಲ್ಲಿಯೂ ಆಯುಷ್ಮಾನ್ ಕಾರ್ಡ್‌ಗೆ ಅರ್ಜಿ ಸಲ್ಲಿಸಲು ಅವಕಾಶಗಳಿವೆ.