Bigg Boss 10: ಈ ಬಾರಿ ಬಿಗ್ ಬಾಸ್ ಗೆದ್ದವರಿಗೆ ಸಿಗುವ ಹಣವೆಷ್ಟು ಗೊತ್ತಾ…? ದೊಡ್ಡ ಮೊತ್ತದ ಬಹುಮಾನ.

ಈ ಸಲದ ಬಿಗ್ ಬಾಸ್ ವಿಜೇತರಿಗೆ ಸಿಗಲಿದೆ ಭಾರಿ ಮೊತ್ತದ ಬಹುಮಾನ.

Bigg Boss Kannada Season 10 Winning Prize Money: ಕಿರುತೆರೆ ಅತೀ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 10 (Bigg Boss Kannada 10) ಯಾವಾಗ ಪ್ರಾರಂಭ ಎನ್ನುವ ಪ್ರಶ್ನೆಗೆ ಈಗಾಗಲೇ ಉತ್ತರ ಸಿಕ್ಕಿದೆ. ಅಕ್ಟೋಬರ್ 8ರಿಂದ ‘ಬಿಗ್ ಬಾಸ್ ಕನ್ನಡ ಸೀಸನ್ 10’ ಶೋ ಶುರುವಾಗಲಿದೆ. ವಾಹಿನಿಯ ‘ಅನುಬಂಧ 2023’ ಅವಾರ್ಡ್ಸ್ ಸಮಾರಂಭದಲ್ಲಿ ಬಿಗ್ ಬಾಸ್ ಯಾವಾಗ ಶುರು ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ.

ಯಾರೆಲ್ಲಾ ಬಿಗ್ ಬಾಸ್ ಮನೆಯೊಳಗಡೆ ಹೋಗಲಿದ್ದಾರೆ ಎಂಬ ಪ್ರಶ್ನೆ ಕೇಳೋದು ಸಹಜ. ಮೊದಲ ಬಾರಿಗೆ ಬಿಗ್ ಬಾಸ್ ಮನೆ ಪ್ರವೇಶ ಮಾಡುವ ಮೊದಲ ಸ್ಪರ್ಧಿಯನ್ನು ಕಲರ್ಸ್ ವಾಹಿನಿ ರಿವೀಲ್ ಮಾಡಿದೆ. ಕಲರ್ಸ್ ಕನ್ನಡ (Colors Kannada) ವಾಹಿನಿ ಬಿಗ್ ಬಾಸ್ ಪ್ರಸಾರವಾಗುವ ಮುನ್ನ ನಡೆದ ಪತ್ರಿಕಾಗೋಷ್ಠಿಯಲ್ಲಿ ಹತ್ತು ಹಲವಾರು ವಿಷಯಗಳನ್ನು ಹಂಚಿಕೊಂಡಿತು.                                                                                     

bigg boss kannada Season 10
Image Credit: Vijaykarnataka

ಬಿಗ್ ಬಾಸ್ ನಲ್ಲಿ ಭಾಗವಹಿಸುವ ಸ್ಪರ್ಧಿಗಳ ಹೆಸರು ರಿವೀಲ್

ಬಿಗ್ ಬಾಸ್ ಮನೆಗೆ ಹೋಗುವ ಮುನ್ನವೇ ವಾಹಿನಿಯಾಗಲಿ, ಬಿಗ್ ಬಾಸ್ ಮನೆ ಪ್ರವೇಶ (Bigg Boss House) ಮಾಡುವ ಸ್ಪರ್ಧಿಗಳಾಗಲೀ ಯಾವುದೇ ಕಾರಣಕ್ಕೂ ಸ್ಪರ್ಧೆ ಮಾಡುವ ವಿಚಾರವನ್ನು ರಿವೀಲ್ ಮಾಡೋದಿಲ್ಲ. ಸ್ಪರ್ಧಿಗಳು ಯಾರು ಅನ್ನೋದು ಬಿಗ್ ಬಾಸ್ ಶೋ ಲಾಂಚ್ ಆಗುವ ದಿನವೇ ಗೊತ್ತಾಗುತ್ತದೆ. ಆದರೆ ಈ ಬಾರಿ ಮೊದಲ ಬಾರಿಗೆ ಸೋಶಿಯಲ್ ಮೀಡಿಯಾದಲ್ಲಿ ಸ್ಪರ್ಧಿ ಯಾರು ಅನ್ನೋದನ್ನು ಇದೀಗ ವಾಹಿನಿ ಹೇಳಿದೆ.

Bigg Boss Kannada Season 10 Winning Prize Money
Image Credit: Zeenews

ಈ ಸಲದ ವಿಜೇತರು ಬಾರಿ ಮೊತ್ತದ ಬಹುಮಾನ ಪಡೆಯಲಿದ್ದಾರೆ

ಸಹಜವಾಗಿ ಈ ಬಾರಿ ಗೆದ್ದವರಿಗೆ ಎಷ್ಟು ಮೊತ್ತದ ಬಹುಮಾನ (Prize) ಸಿಗಲಿದೆ ಎನ್ನುವ ಕುತೂಹಲ ಎಲ್ಲರದ್ದಾಗಿತ್ತು ಅದಕ್ಕೀಗ ಉತ್ತರ ಸಿಕ್ಕಿದೆ. ಪ್ರತಿ ಸಲವೂ ಬಿಗ್ ಬಾಸ್ ಗೆದ್ದವರಿಗೆ ಟ್ರೋಫಿ ಮತ್ತು ಭಾರೀ ಮೊತ್ತದ ಹಣವನ್ನೇ ಬಹುಮಾನವಾಗಿ ನೀಡಲಾಗುತ್ತದೆ. ಈ ಬಾರಿ ಬಿಗ್ ಬಾಸ್ ಗೆದ್ದವರಿಗೆ 50 ಲಕ್ಷ ರೂಪಾಯಿ ಬಹುಮಾನ ನೀಡಲಾಗುವುದು ಎಂದು ವಾಹಿನಿಯು ತಿಳಿಸಿದೆ. ಜೊತೆಗೆ ಇತರ ಬಹುಮಾನಗಳು ಕೂಡ ಮುಂದುವರೆಯಲಿವೆ.

Leave A Reply

Your email address will not be published.