Laptop Scheme: ರಾಜ್ಯ ಸರ್ಕಾರದಿಂದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್, ಇಂದೇ ಈ ರೀತಿಯಾಗಿ ಅರ್ಜಿ ಸಲ್ಲಿಸಿ.

ಉಚಿತ ಲ್ಯಾಪ್ ಟಾಪ್ ಪಡೆಯಲು ಉತ್ತಮ ಅವಕಾಶ ಬೇಗನೆ ಅರ್ಜಿ ಹಾಕಿ,

Free Laptop For PUC Students: ಆಧುನಿಕ ಕಾಲದಲ್ಲಿ ಕಲಿಕೆ ಜೊತೆ ಲ್ಯಾಪ್‌ಟಾಪ್(Laptop) ಅಥವಾ ಕಂಪ್ಯೂಟರ್ ಶಿಕ್ಷಣವು ಕೂಡ ಬೆರೆತು ಹೋಗಿದೆ. ರಾಜ್ಯದಲ್ಲಿ ಬಡ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದಲೇ ರಾಜ್ಯ ಸರ್ಕಾರ ವಿವಿಧ ಯೋಜನೆ ಜಾರಿಗೆ ತಂದಿದೆ. ಹಾಗೆಯೆ ಬಡ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ಕೊಳ್ಳುವುದು ಕಷ್ಟವಾಗಬಾರದು ಎಂಬ ಉದ್ದೇಶದಿಂದ ಸರ್ಕಾರ ವಿವಿಧ ಯೋಜನೆ ಜಾರಿಗೆ ತಂದಿದೆ. ಈ ಯೋಜನೆ ಅಡಿ ವಿದ್ಯಾರ್ಥಿಗಳು ಉಚಿತ ಲ್ಯಾಪ್‌ಟಾಪ್ ಪಡೆಯಬಹುದು. ಅರ್ಹ ವಿದ್ಯಾರ್ಥಿಗಳಿಗೆ ಈ ಯೋಜನೆ ಅಡಿಯಲ್ಲಿ ಲ್ಯಾಪ್‌ಟಾಪ್ ವಿತರಣೆ ಮಾಡಲಾಗುತ್ತಿದೆ. ಈ ಪೈಕಿ ಬಡ ವಿದ್ಯಾರ್ಥಿಗಳ ಕಲಿಕೆ ಹಾಗೂ ಭವಿಷ್ಯಕ್ಕೆ ಅನುಕೂಲ ಆಗುವ ರೀತಿ Free Laptop ಹಂಚಿಕೆ ಯೋಜನೆ ಜಾರಿಯಲ್ಲಿ ಇದೆ.

Free Laptop For PUC Students
Image Credit: PMmodiyojana

ಉಚಿತ ಲ್ಯಾಪ್‌ಟಾಪ್‌ಗೆ ಅರ್ಜಿ ಸಲ್ಲಿಕೆ
ಕಾರ್ಮಿಕ ಇಲಾಖೆ ವತಿಯಿಂದ ರಾಜ್ಯ ಕಟ್ಟಡ ಮತ್ತು ಇತರೆ ಕಾರ್ಮಿಕ ಕಲ್ಯಾಣ ಮಂಡಳಿಯ ನೋಂದಾಯಿತ, ಕಟ್ಟಡ ಕಾರ್ಮಿಕರ ಮಕ್ಕಳ ಪೈಕಿ 2023-24 ನೇ ಸಾಲಿನಲ್ಲಿ ವ್ಯಾಸಂಗವನ್ನು ಮಾಡ್ತಿರುವ ಪ್ರಥಮ ಅಥವಾ ದ್ವಿತೀಯ ಪಿಯುಸಿ ವಿದ್ಯಾರ್ಥಿ ಅಥವಾ ವಿದ್ಯಾರ್ಥಿನಿಯರಿಗೆ Free Laptop ವಿತರಿಸಲು ಅರ್ಜಿಗಳನ್ನು ಅಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸೋದಕ್ಕೆ ನಿಯಮಗಳು ಅನ್ವಯಿಸಲಿದ್ದು, ಸಂಪೂರ್ಣ ಮಾಹಿತಿ ಇಲ್ಲಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
ಕಾರ್ಮಿಕ ಅಧಿಕಾರಿ -1, ಉಪ ವಿಭಾಗ ಬೆಂಗಳೂರು ಇವರ ಕಾರ್ಯವ್ಯಾಪ್ತಿಯಲ್ಲಿ ನೋಂದಣಿ ಆಗಿರುವ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಈ ಸೌಲಭ್ಯವನ್ನು ಪಡೆಯಲು ಅರ್ಜಿ ನಮೂನೆಯನ್ನು ಆಯಾ ವೃತ್ತ ಕಛೇರಿ ಹಿರಿಯ ಕಾರ್ಮಿಕ ನಿರೀಕ್ಷಕರ ಕಚೇರಿಯಿಂದ ಪಡೆದು ಅಗತ್ಯ ದಾಖಲಾತಿ ಜೊತೆಗೆ, ಅರ್ಜಿ ಸ್ವೀಕರಿಸಿದ ಕಚೇರಿಗೆ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 26 ಕೊನೆಯ ದಿನ ಎಂದು ತಿಳಿಸಲಾಗಿದೆ.

Free Laptop For PUC Students
Image Credit: Krishijagran

ಈ ಬಗ್ಗೆ ಹೆಚ್ಚಿನ ಮಾಹಿತಿಗೆ ಕಾರ್ಮಿಕ ಅಧಿಕಾರಿ ಕಚೇರಿ, ಉಪ ವಿಭಾಗ-1, ಬೆಂಗಳೂರು. ಕರ್ನಾಟಕ ರಾಜ್ಯ ಕಾರ್ಮಿಕ ಅಧ್ಯಯನ ಸಂಸ್ಥೆ ಕಟ್ಟಡ, ಮೊದಲ ಮಹಡಿ, ಮಂಜುನಾಥ ನಗರ ಬಾಗಲಗುಂಟೆ ಬೆಂಗಳೂರು -73 ಈ ವಿಳಾಸವನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 9845587605, 8105084941 ಮೂಲಕ ಸಂಪರ್ಕ ಮಾಡಿ ಅರ್ಜಿ ಸಲ್ಲಿಕೆಯ ಕುರಿತು ಮಾಹಿತಿ ಪಡೆಯಬಹುದು ಎಂದು ಮಾಹಿತಿ ನೀಡಲಾಗಿದೆ.

Leave A Reply

Your email address will not be published.