Gandhi Point Canteen: ರಾಜ್ಯದಲ್ಲಿ ಜಾರಿಗೆ ಬಂತು ಗಾಂಧಿ ಕ್ಯಾಂಟೀನ್, ಇಂತಹ ನೌಕರರಿಗೆ ಮಾತ್ರ ಊಟ ತಿಂಡಿ.

ರಾಜ್ಯದಲ್ಲಿ ಜಾರಿಗೆ ಬಂತು ಗಾಂಧಿ ಕ್ಯಾಂಟೀನ್.

Gandhi Point Canteen: ಇಂದು ಬಿಎಂಟಿಸಿಯ (BMTC) 4ನೇ ಘಟಕದಲ್ಲಿ ಮಹಾತ್ಮ ಗಾಂಧೀಜಿಯವರ ಜಯಂತಿಯನ್ನು ಸರಳ‌ ಮತ್ತು ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಘಟಕದ ಸಿಬ್ಬಂದಿಗಳಿಗೆ ರಿಯಾಯಿತಿ ದರದಲ್ಲಿ ಉತ್ತಮ‌ ದರ್ಜೆಯ ತಿಂಡಿ ಮತ್ತು ಊಟವನ್ನು ಒದಗಿಸಲು ಗಾಂಧೀ ಪಾಯಿಂಟ್ ಹೆಸರಿನ ಕ್ಯಾಂಟಿನ್ ಗೆ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಚಾಲನೆ ನೀಡಿದರು.                         

Gandhi Point
Image Credit: Kannadanewsnow

ಗಾಂಧೀ ಪಾಯಿಂಟ್ ಹೆಸರಿನ ಕ್ಯಾಂಟಿನ್ ಚಾಲನೆ

ಮುಖ್ಯಮಂತ್ರಿ ಸಿದ್ಧರಾಮಯ್ಯ ಸಾರಿಗೆ ಸಿಬ್ಬಂದಿಗಳಿಗೆ ಉತ್ತಮ ಗುಣಮಟ್ಟದ ತಿಂಡಿ, ಊಟ ಒದಗಿಸೋ ಕ್ಯಾಂಟಿನ್ ತೆರೆಯೋದಾಗಿ ತಿಳಿಸಿದ್ದರು. ಅದರಂತೆ ಇಂದು ಬೆಂಗಳೂರಿನ ಬಿಎಂಟಿಸಿಯ 4ನೇ ಘಟಕದಲ್ಲಿ ಉತ್ತಮ ದರ್ಜೆಯ, ರಿಯಾಯಿತಿ ದರದಲ್ಲಿ ಊಟ, ತಿಂಡಿ ಒದಗಿಸೋ ಗಾಂಧಿ ಪಾಯಿಂಟ್ ಕ್ಯಾಂಟಿನ್ ಆರಂಭಗೊಂಡಿದೆ. ಈ ಕ್ಯಾಂಟೀನ್ ನಲ್ಲಿ ಉತ್ತಮ ಗುಣಮಟ್ಟದ ಆಹಾರ, ಕಡಿಮೆ ಬೆಲೆಗೆ ಸಿಗಲಿದೆ ಎನ್ನಲಾಗಿದೆ.

ಉತ್ತಮ ಗುಣಮಟ್ಟದ ಆಹಾರವು ರಿಯಾಯಿತಿ ದರದಲ್ಲಿ ದೊರಕಲಿದೆ

ಈಗಾಗಲೇ ಬಿ ಎಂ ಟಿ ಸಿ‌ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಕ್ಯಾಂಟೀನ್ ತೆರೆಯುವ ಕಾರ್ಯ ಪ್ರಗತಿಯಲ್ಲಿದೆ. ನಗರದ ಕೇಂದ್ರ ಭಾಗದಲ್ಲಿರುವ ಬಸ್ ನಿಲ್ದಾಣದಲ್ಲಿ ಕ್ಯಾಂಟೀನ್ ತೆರೆಯುವುದರಿಂದ ನಾಲ್ಕು ಸಾರಿಗೆ ಸಂಸ್ಥೆಗಳ‌ ಚಾಲನಾ ಸಿಬ್ಬಂದಿಗಳಿಗೆ ಬಹಳ ಅನುಕೂಲವಾಗಲಿದೆ.

BMTC Staff
Image Credit: Bangaloremirror

ಉತ್ತಮ ಗುಣಮಟ್ಟದ ಆಹಾರವು ರಿಯಾಯಿತಿ ದರದಲ್ಲಿ ದೊರಕಲಿದೆ. ಇದೇ ರೀತಿ ಇತರೆ ಘಟಕಗಳಲ್ಲಿಯೂ ಕ್ಯಾಂಟೀನ್ ಪ್ರಾರಂಭಿಸಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು. ಈ ಸಮಾರಂಭದಲ್ಲಿ ಕೀರ್ತಿಚಂದ್ರ, ವಿಭಾಗೀಯ ನಿಯಂತ್ರಣಾಧಿಕಾರಿ, ಬಿಎಂಟಿಸಿ ದಕ್ಷಿಣ ವಿಭಾಗ, ರವೀಂದ್ರ ಘಟಕ ವ್ಯವಸ್ಥಾಪಕರು, ಜಯನಗರ ಘಟಕ -4 ಹಾಗೂ ಘಟಕದ ಸಿಬ್ಬಂದಿಗಳು ಹಾಜರಿದ್ದರು.

Leave A Reply

Your email address will not be published.