Gruha Jyothi Expense: ಕಳೆದ 3 ತಿಂಗಳಲ್ಲಿ ಈ ಯೋಜನೆಗೆ ಖರ್ಚಾದ ಹಣ ಎಷ್ಟು..? ಯಶಸ್ವಿ ಯೋಜನೆ.

ಮೂರೂ ತಿಂಗಳಲ್ಲಿ ಗೃಹ ಜ್ಯೋತಿ ಯೋಜನೆಗೆ ಸರ್ಕಾರಿ ಮಾಡಿದ ಖರ್ಚು ಎಷ್ಟು...?

Gruha Jyothi Scheme Expense In Karnataka: ರಾಜ್ಯ ಸರ್ಕಾರದ ಗ್ರಹಜ್ಯೋತಿ ಯೋಜನೆಯಡಿ ಹಲವು ಮನೆಯಲ್ಲಿ ಉಚಿತ ವಿದ್ಯುತ್ ಬಳಕೆ ಆಗುತ್ತಿದೆ. ಗ್ರಹಜ್ಯೋತಿ ಯೋಜನೆ ಪ್ರಾರಂಭ ಆಗಿ 03 ತಿಂಗಳು ಕಳೆದಿದ್ದು, ಈ ಯೋಜನೆಯಡಿ ಪ್ರತಿ ಕುಟುಂಬಕ್ಕೆ ಮಾಸಿಕ ಗರಿಷ್ಠ 200 ಯುನಿಟ್‌ ವರೆಗೆ ಉಚಿತ ವಿದ್ಯುತ್‌ ನೀಡಲಾಗುತ್ತಿದೆ.

ವಿದ್ಯುತ್ ಬಿಲ್ ಹೊರೆಯಿಂದ ಕಂಗೆಟ್ಟಿದ್ದ ಜನರಿಗೆ ಉಚಿತ ವಿದ್ಯುತ್ ಸೌಲಭ್ಯ ನೀಡಿ, ನೆಮ್ಮದಿಯ ಬದುಕು ಕಲ್ಪಿಸುವ ಬದ್ಧತೆಯೊಂದಿಗೆ ನಾವು ಜಾರಿಗೆ ತಂದ ಗೃಹಜ್ಯೋತಿ ಯೋಜನೆ ಇಂದು ನಾಡಿನ ಪ್ರತಿ ಮನೆಯನ್ನು ಬೆಳಗುತ್ತಿದೆ. ಹಾಗು ಇನ್ನು ಮುಂದಿನ ದಿನಗಳಲ್ಲಿ ಈ ಯೋಜನೆ ಹೀಗೆ ಮುಂದುವರೆಯಲಿದೆ ಎಂದು ಮುಖ್ಯ ಮಂತ್ರಿಗಳು ತಿಳಿಸಿದ್ದಾರೆ.

Gruha Jyothi Expense
Image Credit: India Today

ಗ್ರಹಜ್ಯೋತಿ ಯೋಜನೆಗೆ ಬಿಡುಗಡೆಯಾದ ಅನುದಾನಗಳ ಮಾಹಿತಿ

ರಾಜ್ಯದ ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯ ಅವರು ಗ್ರಹಜ್ಯೋತಿ ಯೋಜನೆಯ ಕುರಿತು ಮಾತನಾಡುತ್ತಾ ಈ ಯೋಜನೆಯಡಿ ರಾಜ್ಯದ ಒಟ್ಟು 1.56 ಕೋಟಿ ಕುಟುಂಬಗಳಿಗೆ ಮಾಸಿಕ ಗರಿಷ್ಠ 200 ಯುನಿಟ್ ವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದೆ. ಈ ವರೆಗೆ ಯೋಜನೆಗಾಗಿ ರೂ. 2,152 ಕೋಟಿ ಅನುದಾನವನ್ನು ನಮ್ಮ‌ ಸರ್ಕಾರವು ಬಿಡುಗಡೆಗೊಳಿಸಿದೆ ಎಂದು ತಿಳಿಸಿದೆ.

Gruha Jyothi Scheme Latest Update
Image Credit: News9live

ಇನ್ನು ಸಾಧಿಸಲು ಬಾಕಿ ಇದೆ, ಸಿಎಂ ಹೇಳಿಕೆ

ಕಳೆದ 6 ತಿಂಗಳ ಅವಧಿಯಲ್ಲಿ ನಾಡಿನ ಜನತೆಗೆ ನೀಡಿದ್ದ ಎಲ್ಲಾ ಭರವಸೆಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇವೆ. ಗ್ಯಾರಂಟಿ ಯೋಜನೆಗಳು ಸೇರಿದಂತೆ ಎಲ್ಲ ಅಭಿವೃದ್ಧಿ ಕಾರ್ಯಕ್ರಮಗಳ ಜಾರಿ ಮತ್ತು ಸಮಾಜದ ಶಾಂತಿ ರಕ್ಷಣೆ ನಮ್ಮ ಸರ್ಕಾರದ ಪ್ರಮುಖ ಉದ್ದೇಶವಾಗಿದೆ ಎಂದರು. ಸಾಧಿಸಿದ್ದು ಹಲವು, ಸಾಗಬೇಕಾದ ಹಾದಿ ಬಹುದೂರ ಇದೆ. ಕರ್ನಾಟಕ ಅಭಿವೃದ್ಧಿ ಮಾದರಿಯ ಈ ಪಯಣದಲ್ಲಿ ಜೊತೆಯಾಗಿ ಸಾಗೋಣ, ನಾಡನ್ನು ಸರ್ವಜನಾಂಗದ ಶಾಂತಿಯ ತೋಟವಾಗಿಸೋಣ ಎಂದು ಮುಖ್ಯ ಮಂತ್ರಿಗಳು ತಿಳಿಸಿದ್ದಾರೆ.

Leave A Reply

Your email address will not be published.