Gruha Lakshmi: ಗೃಹಲಕ್ಷ್ಮಿ ಯೋಜನೆಯ ಬಗ್ಗೆ ಇನ್ನೊಂದು ಘೋಷಣೆ ಮಾಡಿದ ಸರ್ಕಾರ, ಖುಷಿಯಲ್ಲಿ ಮಹಿಳೆಯರು.

ಗೃಹಲಕ್ಷ್ಮಿ ಯೋಜನೆಯ ಬಗ್ಗೆ ಇನ್ನೊಂದು ಘೋಷಣೆ ಮಾಡಿದ ಸರ್ಕಾರ.

Gruha Lakshmi Latest News Update: ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆ ಜಾರಿಗೆ ಬಂದು ಮೂರೂ ತಿಂಗಳು ಕಳೆದಿದೆ. ಈಗಾಗಲೇ ಮೂರೂ ಕಂತಿನ ಹಣ ಕೂಡ ಯಜಮಾನಿ ಮಹಿಳೆಯರ ಖಾತೆ ಸೇರಿದೆ.

ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು 2000 ರೂಪಾಯಿಯನ್ನು ಮಹಿಳೆಯರ ಬ್ಯಾಂಕ್ ಖಾತೆಗೆ ಜಮೆ ಮಾಡುತ್ತಿರುವ ಸರ್ಕಾರ ಇನ್ನು ಈ ಯೋಜನೆಯ ಒಂದು ಕಂತಿನ ಹಣ ಕೂಡ ಪಡೆಯದೇ ಇರುವವರ ಕುರಿತು ಹೇಳಿಕೆ ನೀಡಿದೆ. ಈ ಯೋಜನೆಯಡಿ ಅರ್ಹ ಕೆಲ ಮಹಿಳೆಯರು ಕೆಲವು ಕಾರಣಗಳಿಂದ ಈ ಯೋಜನೆಯ ಒಂದು ಕಂತಿನ ಹಣವನ್ನು ಕೂಡ ಪಡೆದಿಲ್ಲ, ಇಂಥವರು ಕಡ್ಡಾಯವಾಗಿ ಈ ಕೆಲಸವನ್ನು ಮಾಡತಕ್ಕದ್ದು ಎನ್ನಲಾಗಿದೆ.

Gruha Lakshmi Latest News Update
Image Credit: Hindustantimes

ಡಿಸೆಂಬರ್ ತಿಂಗಳ ಅಂತ್ಯದವರೆಗೆ ಎಲ್ಲಾ ಗೊಂದಲಗಳಿಗೂ ಪರಿಹಾರ

ಗೃಹಲಕ್ಷ್ಮಿ ಯೋಜನೆಯ ಹಣ ಇನ್ನು ಬಾರದೇ ಇರುವವರಿಗೆ ಸಿಎಂ ಸಿದ್ಧರಾಮಯ್ಯ ಗುಡ್ ನ್ಯೂಸ್ ನೀಡಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಬುಧವಾರದಂದು ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿದರು. ಈ ಸಭೆಯಲ್ಲಿ ನವೆಂಬರ್‌ ತನಕ 1.17 ಕೋಟಿ ಫಲಾನುಭವಿಗಳು ನೋಂದಣಿಯಾಗಿದ್ದು, 1.10 ಕೋಟಿ ಫಲಾನುಭವಿಗಳಿಗೆ ನೆರವು ವರ್ಗಾವಣೆ ಮಾಡಲಾಗಿದೆ. 2 ಲಕ್ಷ ಫಲಾನುಭವಿಗಳಿಗೆ ಸಂಬಂಧಿಸಿದ ತೊಡಕು ನಿವಾರಿಸಲಾಗುತ್ತಿದೆ ಎಂದಿದ್ದಾರೆ. ಡಿಸೆಂಬರ್‌ ಒಳಗೆ ಎಲ್ಲ ಅರ್ಹ ಫಲಾನುಭವಿಗಳಿಗೆ ನಗದು ವರ್ಗಾವಣೆಯನ್ನು ಖಾತರಿ ಪಡಿಸಲು ಸೂಚಿಸಿದರು.

Gruha Lakshmi Scheme
Image Credit: News Next Live

ಎಲ್ಲಾ ಸಮಸ್ಯೆಯನ್ನು ಬಗೆಹರಿಸುವ ಭರವಸೆ

ಗೃಹಲಕ್ಷ್ಮಿ ಯೋಜನೆಯ ಹಣ ಬರದೇ ಇರುವ ಕುರಿತು ಬ್ಯಾಂಕ್‌ ಖಾತೆ ಆಧಾರ್‌ ಲಿಂಕ್‌ ಮತ್ತಿತರ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗೃಹ ಲಕ್ಷ್ಮಿ ಅದಾಲತ್‌ ಆಯೋಜಿಸಿ, ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಖಾತೆಯ ಮಾಹಿತಿಯಲ್ಲಿ ಗೊಂದಲ, ಆಧಾರ್‌ ಲಿಂಕ್‌ ಆಗದಿರುವುದು ಮೊದಲಾದ ಕಾರಣಗಳಿಂದ ಹಣ ವರ್ಗಾವಣೆಗೆ ತೊಡಕಾಗಿದೆ. ಅಂಗನವಾಡಿ ಕಾರ್ಯಕರ್ತೆಯರು ಫಲಾನುಭವಿಗಳನ್ನು ಬ್ಯಾಂಕಿಗೇ ಕರೆದೊಯ್ದು ಸಮಸ್ಯೆ ಬಗೆಹರಿಸಲಾಗುತ್ತಿದೆ. ಕೆಲವೇ ದಿನಗಳಲ್ಲಿ ಈ ಪ್ರಕ್ರಿಯೆ ಪೂರ್ಣಗೊಳಿಸಿ, ಎಲ್ಲ ಅರ್ಹ ಫಲಾನುಭವಿಗಳಿಗೆ ನೆರವು ಕ್ರಮ ಕೈಗೊಳ್ಳಲು ಸಿಎಂ ಸಿದ್ದರಾಮಯ್ಯ ನವರು ಸೂಚಿಸಿದ್ದಾರೆ.

Leave A Reply

Your email address will not be published.