Gruha Lakshmi: ಗ್ರಹಲಕ್ಷ್ಮಿ ಹಣ ಬಂದಿಲ್ಲ ಅಂದರೆ ಚಿಂತಿಸುವ ಅಗತ್ಯವಿಲ್ಲ, ಈ ಚಿಕ್ಕ ಕೆಲಸ ಮಾಡಿದರೆ 2 ಕಂತಿನ ಹಣ ಒಮ್ಮೆ ಬರುತ್ತದೆ.
ನಿಮಗಿನ್ನು ಗ್ರಹಲಕ್ಷ್ಮಿ ಹಣ ಬಂದಿಲ್ಲವಾ ಹಾಗಾದ್ರೆ ಈ ಕೆಲಸವನ್ನು ಕಡ್ಡಾಯವಾಗಿ ಮಾಡಿ
Gruha Lakshmi Money Credit: ರಾಜ್ಯದಲ್ಲಿ ಗ್ರಹಲಕ್ಷ್ಮಿ (Gruha Lakshmi) ಯೋಜನೆ ಪ್ರಾರಂಭ ಆಗಿ ಎರಡು ತಿಂಗಳುಗಳು ಕಳೆದಿದೆ. ಅಷ್ಟೇ ಅಲ್ಲದೆ ಎರಡು ತಿಂಗಳ ಹಣ ಮಹಿಳೆಯರ ಬ್ಯಾಂಕ್ ಖಾತೆ ಸೇರಿದೆ. ರಾಜ್ಯದಲ್ಲಿನ ಹಲವು ಯೋಜನೆಗಳಲ್ಲಿ ಈ ಯೋಜನೆ ಬಹಳ ಮಹಿಳೆಯರ ಅನುಕೂಲಕ್ಕೆ ಸಹಕಾರಿ ಆಗಿದೆ.
ಈ ಯೋಜನೆಯ ಅಡಿಯಲ್ಲಿ ಕುಟುಂಬದ ಯಜಮಾನಿ ಮಹಿಳೆಯರಿಗೆ ಪ್ರತಿ ತಿಂಗಳು 2,000 ರೂ.ಹಣವನ್ನು ಡಿಬಿಟಿ ಮೂಲಕ ಖಾತೆಗೆ ಜಮಾ ಮಾಡಲಾಗುತ್ತದೆ.ಈ ಯೋಜನೆ ಪ್ರಾರಂಭ ಆಗಿ 2 ತಿಂಗಳಾದರೂ ಇನ್ನು ಕೆಲ ಮಹಿಳೆಯರಿಗೆ ಈ ಯೋಜನೆಯ ಹಣ ಬ್ಯಾಂಕ್ ಖಾತೆಗೆ ಜಮಾ ಆಗಿಲ್ಲ ಎಂಬ ಮಾಹಿತಿ ಕೇಳಿ ಬರುತ್ತಿದೆ.
ಆಧಾರ್ ಜೋಡಣೆ ಮತ್ತು ಇಕೆವೈಸಿ ಅಪ್ಡೇಟ್ ಮಾಡಿಸಿಕೊಳ್ಳುವುದು ಕಡ್ಡಾಯ
Gruha Lakshmi ಯೋಜನೆಯಡಿ ಇನ್ನು ಹಣ ಪಡೆಯದೇ ಇರುವ ಮಹಿಳೆಯರು ಮೊದಲು ಈ ಕೆಲಸ ಆಗಿದ್ಯಾ ಎಂದು ಚೆಕ್ ಮಾಡಿಕೊಳ್ಳಿ. ಅದೇನೆಂದರೆ Aadhar And Bank Account ಜೋಡಣೆಯಾಗದೇ ಇ-ಕೆವೈಸಿ ಅಪ್ಡೇಟ್ ಆಗದೇ ಇರುವುದರಿಂದ ಹಣ ಜಮೆಯಾಗದೇ ಇರುವವರು ತಮ್ಮ ಖಾತೆ ಹೊಂದಿರುವ ಬ್ಯಾಂಕ್ ಗಳಿಗೆ ಸಂಪರ್ಕಿಸಿ ಆಧಾರ್ ಕಾರ್ಡ್ ಮತ್ತು ಬ್ಯಾಂಕ್ ಖಾತೆ ವಿವರಗಳನ್ನು ನೀಡಿ ಆಧಾರ್ ಜೋಡಣೆ ಮತ್ತು E-KYC ಅಪ್ಡೇಟ್ ಮಾಡಿಸಿಕೊಳ್ಳುವುದು ಹಾಗೂ ಫಲಾನುಭವಿಗಳು ಆಧಾರ್ ಕಾರ್ಡ್, ಪಡಿತರ ಚೀಟಿಯನ್ವಯ ಹಾಗೂ ಪಾಸ್ಪುಸ್ತಕದಲ್ಲಿರುವ ಖಾತೆದಾರರ ಹೆಸರು ಹೊಂದಾಣಿಕೆ ಮಾಡಿಸಿಕೊಳ್ಳುವಂತೆ ಯೋಜನೆಯ ಸೌಲಭ್ಯವನ್ನು ಪಡೆಯುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ತಿಳಿಸಿದೆ.
ಬ್ಯಾಂಕ್ ನಲ್ಲಿ ಸಾಲ ಹೊಂದಿದವರು ಬ್ಯಾಂಕ್ ಅನ್ನು ವಿಚಾರಿಸಿಕೊಳ್ಳಿ
ಮಹಿಳೆಯರು ತಮಗಿನ್ನು ಹಣ ಬಂದಿಲ್ಲ ಎಂದು ಚಿಂತಿಸುವ ಬದಲು, ತಮ್ಮ ಹೆಸರಿನಲ್ಲಿ ಬ್ಯಾಂಕ್ ಸಾಲ ಇದ್ದರೆ, ಬಂದ ಗ್ರಹಲಕ್ಷ್ಮಿ ಹಣ ಬ್ಯಾಂಕ್ ನವರು ಸಾಲಕ್ಕೆ ಜಮೆ ಮಾಡಿಕೊಳ್ಳುತ್ತಿರಬಹುದು ಈ ವಿಚಾರವಾಗಿ ಬ್ಯಾಂಕ್ ಅನ್ನು ಭೇಟಿ ಮಾಡಿ ಮಾಹಿತಿ ಪಡೆಯುವುದು ಉತ್ತಮ ಆಗಿದೆ ಅಷ್ಟೇ ಅಲ್ಲದೆ ರೇಷನ್ ಕಾರ್ಡ್ ತಿದ್ದುಪಡಿ ಆಗಿದೆಯಾ ಅಂತಾ ಆನ್ಲೈನ್ ನಲ್ಲಿ ತಿಳಿದುಕೊಳ್ಳಿ. ಅಕ್ಟೋಬರ್ ತಿಂಗಳ ಕೊನೆಯಲ್ಲಿ ಪ್ರತಿಯೊಬ್ಬ ಫಲಾನುಭವಿಗಳ ಖಾತೆಗೆ ಎರಡು ಕಂತಿನ ಹಣ ಜಮಾ ಮಾಡಲಾಗುತ್ತದೆ. ಹೀಗಾಗಿ ಹಣ ಬಾರದೇ ಇರುವ ಫಲಾನುಭವಿಗಳು ತಪ್ಪದೇ ಈ ಕೆಲಸಗಳನ್ನು ಪೂರ್ಣಗೊಳಿಸಿ.
ರೇಷನ್ ಕಾರ್ಡ್ ಗೆ KYC ಅಪ್ಡೇಟ್ ಆಗಿದೀಯ ತಿಳಿದುಕೊಳ್ಳಿ
ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಿಕೊಂಡಿರುವ ಫಲಾನುಭವಿಗಳಲ್ಲಿ ಯಾರಿಗೆ ಮೊದಲ ಕಂತಿನ ಹಣ ಬಂದಿಲ್ಲ ಅಂತಹವರು ತಮ್ಮ ಬ್ಯಾಂಕ್ಗಳಲ್ಲಿ ಇ-ಕೆವೈಸಿ ಹಾಗೂ ಆಧಾರ್ ಜೋಡಣೆ ಮಾಡಿಕೊಂಡರೆ ಯೋಜನೆ ಹಣ ಜಮಾ ಆಗಲಿದೆ. ಹಾಗೆಯೆ ನಿಮ್ಮ ರೇಷನ್ ಕಾರ್ಡ್ ಗೆ KYC ಅಪ್ಡೇಟ್ ಆಗಿದೆಯೇ ಎನ್ನುವುದನ್ನು ತಿಳಿದುಕೊಳ್ಳಿ.
ಆಗದೇ ಇದ್ದಲ್ಲಿ ಕೂಡಲೇ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಹೋಗುವ ಮೂಲಕ KYC ಅಪ್ಡೇಟ್ ಮಾಡಿಸಿಕೊಳ್ಳಿ.ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿ ಒಂದು ಕಂತಿನ ಹಣ ಕೂಡ ಪಡೆಯದವರು ತಮ್ಮ ತಾಲೂಕು ವ್ಯಾಪ್ತಿಗೆ ಬರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ CDPO ಅಧಿಕಾರಿಗಳಿಗೆ ದಾಖಲೆಗಳನ್ನು ನೀಡಬೇಕು.
ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್, ರೇಷನ್ ಕಾರ್ಡ್ ಮತ್ತು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿರುವ ಅರ್ಜಿ ಸ್ವೀಕೃತಿ ಪತ್ರದ ಪ್ರತಿಗಳನ್ನು ಸಲ್ಲಿಸಬೇಕು. ಅಧಿಕಾರಿಗಳ ಬಳಿ ಗೃಹಲಕ್ಷ್ಮಿ ಫಲಾನುಭವಿಗಳ ಪಟ್ಟಿ ಇರುವುದರಿಂದ ಅವರು ಏನು ಸಮಸ್ಯೆಯಾಗಿದೆ ಎಂಬುದನ್ನು ಹೇಳುತ್ತಾರೆ.