Gruha Lakshmi Scheme: ಇಂತಹ ಮಹಿಳೆಯರ ಮುಂದಿನ ತಿಂಗಳು ಸಿಗಲಿದೆ 4000 ರೂ, ಸರ್ಕಾರದ ಇನ್ನೊಂದು ಘೋಷಣೆ.
ಗ್ರಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕದವರು ಅರ್ಜಿ ಹಾಕಿ 4000 ರೂಪಾಯಿ ಪಡೆಯಿರಿ.
Gruha Lakshmi Scheme Money: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಗೆ ಈಗಾಗಲೇ ಚಾಲನೆ ನೀಡಲಾಗಿದ್ದು, ಹಲವು ಫಲಾನುಭವಿಗಳ ಖಾತೆಗೆ 2,000 ರೂ. ಹಣ ವರ್ಗಾವಣೆ ಮಾಡಲಾಗಿದೆ. ಗೃಹಲಕ್ಷ್ಮೀ ಯೋಜನೆಯಡಿ ಈಗಾಗಲೇ ರಾಜ್ಯದ 44.52 ಲಕ್ಷ ಫಲಾನುಭವಿಗಳ ಖಾತೆಗೆ ಹಣ ಜಮಾ ಆಗಿದೆ. ಆದ್ರೆ ಕೆಲವು ಮಹಿಳೆಯರಿಗೆ ಕೆಲವು ಕಾರಣಗಳಿಂದ ಈ ಯೋಜನೆಯ ಹಣ ಖಾತೆಗೆ ಜಮೆ ಆಗಿಲ್ಲ.
ಹಣ ಜಮೆ ಆಗದಿರಲು ಕಾರಣಗಳು
ಮಹಿಳೆಯರ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಆಗದಿರುವ ಖಾತೆಗಳಿಗೆ 2,000 ರೂಪಾಯಿ ಜಮಾ ಆಗಿಲ್ಲ. ಹಾಗು ಕೆಲವು ತಾಂತ್ರಿಕ ದೋಷಗಳನ್ನು ಸರ್ಕಾರ ನೀಡಿದ್ದು, ಕೂಡಲೇ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡಿಸುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ತಿಳಿಸಿದೆ.
ಗೃಹಲಕ್ಷ್ಮೀ ಹಣ ಬರಬೇಕಾದ್ರೆ ತಪ್ಪದೇ ಈ ಕೆಲಸಗಳನ್ನು ಮಾಡಿ
ಹತ್ತಿರದಲ್ಲಿರುವ ಯಾವುದೇ ಸೇವಾಕೇಂದ್ರ ಅಥವಾ ನ್ಯಾಯಬೆಲೆ ಅಂಗಡಿಗಳಿಗೆ ಹೋಗಿ ದಾಖಲೆಯನ್ನು ಕೊಟ್ಟು ನಿಮ್ಮ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಿಕೊಳ್ಳಿ ಹಾಗು ನಿಮ್ಮ ರೇಷನ್ ಕಾರ್ಡ್ ಗೆ KYC ಅಪ್ಡೇಟ್ ಆಗಿದೆಯೇ ಎನ್ನುವುದನ್ನು ತಿಳಿದುಕೊಳ್ಳಿ. ಆಗದೇ ಇದ್ದಲ್ಲಿ ಕೂಡಲೇ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಹೋಗುವ ಮೂಲಕ KYC ಅಪ್ಡೇಟ್ ಮಾಡಿಸಿಕೊಳ್ಳಿ.
ರೇಷನ್ ಕಾರ್ಡ್, ಆಧಾರ್ ಕಾರ್ಡ್ ಮತ್ತು ಬ್ಯಾಂಕ್ ಖಾತೆ ಮಾಹಿತಿಯಲ್ಲಿ ತೊಂದರೆ ಇದ್ದರೆ ಸರಿ ಮಾಡಿಸಿ, ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ NPCI ಮ್ಯಾಪಿಂಗ್ ಆಗಿದೆಯೇ ಎನ್ನುವುದನ್ನು ಖಚಿತಪಡಿಸಿಕೊಳ್ಳಿ , ಇಲ್ಲವಾದಲ್ಲಿ ನಿಮ್ಮ ಬ್ಯಾಂಕ್ ಶಾಖೆಗೆ ಭೇಟಿ ಕೊಟ್ಟು ಅರ್ಜಿ ಸಲ್ಲಿಸಿ.
ಮುಂದಿನ ತಿಂಗಳಿಗೆ 4000 ರೂಪಾಯಿ ಹಣ ಖಾತೆಗೆ ಬರುತ್ತದೆ
ಇದುವರೆಗೆ ಅರ್ಜಿ ಸಲ್ಲಿಸದವರು ಹಾಗೂ ತಾಂತ್ರಿಕ ತೊಂದರೆಯಿಂದ ಅರ್ಜಿ ಸಲ್ಲಿಸಲು ಸಾಧ್ಯವಾಗದೇ ಇರುವವರು ಎಲ್ಲವನ್ನು ಸರಿಮಾಡಿಕೊಂಡು ಅರ್ಜಿ ಸಲ್ಲಿಸಿದರೆ ಮುಂದಿನ ತಿಂಗಳು 2 ತಿಂಗಳ ಹಣ ಒಟ್ಟಾಗಿ ಅಂದ್ರೆ 4000 ರೂಪಾಯಿ ನಿಮ್ಮ ಖಾತೆ ಬರುತ್ತದೆ.