Gruha Lakshmi: ಇಂತಹ ಮಹಿಳೆಯರ ಖಾತೆಗೆ ಬರಲ್ಲ ಗೃಹಲಕ್ಷ್ಮಿ ಯೋಜನೆಯ ಹಣ, ಸರ್ಕಾರದ ಆದೇಶ.
ಗೃಹ ಲಕ್ಷ್ಮಿ ಯೋಜನೆಯ ಹಣ ಇಂತಹ ಮಹಿಳೆಯರಿಗೆ ಲಭ್ಯವಾಗುವುದಿಲ್ಲ.
Gruha Lakshmi New Condition: ಗೃಹ ಲಕ್ಷ್ಮಿ (Gruha Lakshmi) ಯೋಜನೆಯ ಸುದ್ದಿಗಳು ಸಾಕಷ್ಟು ಹರಿದಾಡುತ್ತಿದೆ. ರಾಜ್ಯ ಸರ್ಕಾರ ಪ್ರತಿ ಮನೆಯ ಒಡತಿಗೆ ಮಾಸಿಕ 2000 ರೂ. ನೀಡಲು ಘೋಷಣೆ ಹೊರಡಿಸಿರುವಂತೆ ಈಗಾಗಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಆರಂಭಗೊಳಿಸಲಾಗಿದೆ. ರಾಜ್ಯದ ಫಲಾನುಭವಿ ಮಹಿಳೆಯರು ಯೋಜನೆಯ ಲಾಭ ಪಡೆಯುವ ನಿರೀಕ್ಷೆಯಲ್ಲಿದ್ದಾರೆ.
ಯೋಜನೆಯ ಹಣ ಜಮಾ ಆಗುವ ಬಗ್ಗೆ ಈಗಾಗಲೇ ಮಾಹಿತಿ ನೀಡಲಾಗಿದೆ. ಇದೀಗ ಗೃಹ ಲಕ್ಷ್ಮಿ ಯೋಜನೆಯ ನಿರೀಕ್ಷೆಯಲ್ಲಿದ್ದವರಿಗೆ ಮಹತ್ವದ ಮಾಹಿತಿಯೊಂದು ಹೊರಬಿದ್ದಿದೆ. ಇಂತಹ ಮಹಿಳೆಯರು ಮಾತ್ರ ಗೃಹ ಲಕ್ಷ್ಮಿಯ 2000 ಹಣ ಪಡೆಯಲು ಅರ್ಹರಾಗಿರುತ್ತಾರೆ.

ಈ ದಿನದಂದು ಮಹಿಳೆಯರ ಖಾತೆಗೆ ರೂ. 2000 ಜಮಾ
ಗೃಹ ಲಕ್ಷ್ಮಿ ಯೋಜನೆ ಲಭ್ಯವಾಗುವ ಬಗ್ಗೆ ಸಿದ್ದರಾಮಯ್ಯ ಅವರು ಘೋಷಣೆ ಹೊರಡಿಸಿದ್ದಾರೆ. ಆಗಸ್ಟ್ 30 ರಂದು ಯೋಜನೆಗೆ ಚಾಲನೆ ನೀಡಲಾಗಿದ್ದು ಅದೇ ದಿನ ರಾಜ್ಯದ ಗೃಹಿಣಿಯರ ಖಾತೆಗೆ 2,000 ಹಣ ಜಮಾ ಆಗುತ್ತದೆ ಎಂದು ಸಿದ್ದರಾಮಯ್ಯ ಅವರು ಅಧಿಕೃತ ಘೋಷಣೆ ಹೊರಡಿಸಿದ್ದಾರೆ.ಇನ್ನು ಯೋಜನೆಯ ಅರ್ಜಿ ಸಲ್ಲಿಕೆಗೆ ಸರ್ಕಾರ ಯಾವುದೇ ಶುಲ್ಕವನ್ನು ವಿಧಿಸಿಲ್ಲ.
ಉಚಿತವಾಗಿ ಕರ್ನಾಟಕ ಒನ್, ಗ್ರಾಮ ಒನ್, ಬಾಪೂಜಿ ಕೇಂದ್ರಗಳಲ್ಲಿ ಗೃಹ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಇನ್ನು ಗೃಹ ಲಕ್ಷ್ಮಿ ಯೋಜನೆಯ ಲಾಭ ಪಡೆಯಲು ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಅನ್ನು ಲಿಂಕ್ ಮಾಡಿಸಿಕೊಳ್ಳಬೇಕಿದೆ.ಈಗಾಗಲೇ ಲಕ್ಷಾಂತರ ಫಲಾನುಭವಿಗಳು ಯೋಜನೆಗೆ ಅರ್ಜಿ ಸಲ್ಲಿಸಿದ್ದಾರೆ. ಯೋಜನೆಯ ಅರ್ಜಿ ಸಲ್ಲಿಕೆಯನ್ನು ಸುಲಭಗೊಳಿಸಲು ಹತ್ತಿರದ ನೋಂದಣಿ ಕಚೇರಿಯಲ್ಲಿ ಅವಕಾಶ ನೀಡಲಾಗಿದೆ.

ಗೃಹ ಲಕ್ಷ್ಮಿ ಯೋಜನೆಯ ಹಣ ಇಂತಹ ಮಹಿಳೆಯರಿಗೆ ಲಭ್ಯವಾಗುವುದಿಲ್ಲ
*ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರಿಗೆ ಈ ಯೋಜನೆಯ ಹಣ ಸಿಗುವುದಿಲ್ಲ.
*ವೈಟ್ ಬೋರ್ಡ್ ಕಾರ್ ಇರುವ ಕುಟುಂಬದ ಮಹಿಳೆಯರಿಗೆ 2000 ಹಣ ಸಿಗಲ್ಲ.
*ಸರ್ಕಾರೀ ಹುದ್ದೆಯಲ್ಲಿರುವವರಿಗೆ ಹಾಗೆ ಪೆನ್ಷನ್ ಪಡೆಯುವ ಮಹಿಳೆಯರಿಗೆ ಗೃಹ ಲಕ್ಷ್ಮಿಯ ಹಣ ದೊರೆಯುದಿಲ್ಲ.
*ಆದಾಯ ತೆರಿಗೆ ಪಾವತಿ ಮಾಡುವ ಕುಟುಂಬದ ಮಹಿಳೆಯರಿಗೆ ಈ ಯೋಜನೆಯ ಹಣ ಸಿಗಲ್ಲ.
*ಏಳು ಎಕರೆಗಿಂತ ಹೆಚ್ಚಿನ ಕೃಷಿ ಭೂಮಿ ಹೊಂದಿರುವ ಕುಟುಂಬದ ಮಹಿಳೆಯರಿಗೆ ಗೃಹ ಲಕ್ಷ್ಮಿ ಯೋಜನೆಯ ಹಣ ಸಿಗುವುದಿಲ್ಲ.