Adalt: ಗೃಹಲಕ್ಷ್ಮಿ ಹಣ ಬಂದಿಲ್ಲ ಅಂದರೆ ಭಯಪಡುವ ಅಗತ್ಯ ಇಲ್ಲ, ಈಗ ಹೋಗಿ ದೂರು ನೀಡಿ.

ಈಗ ಗೃಹ ಲಕ್ಷ್ಮಿ ಅದಾಲತ್ ಕೂಡ ಹಣ ಬಂದಿಲ್ಲ ಅಂದರೆ ದೂರು ನೀಡಬಹುದು.

Gruha Lakshmi Scheme Adalat: ರಾಜ್ಯದಲ್ಲಿ ಈಗಾಗಲೇ ಗೃಹಲಕ್ಷ್ಮಿ ಯೋಜನೆ ಕುರಿತು ಚರ್ಚೆಗಳು ನೆಡೆಯುತ್ತಿದೆ. ಹಲವು ತಾಂತ್ರಿಕ ದೋಷಗಳಿಂದ ಹಲವಾರು ಮಹಿಳೆಯರು ಇನ್ನು ಒಂದು ಕಂತಿನ ಹಣ ಕೂಡ ಪಡೆಯದೇ ಇದ್ದಾರೆ, ಆ ಕುರಿತು ಗೃಹಲಕ್ಷ್ಮಿ ಯೋಜನೆಗೆ ಉಂಟಾಗಿರುವ ಸಣ್ಣಪುಟ್ಟ ಸಮಸ್ಯೆಗಳನ್ನು ಬಗೆಹರಿಸಲು ವೇದಿಕೆಯನ್ನು ಸಿದ್ಧಪಡಿಸಲಾಗುತ್ತಿದೆ.

ಇನ್ನು ನಾಲ್ಕೈದು ದಿನದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಗೃಹಲಕ್ಷ್ಮಿ ಅದಾಲತ್ (Gruhalakshmi Adalat) ಆರಂಭಿಸಲು ಮುಂದಾಗಿದೆ. ಹೀಗಾಗಿ ಇನ್ನೂ ಹಣ ಜಮಾ ಆಗದೆ ಇರುವವರ ಬಳಿ ಸರ್ಕಾರ ಹೋಗಿ ಸಮಸ್ಯೆಯನ್ನು ಬಗೆಹರಿಸಲು ಮುಂದಾಗಿದೆ. ಹೀಗಾಗಿ ಇನ್ನೂ ಹಣ ಸಿಗದವರು ಅದಾಲತ್‌ನಲ್ಲಿ ದೂರು ಕೊಡಬಹುದು.

Gruha Lakshmi Scheme Updates
Image Credit: Original Source

ಶೀಘ್ರದಲ್ಲೇ ಮೂರೂ ಕಂತಿನ ಹಣ ಜಮೆ ಆಗಲಿದೆ

ಗೃಹಲಕ್ಷ್ಮಿ ಯೋಜನೆ ಪ್ರಾರಂಭ ಆಗಿ ಮೂರೂ ತಿಂಗಳು ಕಳೆದಿದ್ದು, ಈಗಾಗಲೇ 1 ಕೋಟಿ 10 ಲಕ್ಷ ಮಹಿಳೆಯರಿಗೆ ಈ ಯೋಜನೆ ತಲುಪಿದೆ . ಬಾಕಿ ಉಳಿದಿರುವ ಫಲಾನುಭವಿಗಳಿಗೆ , ಪಿಡಿಒ, ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಆಯಾ ಪಂಚಾಯಿತಿ, ಪುರಸಭೆ, ನಗರಸಭೆ ವ್ಯಾಪ್ತಿಯಲ್ಲಿ ಸಭೆ ನಡೆಸಿ ಹಣ ಹಾಕುವ ವ್ಯವಸ್ಥೆ ಮಾಡುವ ನಿರ್ಧಾರಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ Lakshmi Hebbalkar ಬಂದಿದ್ದು, ಈ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಿರುವುದಾಗಿ ಹೇಳಿದ್ದಾರೆ.ಈಗಾಗಲೇ ಮೂರು ಕಂತಿನ ದುಡ್ಡು ಬಾರದೇ ಇದ್ದವರಿಗೆ ಏಕಕಾಲಕ್ಕೆ ಆರು ಸಾವಿರ ದುಡ್ಡು ಹಾಕುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಈಗಾಗಲೇ ಹೇಳಿದ್ದಾರೆ.

ಪಡಿತರ ಚೀಟಿಯಲ್ಲಿರುವ ಬೇರೆ ಹಿರಿಯ ಮಹಿಳಾ ಸದಸ್ಯೆಯ ಖಾತೆಗೆ ಹಣ ಸೇರಲಿದೆ

ಅನೇಕ ಕಾರಣಗಳಿಂದಾಗಿ 9 ಲಕ್ಷಕ್ಕೂ ಅಧಿಕ ಕುಟುಂಬದವರಿಗೆ ಇನ್ನೂ ಗೃಹ ಲಕ್ಷ್ಮಿ ಹಣ ತಲುಪಿಲ್ಲ. ಹೀಗಾಗಿ ಪಡಿತರ ಚೀಟಿಯಲ್ಲಿರುವ ಬೇರೆ ಹಿರಿಯ ಮಹಿಳಾ ಸದಸ್ಯೆಯರ ಖಾತೆಗೆ ಹಣ ಹಾಕುವ ನಿರ್ಧಾರಕ್ಕೆ ರಾಜ್ಯ ಸರ್ಕಾರ ಬಂದಿದೆ. ಈ ಸಂಬಂಧ ಗುರುವಾರ (ನ. 23) ನಡೆದಿದ್ದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದೆ. ಗೃಹಲಕ್ಷ್ಮಿ ಯೋಜನೆಯಲ್ಲಿ ನೋಂದಾಯಿಸಿಕೊಂಡ ಗೃಹಿಣಿಯರಲ್ಲಿ ಶೇಕಡಾ 95ರಷ್ಟು ಮನೆ ಒಡತಿಯರಿಗೆ ಈಗಾಗಲೇ ಹಣ ತಲುಪಿದೆ.

ತಾಂತ್ರಿಕ ಸಮಸ್ಯೆಯಿಂದಾಗಿ ಶೇಕಡಾ 5ರಷ್ಟು ಜನರಿಗೆ ತಲುಪಿಲ್ಲ. ಈ ತಾಂತ್ರಿಕ ಸಮಸ್ಯೆಗೆ ಶೀಘ್ರವೇ ಪರಿಹಾರ ಸಿಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ Lakshmi Hebbalkar ಹೇಳಿದರು. ಗೃಹಲಕ್ಷ್ಮಿ ಯೋಜನೆಗೆ ಸುಮಾರು 50 ಸಾವಿರ ತೆರಿಗೆದಾರರು ಕೂಡ ಅರ್ಜಿ ಹಾಕಿದ್ದು, ಅರ್ಜಿಗಳನ್ನು ನಿರಾಕರಿಸಿ ಡಿಲೀಟ್ ಮಾಡಲಾಗಿದೆ.

Gruha Lakshmi Scheme Adalat
Image Credit: Live Mint

ಗೃಹಲಕ್ಷ್ಮಿ ಯೋಜನೆ ಯಶಸ್ವಿ ಆಗಿದೆ

ಗೃಹಲಕ್ಷ್ಮಿ ಯೋಜನೆ ಇದುವರೆಗೂ ಶೇಕಡ 95 ರಷ್ಟು ಯಶಸ್ವಿಯಾಗಿದ್ದು, ಸಮಸ್ಯೆಗಳನ್ನು ಬಗೆಹರಿಸುವ ಸಲುವಾಗಿ ಪ್ರತಿದಿನ ಮೂರು ಜಿಲ್ಲೆಗಳ ಸಿಡಿಪಿಒಗಳಿಗೆ ತರಬೇತಿ ನೀಡಲಾಗುತ್ತಿದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದರು. ಗೃಹಲಕ್ಷ್ಮಿ ಯೋಜನೆಗೆ ಇದುವರೆಗೂ 1 ಕೋಟಿ 16 ಲಕ್ಷದ 65 ಸಾವಿರ ಮಹಿಳೆಯರು ನೋಂದಣಿ ಮಾಡಿಸಿದ್ದಾರೆ. ಈ ಪೈಕಿ ಆಗಸ್ಟ್ ನಲ್ಲಿ ಗೃಹಲಕ್ಷ್ಮಿ ಯರ ಅಕೌಂಟ್‌ಗೆ ತಲಾ ಎರಡು ಸಾವಿರ ರೂ.ಗಳಂತೆ 2,119 ಕೋಟಿ ಹಣ ಹಾಕಲಾಗಿದೆ.

ಈ ಮೂಲಕ ಶೇಕಡಾ 97ರಷ್ಟು ಡಿಬಿಟಿ ಮುಖಾಂತರ ಹಣ ಹಾಕಲಾಗಿದೆ. ಆಗಸ್ಟ್ ತಿಂಗಳಲ್ಲಿ ಐದು ಲಕ್ಷ ಕುಟುಂಬಗಳಿಗೆ ತಾಂತ್ರಿಕ ದೋಷದಿಂದ ಹಣ ಹೋಗಿಲ್ಲ. ಸೆಪ್ಟೆಂಬರ್ ನಲ್ಲಿ 82% ಕುಟುಂಬಗಳಿಗೆ ಹಣ ಹಾಕಲಾಗಿದ್ದು 12 ಲಕ್ಷ ಕುಟುಂಬಗಳಿಗೆ ತಾಂತ್ರಿಕ ದೋಷದಿಂದ ಅಥವಾ ಕೆವೈಸಿ ಸಮಸ್ಯೆಯಿಂದ ಹಣ ಬ್ಯಾಂಕ್ ಅಕೌಂಟ್‌ನಲ್ಲಿ ಉಳಿದಿದೆ. ಇನ್ನು ಅಕ್ಟೋಬರ್ ನಲ್ಲಿ 2,400 ಕೋಟಿ ರೂ ಬಿಡುಗಡೆಯಾಗಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದರು.

Leave A Reply

Your email address will not be published.