Gruha Lakshmi Scheme: `ಗೃಹಲಕ್ಷ್ಮಿ’ ಯೋಜನೆಗೆ ಅರ್ಜಿ ಸಲ್ಲಿಸಿದ್ರೂ ಇನ್ನೂ `ಹಣ’ಬಂದಿಲ್ವಾ? ಈ ದಾಖಲೆಗಳು ಸರಿಯಾಗಿದೆಯಾ ಚೆಕ್ ಮಾಡಿಕೊಳ್ಳಿ!
ಗೃಹಲಕ್ಷ್ಮಿ ಯೋಜನೆಯ ಹಣ ನಿಮಗಿನ್ನೂ ಬಂದಿಲ್ಲವಾ, ಹಾಗಿದ್ದಲ್ಲಿ ಕೂಡಲೇ ಈ ಕೆಲಸ ಮಾಡಿ
Gruha Lakshmi Scheme New Updates: ರಾಜ್ಯ ಸರಕಾರ ಹೊರಡಿಸಿದ 05 ಗ್ಯಾರೆಂಟಿ ಯೋಜನೆಯಲ್ಲಿ ಗೃಹಲಕ್ಷ್ಮಿ ಯೋಜನೆ (Gruha Lakshmi Yojana) ಕೂಡ ಒಂದಾಗಿದೆ. ಈ ಯೋಜನೆಯಡಿ ಮಹಿಳೆಯರು ಪ್ರತಿ ತಿಂಗಳು 2000 ಸಾವಿರ ಹಣ ಪಡೆಯುತ್ತಿದ್ದಾರೆ. ಈ ಹಣವು ನೇರವಾಗಿ ಡೆಬಿಟಿ ಮೂಲಕ ಮಹಿಳೆಯರ ಬ್ಯಾಂಕ್ ಖಾತೆಗೆ ಜಮೆ ಆಗುತ್ತಿದ್ದು, ಈಗಾಗಲೇ 02 ಕಂತಿನ ಹಣಗಳು ಮಹಿಳೆಯರ ಖಾತೆ ಸೇರಿದೆ.
ಕೆಲ ಮಹಿಳೆಯರಿಗೆ ಇನ್ನು ಸಹ ಈ ಯೋಜನೆಯ ಹಣ ದೊರೆತಿಲ್ಲ ಎನ್ನಲಾಗಿದೆ. ಹಾಗಾಗಿ ಈ ಯೋಜನೆಗೆ ಅರ್ಜಿ ಸಲ್ಲಿಸಿ 2,000 ರೂ.ಗೆ ಕಾಯುತ್ತಿರುವ ಯಜಮಾನಿಯರು ತಪ್ಪದೇ ಈ ದಾಖಲೆಗಳನ್ನು ಪರಿಶೀಲಿಸಿ ಸರಿಪಡಿಸಿಕೊಂಡರೇ ಮುಂದಿನ ಕಂತಿನ ಹಣ ನಿಮ್ಮ ಖಾತೆಗೆ ಜಮಾ ಆಗಲಿದೆ.

ರೇಷನ್ ಕಾರ್ಡ್ ಗೆ KYC ಅಪ್ಡೇಟ್ ಕಡ್ಡಾಯ
ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಿಕೊಂಡಿರುವ ಫಲಾನುಭವಿಗಳಲ್ಲಿ ಯಾರಿಗೆ ಮೊದಲ ಎರಡು ಕಂತಿನ ಹಣ ಬಂದಿಲ್ಲ ಅಂತವರು ತಮ್ಮ ಬ್ಯಾಂಕ್ ಗಳಲ್ಲಿ ಇ-ಕೆವೈಸಿ ಹಾಗೂ ಆಧಾರ್ ಜೋಡಣೆ ಮಾಡಿಕೊಂಡರೆ ಗೃಹಲಕ್ಷ್ಮಿ ಯೋಜನೆ ಹಣ ಜಮಾ ಆಗಲಿದೆ. ಹಾಗಾಗಿ ಮೊದಲು ನಿಮ್ಮ ರೇಷನ್ ಕಾರ್ಡ್ ಗೆ KYC ಅಪ್ಡೇಟ್ ಆಗಿದೆಯೋ ಇಲ್ವಾ ಎಂಬುದನ್ನು ಮೊದಲು ತಿಳಿದುಕೊಳ್ಳಿ. ಆಗದೇ ಇದ್ದಲ್ಲಿ ಕೂಡಲೇ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಹೋಗುವ ಮೂಲಕ KYC ಅಪ್ಡೇಟ್ ಮಾಡಿಸಿಕೊಳ್ಳಿ.

ಆಧಾರ್ ಕಾರ್ಡ್ ಲಿಂಕ್ ಕಡ್ಡಾಯ
ಆಧಾರ್ ಸಂಖ್ಯೆ ಮತ್ತು ಬ್ಯಾಂಕ್ ಖಾತೆ ಜೋಡಣೆಯಾಗದೇ ಇ-ಕೆವೈಸಿ ಅಪ್ಡೇಟ್ ಆಗದೇ ಇರುವುದರಿಂದ ಹಣ ಜಮೆಯಾಗದೇ ಇರುವವರು ತಮ್ಮ ಖಾತೆ ಹೊಂದಿರುವ ಬ್ಯಾಂಕ್ ಗಳಿಗೆ ಸಂಪರ್ಕಿಸಿ ಆಧಾರ್ ಕಾರ್ಡ್ ಮತ್ತು ಬ್ಯಾಂಕ್ ಖಾತೆ ವಿವರಗಳನ್ನು ನೀಡಿ ಆಧಾರ್ ಜೋಡಣೆ ಮತ್ತು ಇಕೆವೈಸಿ ಅಪ್ಡೇಟ್ ಮಾಡಿಸಿಕೊಳ್ಳಬೇಕು. ಫಲಾನುಭವಿಗಳು ಆಧಾರ್ ಕಾರ್ಡ್, ಪಡಿತರ ಚೀಟಿಯನ್ವಯ ಹಾಗೂ ಪಾಸ್ ಬುಕ್ ನಲ್ಲಿರುವ ಖಾತೆದಾರರ ಹೆಸರು ಹೊಂದಾಣಿಕೆ ಮಾಡಿಸಿಕೊಳ್ಳುವಂತೆ ಯೋಜನೆಯ ಸೌಲಭ್ಯವನ್ನು ಪಡೆಯುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.