Indian Railway Rules: ಇನ್ನು ಮುಂದೆ ರೈಲಿನಲ್ಲಿ ಈ ವಸ್ತುಗಳನ್ನ ತಗೆದುಕೊಂಡು ಹೋದರೆ ಜೈಲು ಶಿಕ್ಷೆ, ಜಾರಿಗೆ ಬಂತು ಹೊಸ ರೂಲ್ಸ್.

ಅಗ್ನಿ ಅವಘಡ ವಿಷಯಗಳಲ್ಲಿ ಬಹಳ ಕಠಿಣ ಕ್ರಮಗಳನ್ನುಕೈಗೊಂಡ ರೈಲ್ವೆ ಇಲಾಖೆ, ನಿಯಮ ಉಲ್ಲಂಘನೆ ಮಾಡಿದವರಿಗೆ ದಂಡ ಹಾಗು ಶಿಕ್ಷೆ ಖಚಿತ

Indian Railway Rules: ದೇಶದಲ್ಲಿ ಇತೀಚಿನ ದಿನಗಳಲ್ಲಿ ರೈಲು ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದೆ. ರೈಲಿನಲ್ಲಿ ಅಗ್ನಿ ಅವಘಡ ಆಗಿ ಹಲವು ಜನ ಮೃತ ಪಟ್ಟಿರುವುದನ್ನು ನಾವು ಕೇಳಿದ್ದೇವೆ. ಈ ನಿಟ್ಟಿನಲ್ಲಿ ರೈಲ್ವೆ ಇಲಾಖೆ ಒಂದು ಮಹತ್ವದ ನಿಯಮವನ್ನು ಜಾರಿಗೆ ತಂದಿದೆ.

ರೈಲುಗಳಲ್ಲಿ ಅಗ್ನಿ ಅವಘಡಗಳು ಸಂಭವಿಸುತ್ತಿರಲು ಮುಖ್ಯ ಕಾರಣ ಪೆಟ್ರೋಲ್ (Petrol), ಗ್ಯಾಸ್ ಸಿಲಿಂಡರ್, ಡೀಸೆಲ್, ಸೀಮೆಎಣ್ಣೆ, ಸ್ಟವ್, ಮ್ಯಾಚ್ ಬಾಕ್ಸ್, ಸಿಗರೇಟ್ ಲೈಟರ್, ಪಟಾಕಿ ಸೇರಿದಂತೆ ಇಂತಹ ಹಲವು ವಸ್ತುಗಳನ್ನು ರೈಲಿನಲ್ಲಿ ತೆಗೆದುಕೊಂಡು ಹೋಗುವುದರಿಂದ ಆಗುತ್ತದೆ. ಈ ಹಿನ್ನೆಲೆಯಲ್ಲಿ ರೈಲಿನಲ್ಲಿ ಬೆಂಕಿ ಹೊತ್ತಿಸುವ ವಸ್ತುಗಳನ್ನು ಸಾಗಿಸದಂತೆ ಪ್ರಯಾಣಿಕರಿಗೆ ರೈಲ್ವೆ ಇಲಾಖೆ ಖಡಕ್‌ ಸೂಚನೆ ನೀಡಿದೆ.

Indian Railway Rules
Image Credit: News 18

ರೈಲಿನಲ್ಲಿ ಇಂತಹ ವಸ್ತುಗಳನ್ನು ತೆಗೆದುಕೊಂಡು ಹೋಗುವಂತಿಲ್ಲ

ಈಗಾಗಲೇ ರೈಲಿನಲ್ಲಿ ಪ್ರಯಾಣಿಕರು ಬೆಂಕಿ ಹೊತ್ತಿಸುವ ವಸ್ತುಗಳನ್ನು ಸಾಗಿಸುತ್ತಿರುವ ಸಂದರ್ಭದಲ್ಲಿ ಹಲವು ಘಟನೆಗಳು ನಡೆದಿದ್ದು, ಇದಕ್ಕೆ ಬ್ರೇಕ್‌ ಹಾಕಲು ರೈಲ್ವೆ ಇಲಾಖೆ ಮುಂದಾಗಿದೆ. ರೈಲಿನಲ್ಲಿ ಪಟಾಕಿ ಮತ್ತು ಬೆಂಕಿ ಹೊತ್ತಿಸುವ ವಸ್ತುಗಳನ್ನು ಸಾಗಿಸುವುದು ರೈಲ್ವೆ ಕಾಯ್ದೆಯಡಿ ಅಪರಾಧ ಎಂದು ಸೂಚಿಸಿದರು. ನಿಯಮ ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ಪೆಟ್ರೋಲ್, ಗ್ಯಾಸ್ ಸಿಲಿಂಡರ್, ಡೀಸೆಲ್, ಸೀಮೆಎಣ್ಣೆ, ಸ್ಟವ್, ಮ್ಯಾಚ್ ಬಾಕ್ಸ್, ಸಿಗರೇಟ್ ಲೈಟರ್, ಪಟಾಕಿ ಸೇರಿದಂತೆ ಯಾವುದೇ ಸ್ಫೋಟಕ ವಸ್ತುಗಳನ್ನು ಪ್ರಯಾಣಿಕರು ತೆಗೆದುಕೊಂಡು ಹೋಗದಂತೆ ಬೆಂಗಳೂರಿನ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಯೋಗೀಶ್ ಮೋಹನ್ ಶುಕ್ರವಾರ ಪ್ರಯಾಣಿಕರಿಗೆ ಸೂಚಿಸಿದ್ದಾರೆ.

ರೈಲು ಆವರಣದಲ್ಲಿ ಧೂಮಪಾನ ನಿಷೇಧ

ಇನ್ನು ಮುಂದೆ ಚಲಿಸುವ ರೈಲುಗಳಲ್ಲಿ ಮತ್ತು ರೈಲ್ವೆ ಆವರಣದಲ್ಲಿ ಪ್ರಯಾಣಿಕರು ಧೂಮಪಾನ ಮಾಡಬಾರದು ಎಂದು ರೈಲ್ವೆ ಇಲಾಖೆ ಈಗಾಗಲೆ ಸುತ್ತೋಲೆ ಹೊರಡಿಸಿದೆ. ಚಲಿಸುವ ರೈಲಿನಲ್ಲಿ ಮತ್ತು ರೈಲ್ವೆ ಆವರಣಗಳಲ್ಲಿ ಧೂಮಪಾನ ಮಾಡಿದಕ್ಕೆ 258 ಪ್ರಕರಣಗಳು ದಾಖಲಾಗಿವೆ ಎಂದು ಬೆಂಗಳೂರಿನ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಯೋಗೀಶ್ ಮೋಹನ್ ತಿಳಿಸಿದರು.ಅಲ್ಲದೇ ಏಪ್ರಿಲ್‌ನಿಂದ ಅಕ್ಟೋಬರ್‌ವರೆಗೆ ಪಟಾಕಿ ಮತ್ತು ಸುಡುವ ವಸ್ತುಗಳನ್ನು ಸಾಗಿಸಿದ್ದಕ್ಕಾಗಿ ಐದು ಪ್ರಕರಣಗಳನ್ನು ದಾಖಲಿಸಲಾಗಿವೆ ಎಂದರು.

Indian Railway Latest Update
Image Credit: Informal Newz

ಅಗ್ನಿಶಾಮಕಗಳನ್ನು ಹೇಗೆ ಬಳಸಬೇಕೆಂದು ತರಬೇತಿ ನೀಡಲಾಗುತ್ತದೆ

ರೈಲ್ವೆ ಇಲಾಖೆ ಅಗ್ನಿ ದುರಂತಗಳಿಂದ ಮುನ್ನೇಚ್ಚರಿಕೆ ಕ್ರಮವಾಗಿ ಈ ನಿಯಮವನ್ನು ತೆಗೆದುಕೊಂಡಿದ್ದು, ರೈಲ್ವೆ ಕಾರ್ಯಾಚರಣೆಗೆ ಸಂಬಂಧಿಸಿದ ಸಿಬ್ಬಂದಿಗಳು ಮತ್ತು ಸಾರ್ವಜನಿಕರಿಗೆ ಅಗ್ನಿಶಾಮಕಗಳನ್ನು ಹೇಗೆ ಬಳಸಬೇಕೆಂದು ತರಬೇತಿ ನೀಡಲಾಗಿದೆ. ವಿಭಾಗದ 30 ನಿಲ್ದಾಣಗಳಲ್ಲಿ ರೈಲ್ವೆ ಮೇಲ್ವಿಚಾರಕರು ಮತ್ತು ಸಿಬ್ಬಂದಿ ಅಗ್ನಿ ಸುರಕ್ಷತಾ ತಪಾಸಣೆ ನಡೆಸಿದರು. 182 ಪ್ಯಾಂಟ್ರಿ ಕಾರುಗಳನ್ನು ಸಹ ಪರಿಶೀಲಿಸಲಾಗಿದೆ ಮತ್ತು ನ್ಯೂನತೆಗಳನ್ನು ಸರಿಪಡಿಸುವ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು.

ನಿಯಮ ಉಲ್ಲಂಘಿಸಿದವರಿಗೆ ಶಿಕ್ಷೆ ಹಾಗು ದಂಡ ಖಚಿತ

ರೈಲ್ವೆಯಲ್ಲಿ ದಹನಕಾರಿ ಮತ್ತು ಸ್ಫೋಟಕ ವಸ್ತುಗಳನ್ನು ಸಾಗಿಸುವುದು ಶಿಕ್ಷಾರ್ಹ ಅಪರಾಧವಾಗಿದೆ ಎಂದು ರೈಲ್ವೆ ಇಲಾಖೆ ಕಡ್ಡಾಯವಾಗಿ ಆದೇಶ ಹೊರಡಿಸಿದೆ ಮತ್ತು ಈ ನಿಯಮವನ್ನು ಮೀರಿದವರಿಗೆ ರೈಲ್ವೆ ಕಾಯಿದೆ, 1989 ರ ಸೆಕ್ಷನ್ 67, 164 ಮತ್ತು 165 ರ ಅಡಿಯಲ್ಲಿ 1,000 ರೂ.ವರೆಗೆ ದಂಡ ಅಥವಾ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ .

Leave A Reply

Your email address will not be published.