Health Scheme: ಸರ್ಕಾರೀ ನೌಕರರಿಗೆ ಇನ್ನೊಂದು ಘೋಷಣೆ, ಹೊಸ ಸಂಜೀವಿನಿ ಯೋಜನೆ ಜಾರಿಗೆ ತಂದ ಸಿದ್ದರಾಮಯ್ಯ ಸರ್ಕಾರ.

ರಾಜ್ಯ ಸರಕಾರಿ ನೌಕರರಿಗೆ ಸರ್ಕಾರದಿಂದ ಹೊಸ ಯೋಜನೆ ಜಾರಿ

Karnataka Arogya Sanjeevini Scheme: ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಅವಲಂಬಿತರ ಕುಟುಂಬದ ಸದಸ್ಯರಿಗೆ ನಗದು ರಹಿತ ಚಿಕಿತ್ಸಾ ಸೌಲಭ್ಯವನ್ನು ಒದಗಿಸಲು ಹೊಸ ಯೋಜನೆಯೊಂದನ್ನು ಜಾರಿಗೆ ತರಲು ಸಿದ್ದರಾಮಯ್ಯ (Siddaramaiah) ಸರಕಾರ ಆದೇಶಿಸಿದೆ. ಈ ಬಗ್ಗೆ ರಾಜ್ಯ ಸರ್ಕಾರ ನೌಕರರಿಗೆ ಹಾಗು ಅವರ ಅವಲಂಬಿತ ಕುಟುಂಬದ ಸದಸ್ಯರಿಗೆ ಸುಲಭ ಚಿಕಿತ್ಯೆಗೆ ಅನುವು ಮಾಡಿಕೊಡಲಾಗಿದೆ.

ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಅನುಷ್ಠಾನಗೊಳಿಸುವ ಸಂಬಂಧ ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವಲಂಬಿತರ ಸದಸ್ಯರ ಮಾಹಿತಿಯನ್ನು ಹೆಚ್.ಆರ್ ಎಂ.ಎಸ್ ತಂತ್ರಾಂಶದಲ್ಲಿ ಇಂದೀಕರಿಸುವ ಕುರಿತಂತೆ ರಾಜ್ಯ ಸರ್ಕಾರ ಮಹತ್ವದ ಸೂಚನೆ ನೀಡಿದೆ.

karnataka arogya sanjeevini scheme
Image Credit: Other Source

ರಾಜ್ಯ ಸರ್ಕಾರಿ ನೌಕರರಿಗೆ ಆರೋಗ್ಯ ಸಂಜೀವಿನಿ ಯೋಜನೆ

ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಅವಲಂಬಿತರ ಕುಟುಂಬದ ಸದಸ್ಯರಿಗೆ ನಗದು ರಹಿತ ಚಿಕಿತ್ಸಾ ಸೌಲಭ್ಯವನ್ನು ಒದಗಿಸಲು ನೂತನ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಅನುಷ್ಠಾನಗೊಳಿಸುವ ಸಂಬಂಧ ಸರ್ಕಾರಿ ನೌಕರರಿಗೆ ಹಾಗೂ ಅವರ ಅವಲಂಬಿತರ ಸದಸ್ಯರನ್ನು ಯೋಜನೆಯಡಿಯಲ್ಲಿ ನೋಂದಾಯಿಸಲು ಹೆಚ್.ಆರ್.ಎಂ.ಎಸ್ 1.0 Jogos (Web application) https://hrms.karnataka.gov.in URL uses are ಮೊಬೈಲ್ https://hrmsenroll.karnataka.gov.in URL ಮೂಲಕ ನೋಂದಾಯಿಸಿಕೊಳ್ಳಲು ಅವಕಾಶ ಕಲ್ಪಸಲಾಗಿದೆ.

health scheme for state government employees
Image Credit: News9live

ಹಂತ ಹಂತವಾದ ಪ್ರಕ್ರಿಯೆ ಮೂಲಕ ನೋಂದಾವಣೆ

ಈ ಸಂಬಂಧ ಕೈಪಿಡಿಯ ಅಂಕ್ ಅನ್ನು (ಕನ್ನಡ ಮತ್ತು ಆಂಗ್ಲಭಾಷೆಯಲ್ಲಿ) ಇಲಾಖೆಯ ವೆಬ್‌ಸೈಟ್‌ನಲ್ಲಿ ನೀಡಲಾಗಿದ್ದು, ಅದರಲ್ಲಿ ಹಂತ ಹಂತವಾಗಿ ನೋಂದಾಯಿಸುವ ವಿಧಾನ ವಿವರಿಸಲಾಗಿದೆ. ಅದರಂತೆ ಇಲಾಖಾ ವ್ಯಾಪ್ತಿಯ ಎಲ್ಲಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು / ಕಛೇರಿಗಳ ನೌಕರರಿಗೆ ಹಾಗೂ ಅವರ ಅವಲಂಬಿತ ಕುಟುಂಬದ ಸದಸ್ಯರ ಅವಶ್ಯಕ ಮಾಹಿತಿಯನ್ನು ಡಿ.ಡಿ.ಓ ಹಂತದಲ್ಲಿ ಹೆಚ್.ಆರ್.ಎಂ.ಎಸ್ ತಂತ್ರಾಂಶದಲ್ಲಿ ಇಂಧೀಕರಿಸುವಂತೆ ಈ ಮೂಲಕ ಸೂಚಿಸಲಾಗಿದೆ.

Leave A Reply

Your email address will not be published.