Employees DA: ರಾಜ್ಯ ಸರ್ಕಾರೀ ನೌಕರರಿಗೆ ಭರ್ಜರಿ ಆಫರ್, ದಸರಾ ಹಬ್ಬದ ಉಡುಗೊರೆ ನೀಡಿದ ಕಾಂಗ್ರೆಸ್ ಸರ್ಕಾರ.
ರಾಜ್ಯ ಸರ್ಕಾರಿ ನೌಕರರಿಗೆ ಸರಕಾರದಿಂದ ತುಟ್ಟಿ ಭತ್ಯೆ ಹೆಚ್ಚಳದ ಕುರಿತು ಆದೇಶ, ನೌಕರರಿಗೆ ಹಬ್ಬದ ಸಂಭ್ರಮ ಹೆಚ್ಚಿಸಿದೆ.
Karnataka Government Employees DA: ನವರಾತ್ರಿ ಹಾಗು ದೀಪಾವಳಿ ಹಬ್ಬದ ಪ್ರಯುಕ್ತ ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರಕಾರದಿಂದ ಬಂಪರ್ ಕೊಡುಗೆ ಸಿಗಲಿದೆ. ರಾಜ್ಯ ಸರ್ಕಾರಿ ನೌಕರರು ತುಟ್ಟಿಭತ್ಯೆಯನ್ನು ಹೆಚ್ಚಿಸುವ ಸಲುವಾಗಿ ತಮ್ಮ ಬೇಡಿಕೆಯನ್ನು ಸರ್ಕಾರದ ಮುಂದಿಟ್ಟಿದ್ದು,
ಆ ಕುರಿತು ಸರ್ಕಾರ ಮಹತ್ವದ ಆದೇಶವನ್ನು ಹೊರಡಿಸಿದೆ. ಅದೇನೆಂದರೆ ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇ 3.75 ರಷ್ಟು ಹೆಚ್ಚಿಸಿ ಸರ್ಕಾರ ಆದೇಶ ಹೊರಡಿಸಿದ್ದು, ಈ ಮೂಲಕ ಶೇಕಡಾ 38.75ಗೆ ಏರಿಕೆಯಾಗಿದೆ.

ಈ ಕೆಳಗಿನ ಷರತ್ತುಗಳು ತುಟ್ಟಿಭತ್ಯೆಗೆ ಅನ್ವಯ
UGC/ AICTE/ ICAR ವೇತನ ಶ್ರೇಣಿಗಳ ಬೋಧಕ ಸಿಬ್ಬಂದಿ ಹಾಗೂ NJPC ವೇತನ ಶ್ರೇಣಿಯ ನ್ಯಾಯಾಂಗ ಅಧಿಕಾರಿಗಳ ತುಟ್ಟಿಭತ್ಯೆಯನ್ನು ಶೇ.4 ರಷ್ಟು ಹೆಚ್ಚಿಸಿ ಸರ್ಕಾರ ಆದೇಶ ಹೊರಡಿಸಿದೆ. ಈ ಮೂಲಕ ಸರ್ಕಾರಿ ನೌಕರರಿಗೆ ಸಂತಸ ಹೆಚ್ಚಾಗಿದೆ.
ಸರ್ಕಾರದ ಮತ್ತು ಜಿಲ್ಲಾ ಪಂಚಾಯತ್ಗಳ ಪೂರ್ಣಾವಧಿ ನೌಕರರಿಗೆ, ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ವರ್ಕ್ಚಾರ್ಜ್ ನೌಕರರಿಗೆ ಹಾಗೂ ಸರ್ಕಾರದಿಂದ ಸಹಾಯಾನುದಾನ ಪಡೆಯುತ್ತಿರುವ ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ವಿಶ್ವವಿದ್ಯಾಲಯಗಳಲ್ಲಿ ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ನೌಕರರುಗಳಿಗೆ ಈ ಆದೇಶ ಅನ್ವಯಿಸುತ್ತದೆ.

ತುಟ್ಟಿಭತ್ಯೆಯನ್ನು ನಗದಾಗಿ ಪಾವತಿ ಮಾಡಲಾಗುತ್ತದೆ
UGC/ AICTE/ ICAR /NJPC , ವೇತನ ಶ್ರೇಣಿಗಳಲ್ಲಿ ಹಾಲಿ ವೇತನ ಪಡೆಯುತ್ತಿರುವ ನೌಕರರಿಗೆ ಮತ್ತು ಎನ್ಜೆಪಿಸಿ ‘ಪಿಂಚಣಿದಾರರಿಗೆ ಸಂಬಂಧಿಸಿದಂತೆ ಪ್ರತ್ಯೇಕ ಅದೇಶಗಳನ್ನು ಹೊರಡಿಸಲಾಗುವುದು. ಈ ಆದೇಶದ ಮೇರೆಗೆ ಲಭ್ಯವಿರುವ ತುಟ್ಟಿಭತ್ಯೆಯನ್ನು ನಗದಾಗಿ ಪಾವತಿ ಮಾಡುವುದು. ತುಟ್ಟಿಭತ್ಯೆಯ ಕಾರಣದಿಂದ ಸಂದಾಯ ಮಾಡಬೇಕಾಗಿರುವ ಐವತ್ತು ಪೈಸೆ ಹಾಗೂ ಅದಕ್ಕಿಂತ ಹೆಚ್ಚಿನ ಭಿನ್ನಾಂಕಗಳನ್ನು ಮುಂದಿನ ರೂಪಾಯಿಗೆ ಪೂರ್ಣಗೊಳಿಸತಕ್ಕದ್ದು ಮತ್ತು ಐವತ್ತು ಪೈಸೆಗಿಂತ ಕಡಿಮ ಇರುವ ಭಿನ್ನಾಂಶಗಳನ್ನು ಕಡೆಗಣಿಸತಕ್ಕದ್ದು.
ತುಟ್ಟಿಭತ್ಯೆ ಬಾಕಿ ಮೊತ್ತವನ್ನು 2023 ರ ಮೇ ಮಾಹೆಯ ವೇತನ ಬಟವಾಡೆಗೂ ಮೊದಲು ಪಾವತಿ ಮಾಡತಕ್ಕದ್ದಲ್ಲ. ತುಟ್ಟಿಭತ್ಯೆಯನ್ನು ಸಂಭಾವನೆಯ ವಿಶಿಷ್ಟ ಅಂಶವಾಗಿ ತೋರಿಸುವುದು ಮತ್ತು ಯಾವುದೇ ಉದ್ದೇಶಕ್ಕಾಗಿ ಇದನ್ನು ವೇತನ ಎಂದು ಪರಿಗಣಿಸಲಾಗುವುದಿಲ್ಲ ಎಂದು ಹೇಳಲಾಗಿದೆ.