Rain Alert: ನವೆಂಬರ್ 10 ರ ತನಕ ಕರ್ನಾಟಕ ಈ ಜಿಲ್ಲೆಗಳಲ್ಲಿ ಧಾರಾಕಾರ ಮಳೆ, ರೆಡ್ ಅಲರ್ಟ್ ಘೋಷಣೆ.
ಕರ್ನಾಟಕದಲ್ಲಿ ಹಿಂಗಾರು ಮಳೆಯ ಆರ್ಭಟ ಹೆಚ್ಚಾಗಲಿದ್ದು, ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
Karnataka Weather Report: ಈ ವರ್ಷ ಕರ್ನಾಟಕ ರಾಜ್ಯದಲ್ಲಿ ಮಳೆಗಾಲ ಬಂದು, ಮುಗಿದು ಹೋಗಿದ್ದೆ ಗೊತ್ತಾಗಲಿಲ್ಲ. ಯಾಕೆಂದರೆ ಮುಂಗಾಲು ಮಳೆ ಈ ಸಲ ಬರದೇ ಜನರನ್ನು ಆಟ ಆಡಿಸಿತು. ಇಷ್ಟು ಕಡಿಮೆ ಮಳೆ ರಾಜ್ಯದಲ್ಲಿ ಯಾವತ್ತು ಆಗಿಲ್ಲ ಎನ್ನಬಹುದು, ಕಡಿಮೆ ಮಳೆಯೂ ಬೆಳೆಗಳ ನಾಶಕ್ಕೆ ಕಾರಣವಾಗಿದೆ.
ಮಳೆ ಕಡಿಮೆ ಆಗಿರುವುದರಿಂದ ರೈತರಿಗೆ ಬಹಳ ನಷ್ಟ ಆಗಿರುವುದನ್ನು ಕಾಣಬಹುದಾಗಿದೆ. ಮುಂಗಾರು ಮಳೆ ತುಂಬ ಕಡಿಮೆ ಬಂದಿದ್ದರಿಂದ ಹಿಂಗಾರು ಮಳೆ ಸ್ವಲ್ಪ ಚುರುಕ್ಕಾಗಿದೆ. ಹಾಗಾಗಿ ಕಳೆದ ಮೂರು ದಿನಗಳಿಂದ ರಾಜ್ಯದ ಹಲವು ಜಿಲ್ಲೆಗಳಿಗೆ ಉತ್ತಮ ಮಳೆ ಆಗಿದ್ದು, ಇನ್ನು ಎರಡು ದಿನ ಮಳೆ ಆಗುವ ಸಾಧ್ಯತೆ ಇದೆ ಎಂದು ವರದಿ ಆಗಿದೆ.
ಭಾರಿ ಮಳೆ ಆಗುವ ಸಾಧ್ಯತೆ ಇರುವ ಜಿಲ್ಲೆಗಳು
ನವೆಂಬರ್ 8ರಂದು ರಾಜ್ಯದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ತುಮಕೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಂತರ, ಮಂಡ್ಯ, ಮೈಸೂರು, ಹಾಸನ, ಚಿಕ್ಕಮಗಳೂರು, ಬಳ್ಳಾರಿ, ದಾವಣಗೆರೆ, ಧಾರವಾಡ, ವಿಜಯಪುರ, ಕಲಬುರಗಿ, ಯಾದಗಿರಿ, ರಾಯಚೂರು, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ಬೆಳಗಾವಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ನವೆಂಬರ್ 9ರಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ದಾವಣಗೆರೆ, ಧಾರವಾರ, ಮಂಡ್ಯ, ಬಳ್ಳಾರಿ, ರಾಯಚೂರು, ಕಲಬುರಗಿ, ವಿಜಯಪುರ, ದಾವಣಗೆರೆ, ಹಾವೇರಿ, ಕೊಪ್ಪಳ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಉಳಿದಂತೆ ಹಲವು ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ನವೆಂಬರ್ 10ರಂದು ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಲಿದ್ದು, ತುಮಕೂರು, ದಾವಣಗೆರೆ, ಶಿವಮೊಗ್ಗ, ದಕ್ಷಿಣ ಕನ್ನಡ, ಮೈಸೂರು, ಮಂಡ್ಯ, ಧಾರವಾಡ ಜಿಲ್ಲೆಗಳಲ್ಲಿ ಚದುರಿದಂತೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ನವೆಂಬರ್ 11 ರಿಂದ 14 ರವರೆಗೆ ರಾಜ್ಯದಲ್ಲಿ ಬಹುತೇಕ ಒಣಹವೆ ಇರಲಿದ್ದು, ನವೆಂಬರ್ 15ರಿಂದ ಮತ್ತೆ ಮಳೆಯಾಗುವ ಮುನ್ಸೂಚನೆ ಇದೆ. ನವೆಂಬರ್ 15ರಂದು ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಕೊಡಗು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರು ಹವಾಮಾನ ವರದಿ ಹೇಳಿಕೆ
ಮಂಗಳವಾರ ಬೆಂಗಳೂರಿನ ಸಂಪಂಗಿರಾಮನಗರ 21.5 ಮಿ.ಮೀ ಮಳೆಯಾಗಿದೆ. ಹಗದೂರು 20.5 ಮಿ.ಮೀ, ಬಾಣಸವಾಡಿ 18 ಮಿ.ಮೀ, ರಾಜಮಹಲ್ ಗುಟ್ಟಹಳ್ಳಿ 18 ಮಿ.ಮೀ, ಕೆಂಗೇರಿ 14.5 ಮಿ.ಮೀ, ಚಾಮರಾಜಪೇಟೆ 14 ಮಿ.ಮೀ, ಕಾಟನ್‌ಪೇಟೆ 13.5 ಮಿ.ಮೀ, ಕಮ್ಮನಹಳ್ಳಿ 12 ಮಿ.ಮೀ, ಕುಶಾಲನಗರ 12 ಮಿ.ಮೀ, ವನ್ನರ್ ಪೇಟೆ 10.5 ಮಿ.ಮೀ, ಕೊಟ್ಟಗೆಪಾಳ್ಯದಲ್ಲಿ 10 ಮಿ.ಮೀ ಮಳೆಯಾಗಿದೆ. ಸೋಮವಾರ ಮತ್ತು ಮಂಗಳವಾರ ಬೆಂಗಳೂರು ನಗರ ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದ್ದು, ಬುಧವಾರ ಮಳೆ ಪ್ರಮಾಣ ಕಡಿಮೆಯಾಗಲಿದೆ ಎಂದು ವರದಿ ಹೇಳಿದೆ.