Yuva Nidhi:ಡಿಪ್ಲೋಮ ಮತ್ತು ಪದವಿ ಮಾಡಿದವರಿಗೆ ಗುಡ್ ನ್ಯೂಸ್, ಯುವ ನಿಧಿ ಯೋಜನೆಯ ಬಗ್ಗೆ ಇನ್ನೊಂದು ಘೋಷಣೆ.

ಯುವ ನಿಧಿ ಯೋಜನೆಯ ಬಗ್ಗೆ ಇನ್ನೊಂದು ಘೋಷಣೆ ಮಾಡಿದ ಸಿದ್ದರಾಮಯ್ಯ.

Karnataka Yuva Nidhi Scheme 2023: ಕರ್ನಾಟಕದಲ್ಲಿ ಆಡಳಿತ ನೆಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದ ಯೋಜನೆಗಳಲ್ಲಿ ಯುವನಿಧಿ ಯೋಜನೆ ಕೂಡ ಒಂದಾಗಿದ್ದು, ಹಲವಾರು ಯೋಜನೆಗಳಲ್ಲಿ ಈ ಯೋಜನೆ ಮಾತ್ರ ನಿಧಾನಗತಿಯಾಗಿ ಸಾಗುತ್ತಿದೆ.

ಯುವನಿಧಿ ಯೋಜನೆ ಎನ್ನುವುದು ಡಿಪ್ಲೋಮಾ, ಪದವೀಧರ ಶಿಕ್ಷಣ ಪಡೆದವರಿಗೆ ಸಂಬಂಧಿಸಿದ್ದಾಗಿದೆ. ಈ ಯೋಜನೆಯಲ್ಲಿ ಡಿಪ್ಲೋಮಾ, ಪದವೀಧರ ಶಿಕ್ಷಣ ಮುಗಿಸಿ ನಿರುದ್ಯೋಗದಲ್ಲಿ ಇರುವವರ ಖಾತೆಗೆ ಹಣ ಜಮಾ ಮಾಡಲಾಗುತ್ತದೆ. ಹಾಗು ಈ ಯೋಜನೆಯ ಬಗ್ಗೆ ಮುಖ್ಯ ಮಂತ್ರಿಗಳು ಮಹತ್ವದ ಹೇಳಿಕೆ ನೀಡಿದ್ದಾರೆ.       

Karnataka Yuva Nidhi Scheme
Image Credit: Pmmodiyojana

ಜನವರಿಯಿಂದ ಯುವನಿಧಿ ಯೋಜನೆ ಪ್ರಾರಂಭ

ಮೈಸೂರು ದಸರಾ ಮಹೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಭಾಗವಹಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯ ಮಂತ್ರಿಗಳು ನಾಡಿನ ಸಂಪತ್ತು, ಅಧಿಕಾರ ಎಲ್ಲರಿಗೂ ಹಂಚಿಕೆಯಾಗಬೇಕು. ಎಲ್ಲರಿಗೂ ಸಮಾನ ಅವಕಾಶಗಳು ಸಿಗಬೇಕು. ಇದನ್ನೇ ಡಾ.ಬಿ.ಆರ್.ಅಂಬೇಡ್ಕರ್ ಹೇಳಿದ್ದರು ಎಂದು ಹೇಳಿದ್ದಾರೆ.

ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರವು 5 ಗ್ಯಾರಂಟಿಗಳ ಪೈಕಿ ಈಗಾಗಲೇ 4 ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದು, ಜನವರಿಯಲ್ಲಿ 5 ನೇ ಗ್ಯಾರಂಟಿ ಯುವನಿಧಿ ಯೋಜನೆಯನ್ನು ಜಾರಿಗೆ ತರಲಾಗುವುದು ಎಂದು ಹೇಳಿದ್ದಾರೆ. ಈ ಕಾರ್ಯಕ್ರಮದ ಮೂಲಕ ರಾಜ್ಯ ಸರ್ಕಾರವು ಡಿಪ್ಲೋಮಾ, ಪದವೀಧರರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, 5 ನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆ ಜಾರಿ ಬಗ್ಗೆ ಸಿಎಂ ಸಿದ್ದರಾಮಯ್ಯ ಮಹತ್ವದ ಹೇಳಿಕೆ ನೀಡಿದ್ದಾರೆ.

Yuva Nidhi Latest Update
Image Credit: News 18

ರಾಜ್ಯದಲ್ಲಿ ಉಚಿತ ಗ್ಯಾರೆಂಟಿ ಯೋಜನೆಗಳದ್ದೇ ಹವಾ

ಈ ವರ್ಷ ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಾಗಿಂದ ಹಲವು ಉಚಿತ ಯೋಜನೆಗಳು ರಾಜ್ಯದಲ್ಲಿ ಜಾರಿ ಇದೆ . ರಾಜ್ಯ ಸರ್ಕಾರವು ಈಗಾಗಲೇ ಶಕ್ತಿ ಯೋಜನೆ, ಗೃಹಜ್ಯೋತಿ, ಅನ್ನಭಾಗ್ಯ, ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಲಾಗಿದೆ. ಡಿಸೆಂಬರ್ ಅಂತ್ಯಕ್ಕೆ ಡಿಪ್ಲೋಮಾ, ಪದವೀಧರರಿಗೆ 1,500 ರೂ. ಹಾಗೂ 3,000 ರೂ. ನೀಡುವ ಯುವನಿಧಿ ಯೋಜನೆಯನ್ನು ಜಾರಿಗೆ ತರಲು ಸಕಲ ಸಿದ್ಧತೆ ನಡೆಸಲಾಗಿದೆ. ಈ ಒಂದು ಯೋಜನೆ ಜಾರಿಗೆ ತಂದರೆ 05 ಗ್ಯಾರೆಂಟಿ ಯೋಜನೆಗಳು ಜನರಿಗೆ ಸಂಪೂರ್ಣವಾಗಿ ದೂರೆತಂತೆ ಆಗುತ್ತದೆ.

Leave A Reply

Your email address will not be published.