Yuva Nidhi Latest: ಡಿಪ್ಲೋಮ ಮತ್ತು ಪದವಿ ಆದವರಿಗೆ ಗುಡ್ ನ್ಯೂಸ್, ಈ ದಿನದಂದು ಯುವ ನಿಧಿ ಯೋಜನೆಗೆ ಜಾರಿಗೆ.

ಯುವನಿಧಿ ಯೋಜನೆ ಕುರಿತು ಸಿಎಂ ಸಿದ್ದರಾಮಯ್ಯ ಮಹತ್ವದ ಮಹಿತಿ ನೀಡಿದ್ದಾರೆ.

Karnataka Yuva Nidhi Scheme 2023: ರಾಜ್ಯ ಸರ್ಕಾರದ 5 ಗ್ಯಾರೆಂಟಿ ಯೋಜನೆಗಳಲ್ಲಿ ಯುವನಿಧಿ ಯೋಜನೆ (Yuva Nidhi Scheme) ಕೂಡ ಒಂದಾಗಿದೆ. ಈ ಯೋಜನೆಯ ಅಡಿಯಲ್ಲಿ ಪದವಿ ಹಾಗು ಡಿಪ್ಲೋಮ ಮುಗಿಸಿ ಉದ್ಯೋಗ ಹುಡುಕುತ್ತಿರುವವರಿಗೆ ಮಾಸಿಕವಾಗಿ ಅವರ ಖಾತೆಗೆ ಹಣ ಜಮೆ ಮಾಡುವುದಾಗಿದೆ.

ಈ ಯೋಜನೆಯ ಮುಖ್ಯ ಉದ್ದೇಶವೇ ಶಿಕ್ಷಣ ಪೂರ್ತಿಗೊಳಿಸಿದ ಪದವೀಧರ ಯುವಜನರಿಗೆ ಉದ್ಯೋಗ ಹುಡುಕಿಕೊಳ್ಳಲು ಅಗತ್ಯ ಸಮಯ ದೊರಕಬೇಕು ಮತ್ತು ಈ ಅವಧಿಯಲ್ಲಿ ಅವರು ಹತಾಶೆ, ಒತ್ತಡಗಳಿಗೆ ಒಳಗಾಗದೆ ತಮ್ಮಿಷ್ಟದ ಉದ್ಯೋಗವನ್ನು ಆಯ್ಕೆ ಮಾಡಿಕೊಳ್ಳಲು ಸಾಕಷ್ಟು ಅವಕಾಶ ಸಿಗಬೇಕು ಎನ್ನುವುದಾಗಿದೆ.

Karnataka Yuva Nidhi Scheme 2023
Image Credit: Hindustantimes

ಯುವನಿಧಿ ಯೋಜನೆಗೆ ಚಾಲನೆ

ರಾಜ್ಯದಲ್ಲಿ ಈಗಾಗಲೇ 5 ಗ್ಯಾರೆಂಟಿ ಯೋಜನೆಯಲ್ಲಿ 4 ಯೋಜನೆಗಳು ಜಾರಿಗೆ ಬಂದಿದ್ದು, ಮುಂದಿನ ಜನವರಿ ತಿಂಗಳಲ್ಲಿ ಯುವನಿಧಿ ಯೋಜನೆ ಜಾರಿಗೆ ಬರಲಿದೆ ಎಂದು ಮಾನ್ಯ ಮುಖ್ಯ ಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಹೇಳಿಕೆ ನೀಡಿದ್ದಾರೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದು, ಶಿಕ್ಷಣ ಪೂರ್ತಿಗೊಳಿಸಿದ ಪದವೀಧರ ಯುವಜನರಿಗೆ ಉದ್ಯೋಗ ಹುಡುಕಿಕೊಳ್ಳಲು ಅಗತ್ಯ ಸಮಯ ದೊರಕಬೇಕು ಮತ್ತು ಈ ಅವಧಿಯಲ್ಲಿ ಅವರು ಹತಾಶೆ, ಒತ್ತಡಗಳಿಗೆ ಒಳಗಾಗದೆ ತಮ್ಮಿಷ್ಟದ ಉದ್ಯೋಗವನ್ನು ಆಯ್ಕೆ ಮಾಡಿಕೊಳ್ಳಲು ಸಾಕಷ್ಟು ಅವಕಾಶ ಸಿಗಬೇಕು ಎಂದಿದ್ದಾರೆ .

ಎಲ್ಲಾ ಯೋಜನೆಗಳನ್ನು ಜಾರಿಗೆ ತರುವಲ್ಲಿ ಯಶಸ್ವಿ ಆಗಿದ್ದೇವೆ

ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಸುದ್ದಿಗೋಷ್ಠಿಯೊಂದಿಗೆ ಮಾತನಾಡಿ ಕಳೆದ 6 ತಿಂಗಳ ಅವಧಿಯಲ್ಲಿ ನಾಡಿನ ಜನತೆಗೆ ನೀಡಿದ್ದ ಎಲ್ಲಾ ಭರವಸೆಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇವೆ. ಗ್ಯಾರಂಟಿ ಯೋಜನೆಗಳು ಸೇರಿದಂತೆ ಎಲ್ಲ ಅಭಿವೃದ್ಧಿ ಕಾರ್ಯಕ್ರಮಗಳ ಜಾರಿ ಮತ್ತು ಸಮಾಜದ ಶಾಂತಿ-ಸಾಮರಸ್ಯದ ರಕ್ಷಣೆ ನಮ್ಮ ಸರ್ಕಾರದ ಪ್ರಮುಖ ಉದ್ದೇಶವಾಗಿದೆ ಎಂದರು. ಅಷ್ಟೇ ಅಲ್ಲದೆ ಯುವನಿಧಿ ಯೋಜನೆ ಬಗ್ಗೆ ಹೇಳುತ್ತಾ ಈ ಯೋಜನೆ ಜನವರಿಯಿಂದ ಜಾರಿಗೆ ಬರಲಿದ್ದು, ಸುಮಾರು ನಾಲ್ಕೂವರೆ ಲಕ್ಷ ಯುವಜನತೆಗೆ ನೆರವಾಗಲಿದೆ ಎಂದು ಅಂದಾಜಿಸಲಾಗಿದೆ ಎಂದು ಹೇಳಿದ್ದಾರೆ.

Yuva Nidhi Scheme Latest Update
Image Credit: Original Source

ಆರ್ಥಿಕ ಸಮಸ್ಯೆ ನಿರುದ್ಯೋಗಿಗಳನ್ನೂ ದಾರಿತಪ್ಪಿಸಬಾರದು

ನಿರುದ್ಯೋಗದಿಂದ ಎದುರಾಗುವ ಆರ್ಥಿಕ ಸಮಸ್ಯೆಗಳು ನಿರುದ್ಯೋಗಿಯವರನ್ನು ಬಾಧಿಸದಂತೆ ತಡೆಯಬೇಕು. ಈ ಕಾರಣಕ್ಕಾಗಿ ನಾವು ಪದವೀಧರ ಮತ್ತು ಡಿಪ್ಲೊಮಾ ಪದವೀಧರ ನಿರುದ್ಯೋಗಿಗಳಿಗೆ ಮಾಸಿಕ ನಿರುದ್ಯೋಗ ಭತ್ಯೆ ಒದಗಿಸುವ ಯುವನಿಧಿ ಯೋಜನೆ ಜಾರಿಗೆ ತಂದಿದ್ದಾಗಿದೆ, ಈ ಯೋಜನೆಯ ಬಗ್ಗೆ ಮೊದಲ ಸಂಪುಟ ಸಭೆಯಲ್ಲಿಯೇ ಆಡಳಿತಾತ್ಮಕ ಅನುಮೋದನೆ ನೀಡಿದ್ದೇವೆ ಎಂದು ಮುಖ್ಯ ಮಂತ್ರಿಗಳು ಹೇಳಿದ್ದಾರೆ.

Leave A Reply

Your email address will not be published.