Kodi Mutt: ದೇಶದ ಬಗ್ಗೆ ಇನ್ನೊಂದು ಸ್ಪೋಟಕ ಭವಿಷ್ಯ ನುಡಿದ ಕೊಡಿ ಮಠದ ಶ್ರೀಗಳು, ಶ್ರೀಗಳ ಭವಿಷ್ಯ ನಿಜವಾಗುತ್ತಾ…?

ಇದೀಗ ರಾಜ್ಯ ಹಾಗೂ ರಾಷ್ಟ್ರ ರಾಜಕೀಯದ ಬಗ್ಗೆ ಭವಿಷ್ಯ ನುಡಿದ ಕೊಡಿ ಮಠದ ಶ್ರೀಗಳು.

Kodi Mutt Swamiji Prediction About State And National Politics: ಹಲವು ವಿಷಯದಲ್ಲಿ ಆಗಾಗ್ಗೆ ಭವಿಷ್ಯವನ್ನು ನುಡಿಯುವ ಕೋಡಿಮಠ ಶ್ರೀ ಸ್ವಾಮೀಜಿ (Kodi Mutt Swamy) ಯವರು ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯಲ್ಲಿ ಇರುತ್ತಾರೆ.

ನಿನ್ನೆ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ರಾಜ್ಯ ಹಾಗೂ ರಾಷ್ಟ್ರ ರಾಜಕೀಯದಲ್ಲಿ ಮಹತ್ವದ ಅಸ್ಥಿರತೆ ಉಂಟಾಗಲಿದೆ ಎಂಬುದಾಗಿ ಸ್ಪೋಟಕ ಭವಿಷ್ಯ ನುಡಿದಿದ್ದಾರೆ.

kodi mutt swamiji prediction about state and national politics
Image Credit: Oneindia

ದೇಶ, ರಾಜ್ಯದಲ್ಲಿ ವಿಪರೀತ ಮಳೆಯಾಗೋ ಲಕ್ಷಣವಿದೆ
ಕಳೆದ ಮೂರು ದಿನಗಳ ಹಿಂದೆ ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದಂತ ಅವರು, ಈ ವರ್ಷವೂ ಮಳೆಗೂ ತೊಂದರೆ ಇಲ್ಲ. ಅನ್ನಕ್ಕೂ ಕೊರತೆಯಿಲ್ಲ. ದೇಶ, ರಾಜ್ಯದಲ್ಲಿ ವಿಪರೀತ ಮಳೆಯಾಗೋ ಲಕ್ಷಣವಿದೆ ಎಂದು ಭವಿಷ್ಯ ನುಡಿದಿದ್ದರು. ಮಳೆಗೆ ಯಾವುದೇ ತೊಂದರೆ ಇಲ್ಲ. ಮೊನ್ನೆ ಬಂದ ರೀತಿಯೇ ಇನ್ನೂ ಭಾರೀ ಮಳೆ ಬರಲಿದೆ. ಗುಡುಗು ಸಹಿತ ಮಳೆಯಿಂದ ಅಪಮೃತ್ಯು ಉಂಟಾಗಲಿದೆ. ಪ್ರಕೃತಿಯಿಂದಲೂ ಬಹಳ ಹಾನಿಯಾಗಲಿದೆ ಎಂದು ಹೇಳಿದ್ದರು.

ರಾಷ್ಟ್ರ ಹಾಗೂ ರಾಜ್ಯ ರಾಜಕಾರಣದಲ್ಲಿ ಯುಗಾದಿ ವೇಳೆಗೆ ಅಸ್ಥಿರತೆ ಕಾಡಲಿದೆ
ಇನ್ನೂ ರಾಜ್ಯ ಸರ್ಕಾರದ ಕುರಿತಂತೆ ಮಾತನಾಡಿದಂತ ಅವರು, ಸ್ಮಶಾನದಲ್ಲಿ ಪಿಶಾಚಿ ಕುಣಿದಂತೆ ಆಗ್ತಿದೆ. ಆದರೇ ಏನೂ ಆಗೋದಿಲ್ಲ. ನೋಡೋರಿಲ್ಲ, ಕೇಳೋರಿಲ್ಲ. ಆನಂದ ಪಡುವವರಿಲ್ಲ. ಜೊತೆಗೆ ರಾಜ್ಯ ಸರ್ಕಾರಕ್ಕೆ ಏನೂ ತೊಂದರೆ ಆಗೋದಿಲ್ಲ. ಇದನ್ನು ಬಿಟ್ಟು ನಾನು ಏನೂ ಹೇಳಲ್ಲ. ನನಗೆ ಎಲ್ಲರೂ ಬೇಕಾಗಿರೋರು ಎಂದು ಹೇಳಿದರು.

kodi mutt swamiji prediction
Image Credit: Pipanews

ಇದೀಗ ಇಂದು ರಾಷ್ಟ್ರ ಹಾಗೂ ರಾಜ್ಯ ರಾಜಕಾರಣದಲ್ಲಿ ಯುಗಾದಿ ವೇಳೆಗೆ ಅಸ್ಥಿರತೆ ಕಾಡಲಿದೆ ಎಂಬುದಾಗಿ ಸ್ಪೋಟಕ ಭವಿಷ್ಯವನ್ನು ಕೋಡಿಮಠ ಶ್ರೀಗಳು ನುಡಿದಿದ್ದಾರೆ. ಈ ರೀತಿಯಾಗಿ ಹೇಳಿಕೆ ನೀಡಿ ಜನರಲ್ಲಿ ಕುತೂಹಲ ಹೆಚ್ಚಾಗುವಂತೆ ಮಾಡಿದ್ದಾರೆ.

Leave A Reply

Your email address will not be published.