Kushin Mane: ಆರು ವರ್ಷದ ಎಲ್ಲ ಮಕ್ಕಳಿಗೆ ಹೊಸ ಯೋಜನೆ ಘೋಷಣೆ ಮಾಡಿದ ಸಿದ್ದರಾಮಯ್ಯ, 4000 ಮನೆ ತೆರೆಯಲಾಗುತ್ತಿದೆ.
ಮಕ್ಕಳಿಗಾಗಿ ಕೂಸಿನ ಮನೆ ಯೋಜನೆಯನ್ನ ಜಾರಿಗೆ ತಂದ ರಾಜ್ಯ ಸರ್ಕಾರ.
Kusina Mane Yojane: ರಾಜ್ಯದ ಮುಖ್ಯ ಮಂತ್ರಿಯಾಗಿರುವ ಶ್ರೀಯುತ ಸಿದ್ದರಾಮಯ್ಯ (Siddaramaiah) ಅವರು ರಾಜ್ಯದಲ್ಲಿ ಅಧಿಕಾರಕ್ಕೆ ಬರುವ ಮುನ್ನ ಐದು ಗ್ಯಾರಂಟಿ ಗಳನ್ನೂ ಘೋಷಣೆ ಮಾಡಿದ್ದು ಅದರಲ್ಲಿ ಮೂರೂ ಯೋಜನೆಯನ್ನ ಈಗಾಗಲೇ ಜಾರಿಗೆ ತಂದಿದ್ದಾರೆ. ಸದ್ಯ ಕಾಂಗ್ರೆಸ್ ಸರ್ಕಾರ ಜನರಿಗಾಗಿ ಈಗಾಗಲೇ ಹಲವು ಯೋಜನೆಯನ್ನ ಘೋಷಣೆ ಮಾಡಿದ್ದು ಜನರು ಕಾಂಗ್ರೆಸ್ ಸರ್ಕಾರದ ಯೋಜನೆಗಳಿಗೆ ಮೆಚ್ಚುಗೆಯನ್ನ ವ್ಯಕ್ತಪಡಿಸಿದ್ದಾರೆ ಎಂದು ಹೇಳಬಹುದು.
ಇದರ ನಡುವೆ ಈಗ ಸಿದ್ದರಾಮಯ್ಯ ಸರ್ಕಾರ ರಾಜ್ಯದ ಆರು ವರ್ಷದ ಒಳಗಿನ ಮಕ್ಕಳಿಗಾಗಿ ಇನ್ನೊಂದು ಹೊಸ ಯೋಜನೆಯನ್ನ ಜಾರಿಗೆ ತಂದಿದ್ದು ಇದು ಪೋಷಕರ ಸಂತಸದಕ್ಕೆ ಕಾರಣವಾಗಿದೆ ಎಂದು ಹೇಳಬಹುದು. ಹಾಗಾದರೆ ಆ ಹೊಸ ಯೋಜನೆ ಯಾವುದು ಅನ್ನುವುದರ ಬಗ್ಗೆ ತಿಳಿಯೋಣ ಬನ್ನಿ.
ಮಕ್ಕಳಿಗಾಗಿ ಇನ್ನೊಂದು ಹೊಸ ಯೋಜನೆ ಜಾರಿಗೆ
ಇತ್ತೀಚಿನ ದಿನಗಳಲ್ಲಿ ಮಕ್ಕಳು ಹೆಚ್ಚಾಗಿ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಕಾರಣ ರಾಜ್ಯ ಈಗ ಹೊಸ ಯೋಜನೆಯನ್ನ ಜಾರಿಗೆ ತರಲು ತೀರ್ಮಾನವನ್ನ ಮಾಡಲಿದೆ. ಮಕ್ಕಳ ಸುರಕ್ಷತೆ, ಆರೋಗ್ಯ ಹಿತದೃಷ್ಟಿ ಮತ್ತು ಪೌಷ್ಟಿಕತೆಯ ಉದ್ದೇಶದಿಂದ ಈ ಯೋಜನೆಯನ್ನ ಜಾರಿಗೆ ತರಲು ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯ ಅವರು ನಿರ್ಧಾರ ಮಾಡಿದ್ದಾರೆ ಎಂದು ಹೇಳಿದರೆ ತಪ್ಪಾಗಲ್ಲ.
ಮಕ್ಕಳಿಗಾಗಿ ಕೂಸಿನ ಮನೆ ಯೋಜನೆ ಜಾರಿಗೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಹಿಂದೆ ಹೇಳಿರುವಂತೆ ಮಕ್ಕಳಿಗಾಗಿ ಕೂಸಿನ ಮನೆ ಯೋಜನೆಯನ್ನ ರಾಜ್ಯದಲ್ಲಿ ಜಾರಿಗೆ ತರಲಾಗಿದೆ. ಈ ಯೋಜನೆಯ ಅಡಿಯಲ್ಲಿ ಸುಮಾರು 4 ಸಾವಿರ ಕೂಸಿನ ಮನೆ ತೆರೆಯುವ ನಿರ್ಧಾರವನ್ನ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ. 2023 -24 ಬಜೆಟ್ ನಲ್ಲಿ ಘೋಷಣೆ ಮಾಡಿರುವ ಕೆಲವು ಸವಲತ್ತುಗಳ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ ಅವರು ಮಕ್ಕಳ ಆರೋಗ್ಯಕ್ಕಾಗಿ ಹೆಚ್ಚಿನ ಗಮನ ಕೊಡುವುದು ನಮ್ಮ ಕರ್ತವ್ಯ ಆಗಿದೆ ಎಂದು ಹೇಳಿದ್ದಾರೆ.
ಮಕ್ಕಳ ಆರೋಗ್ಯಕ್ಕಾಗಿ ಕೂಸಿನ ಮನೆ ಯೋಜನೆ ಜಾರಿಗೆ
ಮಕ್ಕಳ ಆರೋಗ್ಯ, ಸುರಕ್ಷತೆ ಮತ್ತು ಮಕ್ಕಳ ಮುಂದಿನ ಭವಿಷ್ಯದ ಹಿತದೃಷ್ಟಿಯಿಂದ ರಾಜ್ಯದಲ್ಲಿ ಸುಮಾರು 4000 ಕೂಸಿನ ಮನೆಗಳನ್ನ ತೆರೆಯಲಾಗುತ್ತದೆ ಮತ್ತು ಅಲ್ಲಿ ಆರು ವರ್ಷದ ಒಳಗಿನ ಎಲ್ಲಾ ಮಕ್ಕಳಿಗೆ ಆರೋಗ್ಯ ತಪಾಸಣೆ, ಮಕ್ಕಳಿಗೆ ಬೇಕಾದ ವಿದ್ಯಾಭ್ಯಾಸ ಸೇರಿದಂತೆ ಅವರಿಗೆ ಹಲವು ಸವಲತ್ತುಗಳು ದೊರೆಯುತ್ತದೆ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಸದ್ಯ ಸಿದ್ದರಾಮಯ್ಯ ಅವರ ಈ ಘೋಷಣೆ ಮಕ್ಕಳ ಪೋಷಕರ ಮೆಚ್ಚುಗೆಗೆ ಕಾರಣವಾಗಿದೆ ಎಂದು ಹೇಳಿದರೆ ತಪ್ಪಾಗಲ್ಲ.