2024 Election: 2024 ರ ಕೇಂದ್ರದ ಚುನಾವಣೆಯಲ್ಲಿ ಯಾರು ಅಧಿಕಾರಕ್ಕೆ ಬರಲಿದ್ದಾರೆ, ಸಮೀಕ್ಷೆಯಿಂದ ತಿಳಿದುಬಂದ ಮಾಹಿತಿ.
2024 ರ ಕೇಂದ್ರದ ಚುನಾವಣೆಯ ಬಗ್ಗೆ ಸಮೀಕ್ಷೆ ನಡೆದಿದ್ದು ಈ ಪಕ್ಷ ಅಧಿಕಾರ ಸ್ವೀಕಾರ ಮಾಡಲಿದೆ.
Lok Sabha Polls Survey: ಇನ್ನು ಮುಂದಿನ ಹಂತದ ಲೋಕಸಭಾ ಚುನಾವಣೆ (Lokh Sabha Election) ಸದ್ಯದಲ್ಲೇ ಬರಲಿದೆ. ಆ ವಿಚಾರವಾಗಿ ಈಗಾಗಲೇ ಸಮೀಕ್ಷೆಗಳು ಪ್ರಾಂಭವಾಗಿದ್ದು, ಅನೇಕ ಅಭಿಪ್ರಾಯಗಳು ಹೊರಬೀಳುತ್ತಿದೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕೇಂದ್ರದಲ್ಲಿ ಮತ್ತೆ ಬಿಜೆಪಿ ಸರ್ಕಾರ ರಚನೆಯಾಗಲಿದೆ ಎಂದು ಸಮೀಕ್ಷೆ ಹೇಳಿದೆ.
ವಿವಿಧ ರಾಜಕೀಯ ಪಕ್ಷಗಳ ಮೈತ್ರಿಕೂಟಗಳು ರಚನೆಯಾಗಿ ಮುಂದಿನ ಚುನಾವಣೆಯಲ್ಲಿ ಅಧಿಕಾರಕ್ಕೆ ಬರಲು ಪೂರ್ವ ತಯಾರಿ ಮಾಡಿಕೊಂಡಿವೆ. ಇದೀಗ ಲೋಕಸಭೆಗೆ ಚುನಾವಣೆ ನಡೆದರೆ ಬಿಜೆಪಿ ನೇತೃತ್ವದ ಎನ್.ಡಿ.ಎ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎನ್ನಲಾಗಿದೆ.

ಬಿಜೆಪಿ ನೇತೃತ್ವದ NDA ಸರ್ಕಾರ ಅಧಿಕಾರಕ್ಕೆ ಬರುವ ನಿರೀಕ್ಷೆ
ಲೋಕಸಭಾ ಚುನಾವಣೆಯ ಸಮೀಕ್ಷೆಯ ಪ್ರಕಾರ ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ಪ್ರಬಲ ಸ್ಪರ್ಧೆ ನೀಡಿದರೂ 175 ಸ್ಥಾನಗಳನ್ನು ಗಳಿಸಬಹುದು. ಸಮೀಕ್ಷೆಯ ಪ್ರಕಾರ ಎನ್.ಡಿ.ಎ. 307 ಸ್ಥಾನ, ಇತರರು 61 ಸ್ಥಾನಗಳಲ್ಲಿ ಜಯಗಳಿಸಲಿದ್ದಾರೆ ಎಂದು ಟೈಮ್ಸ್ ನೌ -ಇಟಿಜಿ ರಿಸರ್ಚ್ ಸಮೀಕ್ಷಾ ವರದಿಯಲ್ಲಿ ತಿಳಿಸಿದೆ.
ಬಹುತೇಕ ರಾಜ್ಯಗಳಲ್ಲಿ NDA ಮೈತ್ರಿಕೂಟ ಮುನ್ನಡೆ ಗಳಿಸಲಿದೆ ಎಂದು ಸಮೀಕ್ಷೆ ತಿಳಿಸಿದೆ. ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ 18ರಿಂದ 20 ಸ್ಥಾನ, ಕಾಂಗ್ರೆಸ್ 7-9 ಸ್ಥಾನ, ಜೆಡಿಎಸ್ 0-1 ಸ್ಥಾನ ಗಳಿಸಲಿದೆ ಎಂದು ಸಮೀಕ್ಷೆ ತಿಳಿಸಿದೆ.