Manasvini Scheme: ಮದುವೆಯಾದ ಮಹಿಳೆಯರಿಗೆ 500 ರೂ ಪ್ರತಿ ತಿಂಗಳು, ಕಾಂಗ್ರೆಸ್ ಸರ್ಕಾರದ ಇನ್ನೊಂದು ಘೋಷಣೆ.

ಅವಿವಾಹಿತ ಹಾಗು ವಿಚ್ಚೇದಿತ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದ ಒಂದು ಉತ್ತಮ ಯೋಜನೆ, ಇಂದೇ ಅರ್ಜಿ ಹಾಕಿ.

Manaswini Scheme In Karnataka: ಕರ್ನಾಟಕ ರಾಜ್ಯದಲ್ಲಿ ಮಹಿಳೆಯರಿಗೆಂದೇ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ. ಈ ಯೋಜನೆಗಳು ಮಹಿಳೆಯರಿಗೆ ಮಾತ್ರ ಸೀಮಿತವಾಗಿದ್ದು, ಮಹಿಳೆಯರು ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳತಕ್ಕದ್ದು.

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ನಂತರ ಮಹಿಳೆಯರಿಗೆಂದೇ ಶಕ್ತಿ ಯೋಜನೆ, ಗೃಹಲಕ್ಷ್ಮೀ ಯೋಜನೆ ಹಾಗು ಇದೀಗ ಮನಸ್ವಿನಿ ಯೋಜನೆ ಜಾರಿಗೆ ತಂದಿದ್ದು, ಅವಿವಾಹಿತರಿಗೆ ಹಾಗೂ ವಿಚ್ಚೇಧಿತ ಮಹಿಳೆಯರಿಗೆ ಅನುಕೂಲವಾಗಲಿದೆ.  

Manaswini Scheme In Karnataka
Image Credit: Original Source

ರಾಜ್ಯದಲ್ಲಿ ಮಹಿಳೆಯರಿಗಾಗಿ ಈ ಯೋಜನೆಗಳು

ರಾಜ್ಯದಲ್ಲಿ ಈಗ ಮಹಿಳೆಯರ ಅನುಕೂಲಕ್ಕಾಗಿ ಹಾಗು ಅವರು ಸ್ವಾವಲಂಭಿಯಾಗಿ ಜೀವನ ಮಾಡಬೇಕೆಂಬ ಕಾರಣಕ್ಕಾಗಿ ಹಲವು ಯೋಜನೆಗಳನ್ನು ಜಾರಿಗೆ ತರಲಾಗಿದೆ. ಶಕ್ತಿ ಯೋಜನೆ ಮೂಲಕ ರಾಜ್ಯದಲ್ಲಿ ಮಹಿಳೆಯರು ಸರ್ಕಾರೀ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ. ಗೃಹಲಕ್ಷ್ಮೀ ಯೋಜನೆಯಡಿ ಪ್ರತಿ ತಿಂಗಳು ಮಹಿಳೆಯ ಖಾತೆಗೆ 2000 ರೂಪಾಯಿಗಳನ್ನು ಜಮೆ ಮಾಡಲಾಗುತ್ತಿದೆ.

ಈ ಯೋಜನೆಗಳು ಈಗಾಗಲೇ ಪ್ರಾರಂಭ ಆಗಿದ್ದು, ಮಹಿಳೆಯರು ಈ ಯೋಜನೆಯ ಸೌಲಭ್ಯವನ್ನು ಪಡೆಯುತ್ತಿದ್ದಾರೆ. ಅಷ್ಟೇ ಅಲ್ಲದೆ ಸ್ತ್ರಿಶಕ್ತಿ ಗುಂಪುಗಳ ಮಹಿಳೆಯರಿಗೆ ಶೂನ್ಯ ಬಡ್ಡಿದರದಲ್ಲಿ 2 ಲಕ್ಷ ರೂಪಾಯಿ ಸಾಲ ನೀಡುವುದಾಗಿ ಘೋಷಣೆ ಮಾಡಿದೆ.

ಇಷ್ಟು ವರ್ಷ ಕಡಿಮೆ ಬಡ್ಡಿದರದಲ್ಲಿ ಮಹಿಳೆಯರಿಗೆ ಸಾಲ ನೀಡಲಾಗುತ್ತಿತ್ತು. ಆದರೆ ಇನ್ಮುಂದೆ ಬಡ್ಡಿಯನ್ನು ಪಡೆಯದೇ ಸಾಲ ನೀಡಲಾಗುತ್ತಿದ್ದು, ಮಹಿಳೆಯರು ಕಂತುಗಳ ಆಧಾರದಲ್ಲಿ ಅಸಲನ್ನು ಮಾತ್ರವೇ ಪಾವತಿ ಮಾಡಬಹುದಾಗಿದೆ.

Manaswini Scheme Latest Update
Image Credit: Newsnext

ಮನಸ್ವಿನಿ ಯೋಜನೆಯ ಕುರಿತು ಮಾಹಿತಿ

ಮನಸ್ವಿನಿ ಯೋಜನೆಯನ್ನು 2013 ರಲ್ಲಿ ರಾಜ್ಯ ಸರಕಾರ ಜಾರಿಗೆ ತಂದಿರುವುದಾಗಿದೆ. ಮನಸ್ವಿನಿ ಯೋಜನೆಯ ಕುರಿತು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು ಮಾಹಿತಿಯನ್ನು ನೀಡಿದ್ದಾರೆ. ಈ ಯೋಜನೆಗಾಗಿ ರಾಜ್ಯ ಸರಕಾರ ಈ ಬಾರಿಯ ಬಜೆಟ್‌ನಲ್ಲಿ ಬರೋಬ್ಬರಿ 138 ಕೋಟಿ ರೂಪಾಯಿಯನ್ನು ಮೀಸಲು ಇರಿಸಲಾಗಿದೆ. ರಾಜ್ಯ ಸರಕಾರ ಮಹಿಳೆಯರ ಅಭಿವೃದ್ದಿಗಾಗಿ ಹಗಲಿರುಳು ಶ್ರಮಿಸುತ್ತಿದೆ ಎಂದು ಅವರು ಹೇಳಿದ್ದಾರೆ.

ಈ ಯೋಜನೆಯ ಮೂಲಕ ಇದೀಗ 40 ರಿಂದ 64 ವರ್ಷದ ಒಳಗಿನ ಅವಿವಾಹಿತರು ಹಾಗೂ ವಿಚ್ಚೇದಿತ ಮಹಿಳೆಯರಿಗೆ ಆರ್ಥಿಕ ನೆರವು ನೀಡಲು ಯೋಜನೆಯನ್ನು ರೂಪಿಸಲಾಗಿದೆ. ಈ ಯೋಜನೆಯ ಮೂಲಕ ಅವಿವಾಹಿತ ಹಾಗೂ ವಿಚ್ಚೇದಿತ ಮಹಿಳೆಯರಿಗೆ ಪ್ರತೀ ತಿಂಗಳು ಬ್ಯಾಂಕ್‌ ಖಾತೆಗೆ ಹಣ ಜಮೆ ಆಗಲಿದೆ.

Leave A Reply

Your email address will not be published.