Maruti Suzuki: 28 Km ಮೈಲೇಜ್ ಕೊಡುವ ಈ ಮಾರುತಿ ಕಾರಿಗೆ ದೇಶದಲ್ಲಿ ಸಕತ್ ಡಿಮ್ಯಾಂಡ್, ದಾಖಲೆಯ ಬುಕಿಂಗ್.
ಗರಿಷ್ಠ ಮೈಲೇಜ್ ಕೂಡುವ ಮಾರುತಿ ಸುಜುಕಿ ಕಂಪನಿಯ ಈ ಕಾರಿಗೆ ಬಾರಿ ಬೇಡಿಕೆ
Maruti Suzuki Fronx: ಮಾರುತಿ ಸುಜುಕಿ (Maruti Suzuki) ಕಂಪನಿಯು ವಾಹನಗಳ ಮಾರುಕಟ್ಟೆಯಲ್ಲಿ ಪ್ರಸಿದ್ದಿ ಪಡೆದ ಕಂಪನಿಯಾಗಿದೆ. ಮಾರುತಿ ಸುಜುಕಿಯು ಹೊಸ ಫ್ರಾಂಕ್ಸ್ (Fronx) ಕ್ರಾಸ್ ಓವರ್ ಎಸ್ ಯುವಿ ಮಾದರಿಯನ್ನು ಬಿಡುಗಡೆ ಮಾಡುವ ಮೂಲಕ ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಹೊಸ ಕಾರು ಹಲವಾರು ವಿಶೇಷತೆಗಳೊಂದಿಗೆ ಅಭಿವೃದ್ದಿಗೊಂಡಿದೆ.
ದೇಶದ ಅಗ್ರ ಕಾರು ಉತ್ಪಾದನಾ ಕಂಪನಿಯಾಗಿರುವ ಮಾರುತಿ ಸುಜುಕಿ ತನ್ನ ಹೊಸ ಫ್ರಾಂಕ್ಸ್ ಕಂಪ್ಯಾಕ್ಟ್ ಎಸ್ ಯುವಿಯೊಂದಿಗೆ ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿದ್ದು, ವಿಶೇಷ ಫೀಚರ್ಸ್ ಗಳೊಂದಿಗೆ ದಾಖಲೆ ಪ್ರಮಾಣದ ಬುಕಿಂಗ್ ಪಡೆದುಕೊಳ್ಳುತ್ತಿದೆ.
ಸಿಎನ್ ಜಿ ಆವೃತ್ತಿಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿರುವ ಮಾರುತಿ ಸುಜುಕಿ
ಭಾರತದಲ್ಲಿ ಮಾರುತಿ ಸುಜುಕಿ ಕಂಪನಿಯು ಡೀಸೆಲ್ ಕಾರುಗಳ ಮಾರಾಟವನ್ನು ಸ್ಥಗಿತಗೊಳಿಸಿದ ನಂತರ ಸಂಪೂರ್ಣವಾಗಿ ಪೆಟ್ರೋಲ್, ಪೆಟ್ರೋಲ್ ಹೈಬ್ರಿಡ್ ಮತ್ತು ಸಿಎನ್ ಜಿ ಕಾರುಗಳ ಮೇಲೆ ಹೆಚ್ಚಿನ ಒತ್ತು ನೀಡುತ್ತಿದ್ದು, ಕಂಪನಿಯು ಇದುವರೆಗೆ ಸುಮಾರು 13 ಕಾರು ಮಾದರಿಗಳಲ್ಲಿ ಸಿಎನ್ ಜಿ ಆವೃತ್ತಿಗಳನ್ನು ಮಾರಾಟ ಮಾಡುತ್ತಿದೆ. ಇದೀಗ ಹೊಸ ಫ್ರಾಂಕ್ಸ್ ಕಾರು ಮಾದರಿಯಲ್ಲೂ ಕೂಡ CNG ಆವೃತ್ತಿಯನ್ನು ಬಿಡುಗಡೆ ಮಾಡಿದ್ದು, ಎಸ್-ಸಿಎನ್ ಜಿ ತಂತ್ರಜ್ಞಾನದೊಂದಿಗೆ ಅತ್ಯುತ್ತಮ ಪರ್ಫಾಮೆನ್ಸ್ ಜೊತೆಗೆ ಭರ್ಜರಿ ಮೈಲೇಜ್ ಹಿಂದಿರುಗಿಸುತ್ತಿರುವುದು ಬೇಡಿಕೆ ಹೆಚ್ಚಳಕ್ಕೆ ಪ್ರಮುಖ ಕಾರಣವಾಗಿದೆ.
Maruti Suzuki Fronx ಕಾರಿನ ವೈಶಿಷ್ಟತೆಗಳು
Maruti Suzuki Fronx ಕಾರು ಆಕರ್ಷಕ ಹೊರಭಾಗದ ವಿನ್ಯಾಸದ ಜೊತೆಗೆ ಐಷಾರಾಮಿ ಅನುಭವ ನೀಡುವ ಡ್ಯುಯಲ್ ಕಲರ್ ಕ್ಯಾಬಿನ್ ಸೌಲಭ್ಯವನ್ನು ಪಡೆದುಕೊಂಡಿದೆ. ಇದರಲ್ಲಿರುವ 7 ಇಂಚಿನ ಟಚ್ ಸ್ಕ್ರೀನ್ ಇನ್ಪೋಟೈನ್ ಮೆಂಟ್ ಸಿಸ್ಟಂ, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲ್, ವೈರ್ ಲೆಸ್ ಅಂಡ್ರಾಯಿಡ್ ಆಟೋ ಮತ್ತು ಆಯಪಲ್ ಕಾರ್ ಪ್ಲೇ ಗ್ರಾಹಕರನ್ನು ಆಕರ್ಷಿಸುತ್ತಿದ್ದು, ಸುರಕ್ಷತೆಗಾಗಿ ಡ್ಯುಯಲ್ ಏರ್ ಬ್ಯಾಗ್, ರಿವರ್ಸ್ ಪಾರ್ಕಿಂಗ್ ಸೆನ್ಸಾರ್ ಸೇರಿದಂತೆ ಹಲವಾರು ಸುರಕ್ಷಾ ಸೌಲಭ್ಯಗಳಿವೆ.
Maruti Suzuki Fronx ಕಾರಿನ ಮೈಲೇಜ್
ವಿವಿಧ ಎಂಜಿನ್ ಆಯ್ಕೆ ಮತ್ತು ಆಕರ್ಷಕ ಬೆಲೆ ಹೊಂದಿರುವ ಹೊಸ ಕಾರು ಮಧ್ಯಮ ವರ್ಗದ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿಯಲ್ಲಿದ್ದು CNG ವರ್ಷನ್ ಬಿಡುಗಡೆಯ ನಂತರ ಮತ್ತಷ್ಟು ಬೇಡಿಕೆ ಹರಿದುಬರುತ್ತಿದೆ. ಫ್ರಾಂಕ್ಸ್ ಕಾರಿನ ಪೆಟ್ರೋಲ್ ಮಾದರಿಯು ಪ್ರತಿ ಲೀಟರ್ ಪೆಟ್ರೋಲ್ ಗೆ 21.79 ಕಿ.ಮೀ ನಿಂದ 22.89 ಕಿ.ಮೀ ಮೈಲೇಜ್ ನೀಡಲಿದ್ದರೆ ಸಿಎನ್ ಜಿ ಮಾದರಿಯು ಪ್ರತಿ ಕೆಜಿಗೆ 28.51 ಕಿ.ಮೀ ಮೈಲೇಜ್ ನೀಡುತ್ತದೆ.
Maruti Suzuki Fronx ಕಾರಿನ ಬೆಲೆ
ಈ ಹೊಸ ಫ್ರಾಂಕ್ಸ್ ಕಾರು ಎಕ್ಸ್ ಶೋರೂಂ ಪ್ರಕಾರ ರೂ. 7.47 ಲಕ್ಷದಿಂದ ರೂ. 13.14 ಲಕ್ಷ ಬೆಲೆ ಹೊಂದಿದೆ. ಹೊಸ ಕಾರಿನಲ್ಲಿ 1.0 ಲೀಟರ್ ಟರ್ಬೊ ಪೆಟ್ರೋಲ್ ಮತ್ತು 1.2 ಲೀಟರ್ ಎನ್‌ಎ ಪೆಟ್ರೋಲ್ ಎಂಜಿನ್ ಜೋಡಣೆ ಮಾಡಲಾಗಿದ್ದು, 1.2 ಲೀಟರ್ ಪೆಟ್ರೋಲ್ ಮಾದರಿಯಲ್ಲಿ ಸಿಎನ್ ಜಿ ವರ್ಷನ್ ಆವೃತ್ತಿಯನ್ನು ಪರಿಚಯಿಸಲಾಗಿದೆ.