Ignis: ಹೊಸ ವರ್ಷಕ್ಕೆ ಕಾರ್ ಖರೀದಿ ಮಾಡುವವರಿಗೆ ಭರ್ಜರಿ ಆಫರ್, ಈ ಮಾರುತಿ ಕಾರಿನ ಮೇಲೆ ದಾಖಲೆಯ ಡಿಸ್ಕೌಂಟ್

ಮಾರುತಿ ಸುಜುಕಿ ತನ್ನ ಕಾರಿನ ಮೇಲೆ ಭರ್ಜರಿ ಆಫರ್ ಘೋಷಣೆ ಮಾಡಿದೆ.

Maruti Suzuki Ignis: ದೇಶಿಯ ಕಾರು ಮಾರುಕಟ್ಟೆಯಲ್ಲಿ ಮಾರುತಿ ಸುಜುಕಿ (Maruti Suzuki) ಬಹಳ ಜನಪ್ರಿಯತೆಯನ್ನು ಪಡೆದುಕೊಂಡಿದೆ. ಮಾರುತಿಯ ಕಾರುಗಳಿಗೆ ಮಾರುಕಟ್ಟೆಯಲ್ಲಿ ಬಾರಿ ಬೇಡಿಕೆ ಇದ್ದು, ಈ ಬೇಡಿಕೆಯನ್ನು ಬಹಳ ವರ್ಷಗಳಿಂದ ಈ ಕಂಪನಿ ಉಳಿಸಿಕೊಂಡು ಬಂದಿದೆ.

ಅದರಲ್ಲೂ ಭಾರತದ ಅತಿದೊಡ್ಡ ಕಾರು ತಯಾರಕ ಕಂಪನಿ ಮಾರುತಿ ಸುಜುಕಿಯ ವಿಶಿಷ್ಟ ವಿನ್ಯಾಸವಾಗಿ ಇಗ್ನಿಸ್ ಕಾರು,ಟಾಲ್‌ಬಾಯ್ ನಿಲುವು ಮತ್ತು ಆಕರ್ಷಕ ಲುಕ್ ಅನ್ನು ಹೊಂದಿರುವ ಕಾರ್ ಆಗಿದೆ. ಮಾರುತಿ ಸುಜುಕಿ ಇಗ್ನಿಸ್ (Maruti Suzuki Ignis ) ಕಾರನ್ನು ಭಾರತದಲ್ಲಿ ನೆಕ್ಸಾ ಪ್ರೀಮಿಯಂ ಡೀಲರ್ ಗಳ ಮೂಲಕ ಮಾರಾಟ ಮಾಡಲಾಗುತ್ತಿದೆ. 

Maruti Suzuki Ignis
Image Credit: Autocarindia

ಭಾರತದಲ್ಲಿ ಅತಿ ಹೆಚ್ಚು ಬೇಡಿಕೆ ಇರುವ ಕಾರು ಮಾರುತಿ ಸುಜುಕಿ ಇಗ್ನಿಸ್

ಇಗ್ನಿಸ್ ಫೇಸ್‌ಲಿಫ್ಟ್ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆಯನ್ನು ಪಡೆದುಕೊಂಡಿದೆ. ಭಾರತೀಯ ಮಾರುಕಟ್ಟೆಯಲ್ಲಿ ಮಾರುತಿ ಇಗ್ನಿಸ್ ಕಾರು ಸಿಲ್ಕಿ ಸಿಲ್ವರ್, ಗ್ಲಿಸ್ಟನಿಂಗ್ ಗ್ರೇ, ಪರ್ಲ್ ವೈಟ್, ಲ್ಯೂಸೆಂಟ್ ಆರೆಂಜ್, ಲ್ಯೂಸೆಂಟ್ ಆರೆಂಜ್ ವಿಥ್ ಬ್ಲ್ಯಾಕ್ ರೂಫ್, ಟರ್ಕಿಷ್ ಬ್ಲೂ, ನೆಕ್ಸಾ ಬ್ಲೂ, ಬ್ಲ್ಯಾಕ್ ರೂಫ್ ನೊಂದಿಗೆ ನೆಕ್ಸಾ ಬ್ಲೂ, ಮತ್ತು ಸಿಲ್ವರ್ ರೂಫ್ ನೊಂದಿಗೆ ನೆಕ್ಸಾ ಬ್ಲೂ ಬಣ್ಣಗಳ ಆಯ್ಜೆಯಲ್ಲಿ ಲಭ್ಯವಿದೆ.

ಮಾರುತಿ ಸುಜುಕಿ ಕಂಪನಿಯ ಈ ಇಗ್ನಿಸ್ ಹ್ಯಾಚ್‌ಬ್ಯಾಕ್‌ ಕಾರಿನ ಜೆಟ್ಟಾ ಮ್ಯಾನುವಲ್ ಹಾಗೂ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಮಾದರಿಗಳನ್ನು ಸ್ಮಾರ್ಟ್‌ಪ್ಲೇ ಇನ್ಫೋಟೇನ್‌ಮೆಂಟ್ ಸಿಸ್ಟಂನೊಂದಿಗೆ ಈ ಹಿಂದೆ ಬಿಡುಗಡೆಗೊಳಿಸಿತು. ಈ ಮಾರುತಿ ಸುಜುಕಿ ಇಗ್ನಿಸ್ ನೆಕ್ಸಾ ಶೋರೂಂನಿಂದ ಮಾರಾಟವಾದ ಮೊದಲ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಹೊಂದಿರುವ ಕಾರು ಇದಾಗಿದೆ.

ಮಾರುತಿ ಸುಜುಕಿ ಇಗ್ನಿಸ್(Maruti Suzuki Ignis ) ಕಾರಿನ ವಿಶೇಶತೆಗಳು

ಫೇಸ್‌ಲಿಫ್ಟ್ ಕಾರಿನಲ್ಲಿ ಲೈವ್ ಟ್ರಾಫಿಕ್, ವಾಯ್ಸ್ ರೆಕಗ್ನಿಷನ್, ವೆಹಿಕಲ್ ಇನ್ಫಾರ್ಮೆಷನ್ ಅಲರ್ಟ್ ನಂತಹ ಫೀಚರ್ ಗಳನ್ನು ಹೊಂದಿವೆ. ಇದರ ಜೊತೆಗೆ ಹೊಸದಾಗಿ ಹಿಲ್ ಹೋಲ್ಡ್ ಅಸಿಸ್ಟ್ ಮತ್ತು ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ (ಇಎಸ್‌ಪಿ) ಫೀಚರ್ಸ್ ಪಡೆದುಕೊಂಡಿವೆ. ಇದರ ಜೊತೆಗೆ ಮಾರುತಿ ಸುಜುಕಿ ಕಂಪನಿಯ ಜನಪ್ರಿಯ ಸೆಡಾನ್ ಮಾದರಿಯಾದ ಸಿಯಾಜ್‌ಗೆ ಇತ್ತೀಚೆಗೆ ಕೆಲವು ಹೊಸ ಸುರಕ್ಷತಾ ತಂತ್ರಜ್ಞಾನಗಳನ್ನು ಸೇರಿಸಲಾಗಿದೆ.

ಪ್ರಯಾಣಿಕರ ಸುರಕ್ಷತೆಗಾಗಿ, ಎಬಿಎಸ್-ಇಬಿಡಿ, ಡ್ಯುಯಲ್ ಏರ್‌ಬ್ಯಾಗ್ ಹಾಗೂ ಡ್ರೈವರ್ ಸೇಫ್ಟಿ ಅಲರ್ಟ್ ಗಳನ್ನು ನೀಡಲಾಗಿದೆ. ಈ ಮಾರುತಿ ಸುಜುಕಿ ಇಗ್ನಿಸ್ ಫೇಸ್‌ಲಿಫ್ಟ್ ಕಾರಿನಲ್ಲಿ 1.2-ಲೀಟರಿನ ಕೆ 12ಬಿ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 83 ಬಿಹೆಚ್ ಪಿ ಪವರ್ ಮತ್ತು 113 ಎನ್‌ಎಂ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.

Maruti Suzuki Ignis Price
Image Credit: Economictimes

ಜನಪ್ರಿಯ ಮಾರುತಿ ಸುಜುಕಿ ಇಗ್ನಿಸ್ (Maruti Suzuki Ignis ) ಕಾರಿನ ಮೇಲೆ ಭರ್ಜರಿ ರಿಯಾಯಿತಿಗಳಿವೆ

ಮಾರುತಿ ಸುಜುಕಿ ಇಗ್ನಿಸ್ (Maruti Suzuki Ignis) ಕಾರು ಸಿಗ್ಮಾ, ಡೆಲ್ಟಾ, ಝೀಟಾ ಮತ್ತು ಆಲ್ಫಾ ಎಂಬ ನಾಲ್ಕು ರೂಪಾಂತರಗಳಲ್ಲಿ ಲಭ್ಯವಿದೆ. ಈ ಮಾರುತಿ ಸುಜುಕಿ ಇಗ್ನಿಸ್ ಕಾರಿನ ಮೇಲೆ ರೂ. 75,000 ರಿಯಾತಿಯನ್ನು ನೀಡಿದೆ. ಇದರಲ್ಲಿ ರೂ. 35,000 ನಗದು ರಿಯಾಯಿತಿ, ರೂ. 25,000 ವಿನಿಮಯ ಬೋನಸ್, ರೂ. 10,000 ಕಾರ್ಪೊರೇಟ್ ರಿಯಾಯಿತಿ ಮತ್ತು ರೂ. 5,000 ಸ್ಕ್ರ್ಯಾಪ್ ಬೋನಸ್ ಅನ್ನು ನೀಡಿದ್ದಾರೆ ಈ ಎಲ್ಲಾ ರಿಯಾಯಿತಿಗಳು ಈ ತಿಂಗಳ ಅಂತ್ಯದವೆಗೂ ಲಭ್ಯವಿರುತ್ತದೆ. ರಿಯಾಯಿತಿಗಳ ಕುರಿತು ಹೆಚ್ಚಿನ ಮಾಹಿತಿಯನ್ನು ಪಡೆಯಲು ಹತ್ತಿರದ ಅಧಿಕೃತ ಶೋರೂಮ್‌ಗೆ ಭೇಟಿ ನೀಡಿ.

Leave A Reply

Your email address will not be published.