Maruti: ಕಡಿಮೆ ಬೆಲೆ ಮತ್ತು ಬೈಕಿಗಿಂತ ಹೆಚ್ಚು ಮೈಲೇಜ್, ಹೊಸ ಸ್ವಿಫ್ಟ್ ಕಾರಿಗೆ ದೇಶದಲ್ಲಿ ಹೆಚ್ಚಾಗಿದೆ ಬೇಡಿಕೆ.
ಮಾರುತಿ ಸುಜುಕಿಯವರ ನ್ಯೂ ಜನರೇಷನ್ ಕಾರು ಮಾರುಕಟ್ಟೆಗೆ ಬರಲಿದ್ದು, ಇಂದೇ ಬುಕ್ ಮಾಡಿಕೊಳ್ಳಿ .
Maruti Suzuki Swift Hatchback: ದೇಶಿಯ ಮಾರುಕಟ್ಟೆಯಲ್ಲಿ ಮಾರುತಿ ಸ್ವೀಫ್ (Maruti Swift) ಕಾರುಗಳು ಬಹಳ ಪ್ರಸಿದ್ದಿಯನ್ನು ಪಡೆದಿದೆ. ಈ ಕಾರು ಕಂಪನಿಯು ಕಡಿಮೆ ಬೆಲೆಯಲ್ಲಿ ಅಧಿಕ ಮೈಲೇಜ್ ಹಾಗು ಇತರ ವಿಶೇಷತೆಯನ್ನ ಹೊಂದಿದ ಕಾರನ್ನು ಗ್ರಾಹಕರಿಗೆ ನೀಡುತ್ತದೆ. ಭಾರತೀಯ ಮಾರುಕಟ್ಟೆಯಲ್ಲಿ ಮಾರುತಿ ಸುಜುಕಿ ಸ್ವಿಫ್ಟ್ (Swift) ಕಾರು ಮೊದಲ ಬಾರಿಗೆ 2005ರಲ್ಲಿ ಬಿಡುಗಡೆಗೊಂಡಿತ್ತು. ಎಷ್ಟೇ ಅತ್ಯಾಧುನಿಕ ಕಾರುಗಳು ಬಿಡುಗಡೆಯಾದರೂ ಮಾರುತಿ ಸ್ವೀಫ್ ಕಳೆದ ಹಲವು ವರ್ಷದಿಂದ ಭಾರತದಲ್ಲಿ ಹೆಚ್ಚು ಮಾರಾಟವಾಗುವ ಮಾದರಿಗಳಲ್ಲಿ ಒಂದಾಗಿದೆ.
ಪ್ರಸ್ತುತ ಭಾರತೀಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಸ್ವಿಫ್ಟ್ ಕಾರು 2018ರ ಆಟೋ ಎಕ್ಸ್‌ಪೋದಲ್ಲಿ ಪರಿಚಯಿಸಲಾಯಿತು. ಮಾರುತಿ ಸುಜುಕಿ ಕಂಪನಿಯು ನ್ಯೂ ಜನರೇಷನ್ ಮಾರುತಿ ಸ್ವಿಫ್ಟ್ ಕಾರು ಬಿಡುಗಡೆಗೊಳಿಸಲಿದೆ ಎಂದು ಹೇಳಲಾಗುತ್ತಿದೆ. ಪ್ರಸ್ತುತ ಈಗಿನ ಜನರೇಷನ್ ಗೆ ಹೊಂದುವ ಮಾರುತಿ ಸುಜುಕಿ ಸ್ವಿಫ್ಟ್ ಹ್ಯಾಚ್‌ಬ್ಯಾಕ್ ಕಾರಿಗೆ ಬೇಡಿಕೆ ಹೆಚ್ಚಾಗುತ್ತಿದೆ ಎನ್ನಲಾಗಿದೆ.

ಮಾರುತಿ ಸುಜುಕಿ ಸ್ವಿಫ್ಟ್ ಹ್ಯಾಚ್‌ಬ್ಯಾಕ್ ಕಾರಿನ ಫೀಚರ್ಸ್
ಈ ಕಾರಿನಲ್ಲಿ ಸೆಮಿ-ಡಿಜಿಟಲ್ ಇನ್ಸ್ ಟ್ರೂಮೆಂಟ್ ಕನ್ಸೋಲ್, ಮಲ್ಟಿ-ಫಂಕ್ಷನಲ್ ಸ್ಟೀರಿಂಗ್ ವೀಲ್, ಕ್ಲೈಮೇಟ್ ಕಂಟ್ರೋಲ್, HUD ಅಥವಾ ಹೆಡ್ಸ್-ಅಪ್ ಡಿಸ್‌ಪ್ಲೇ ಇತ್ಯಾದಿಗಳನ್ನು ಒಳಗೊಂಡಿದೆ. ಸುಜುಕಿ ಸ್ವಿಫ್ಟ್ ಹ್ಯಾಚ್‌ಬ್ಯಾಕ್ ಒಳಭಾಗವು ಹೊಸ ಬಲೆನೊ ಹ್ಯಾಚ್‌ಬ್ಯಾಕ್‌ನಿಂದ ಹೆಚ್ಚು ಸ್ಫೂರ್ತಿ ಪಡೆದಿದೆ. ಇದು ಡ್ಯುಯಲ್-ಟೋನ್ ಬ್ಲ್ಯಾಕ್ ಮತ್ತು ಬೂದು ಛಾಯೆಯೊಂದಿಗೆ ಬರುತ್ತದೆ. ಇನ್ನು ಈ ಕಾರಿನಲ್ಲಿ ಹೊಸ 9-ಇಂಚಿನ ಫ್ರೀ-ಸ್ಟ್ಯಾಂಡಿಂಗ್ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸ್ಕ್ರೀನ್ ಜೊತೆಗೆ ಆಂಡ್ರಾಯ್ಡ್ ಆಟೋ ಮತ್ತು ಆಪಲ್ ಕಾರ್‌ಪ್ಲೇಯನ್ನು ಕೂಡ ಹೊಂದಿದೆ.
ಮಾರುತಿ ಸುಜುಕಿ ಸ್ವಿಫ್ಟ್ ಹ್ಯಾಚ್‌ಬ್ಯಾಕ್ ಕಾರಿನ ಎಂಜಿನ್ ಹಾಗು ಮೈಲೇಜ್
ಮಾರುತಿ ಸುಜುಕಿಯು 2024ರ ಮೊದಲಾರ್ಧದಲ್ಲಿ ನ್ಯೂ ಜನರೇಷನ್ ಸ್ವಿಫ್ಟ್ ಹ್ಯಾಚ್‌ಬ್ಯಾಕ್ ಅನ್ನು ಪರಿಚಯಿಸಲಿದೆ. ಹೊಸ ಸ್ವಿಫ್ಟ್ ಸ್ಟ್ರಾಂಗ್ ಹೈಬ್ರಿಡ್ ಪವರ್‌ಟ್ರೇನ್‌ನೊಂದಿಗೆ ಅಳವಡಿಸಲ್ಪಡುತ್ತದೆ. ಇದು ಸ್ಟ್ರಾಂಗ್ ಹೈಬ್ರಿಡ್ ಪವರ್‌ಟ್ರೇನ್‌ನೊಂದಿಗೆ ಹೊಸ 1.2-ಲೀಟರ್ 3-ಸಿಲಿಂಡರ್ ಪೆಟ್ರೋಲ್ ಎಂಜಿನ್ ಅನ್ನು ಪಡೆಯಬಹುದು. ಈ ಹ್ಯಾಚ್‌ಬ್ಯಾಕ್ 40 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ ಎಂದು ವರದಿಯಾಗಿದೆ.

ಮಾರುತಿ ಸುಜುಕಿ ಸ್ವಿಫ್ಟ್ ಹ್ಯಾಚ್‌ಬ್ಯಾಕ್ ಕಾರಿನ ಬೆಲೆ
ಮಾರುತಿ ಸುಜುಕಿ ಸ್ವಿಫ್ಟ್ ಹ್ಯಾಚ್‌ಬ್ಯಾಕ್ ಕಾರು ಉತ್ತಮ ಮೈಲೇಜ್ ಜೊತೆಗೆ, ಅನೇಕ ವಿಶೇಷತೆಯನ್ನು ಹೊಂದಿದ್ದು ಬೆಲೆಯಲ್ಲಿ ಕೂಡ ಗ್ರಾಹಕರನ್ನು ಆಕರ್ಷಿಸುತಿದೆ ಈ ಕಾರಿನ ಬೆಲೆಯನ್ನು 5.99 ಲಕ್ಷದಿಂದ 9.03 ಲಕ್ಷದವರೆಗೆ ಕಂಪನಿ ನಿಗದಿ ಪಡಿಸಿದೆ.