Scholarship Scheme: ವಿದ್ಯಾರ್ಥಿಗಳಿಗೆ ಬಂಪರ್ ಗುಡ್ ನ್ಯೂಸ್, ಪ್ರತಿ ತಿಂಗಳು ಸಿಗಲಿದೆ 1000 ವಿದ್ಯಾರ್ಥಿ ವೇತನ, ಇಂದೇ ಅರ್ಜಿ ಹಾಕಿ.
ಈ ಪರೀಕ್ಷೆ ಬರೆಯಿರಿ, ಪ್ರತಿ ತಿಂಗಳು 1,000 ಸ್ಕಾಲರ್ ಶಿಪ್ ಪಡೆಯಿರಿ
National Means-Cum-Merit Scholarship Scheme: ರಾಜ್ಯ ಸರ್ಕಾರಿ, ಸರ್ಕಾರಿ ಅನುದಾನಿತ ಹಾಗೂ ಸ್ಥಳೀಯ ಸಂಸ್ಥೆಗಳ ಶಾಲೆಗಳಲ್ಲಿ ಪ್ರಸಕ್ತ ಸಾಲಿನ 8ನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು 1,000 ರೂ.ಗಳ ಸ್ಕಾಲರ್ ಶಿಪ್ ಕೊಡೋದಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. 2023-24ನೇ ಸಾಲಿನ ನ್ಯಾಷನಲ್ ಮೀನ್ಸ್-ಕಮ್-ಮೆರಿಟ್ ವಿದ್ಯಾರ್ಥಿ ವೇತನ(ಎನ್.ಎಂ.ಎಂ.ಎಸ್) ಪರೀಕ್ಷೆಯು ಡಿ.17ರಂದು ನಡೆಸಲಾಗುತ್ತಿದ್ದು, 8ನೇ ತರಗತಿ ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡು, ಪಾಸ್ ಆದರೆ ಪ್ರತಿ ತಿಂಗಳು 1,000 ಸ್ಕಾಲರ್ ಶಿಫ್ ಸಿಗಲಿದೆ.
ರಾಷ್ಟ್ರೀಯ ಮೀನ್ಸ್ ಕಮ್ ಮೆರಿಟ್ ವಿದ್ಯಾರ್ಥಿ ವೇತನ
ಕೇಂದ್ರ ಪ್ರಾಯೋಜಿತ ಯೋಜನೆ “ನ್ಯಾಷನಲ್ ಮೀನ್ಸ್-ಕಮ್-ಮೆರಿಟ್ ಸ್ಕಾಲರ್ಶಿಪ್ ಸ್ಕೀಮ್ ಇದನ್ನು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ ಅಡಿಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಜಾರಿಗೆ ತರುತ್ತದೆ. ಆರ್ಥಿಕವಾಗಿ ದುರ್ಬಲ ವರ್ಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ. 8ನೇ ತರಗತಿಯಲ್ಲಿ ಶಾಲೆಯಿಂದ ಹೊರಗುಳಿಯುವುದನ್ನು ತಡೆಯುವುದು ಮತ್ತು ಮಾಧ್ಯಮಿಕ ಹಂತದಲ್ಲಿ ಅಧ್ಯಯನವನ್ನು ಮುಂದುವರಿಸಲು ಪ್ರೋತ್ಸಾಹಿಸುವುದು ಈ ಯೋಜನೆಯ ಉದ್ದೇಶವಾಗಿದೆ.
ಅರ್ಜಿ ಸಲ್ಲಿಸಲು ಬೇಕಾಗುವ ಅರ್ಹತೆಗಳು
ವಿದ್ಯಾರ್ಥಿಗಳು 8ನೇ ತರಗತಿಯಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಓದುತ್ತಿರಬೇಕು. ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು 7ನೇ ತರಗತಿ ಪರೀಕ್ಷೆಯಲ್ಲಿ ಸಾಮಾನ್ಯ ವರ್ಗ ಮತ್ತು ಇತರೆ ಹಿಂದುಳಿದ ವರ್ಗದ ವಿದ್ಯಾರ್ಥಿಗಳಾಗಿದ್ದಲ್ಲಿ ಶೇಕಡ.55 ಅಂಕಗಳನ್ನು, ಎಸ್‌ಸಿ / ಎಸ್‌ಟಿ ವಿದ್ಯಾರ್ಥಿಯಾಗಿದ್ದಲ್ಲಿ ಶೇಕಡ.50 ಅಂಕಗಳನ್ನು ಗಳಿಸಿರಬೇಕು. ಪೋಷಕರ / ಕುಟುಂಬದ ವಾರ್ಷಿಕ ಆದಾಯ ರೂ.3.50,000 ಮೀರಿರಬಾರದು.
ಅರ್ಜಿ ಸಲ್ಲಿಕೆಯ ಬಗ್ಗೆ ಮಾಹಿತಿ
ಈ ವಿದ್ಯಾರ್ಥಿ ವೇತನಕ್ಕಾಗಿ 8ನೇ ತರಗತಿ ವಿದ್ಯಾರ್ಥಿಗಳು www.scholorships.gov.in ನಲ್ಲಿ ಅರ್ಜಿ ಸಲ್ಲಿಸಬೇಕಾಗಿದೆ. ಅರ್ಜಿ ಸಲ್ಲಿಸಿದ ನಂತರ ವಿದ್ಯಾರ್ಥಿಗಳಿಗೆ ಒಂದು ಪರೀಕ್ಷೆ ಇರಲಿದೆ. ಆ ಪರೀಕ್ಷೆಯಲ್ಲಿ ಆಯ್ಕೆಯಾದವರಿಗೆ 9ನೇ ತರಗತಿಯಿಂದ ಮಾಸಿಕ 1000 ರೂ ನಂತೆ ವರ್ಷಕ್ಕೆ 12,000 ವಿದ್ಯಾರ್ಥಿವೇತನವನ್ನು 4 ವರ್ಷಗಳವರೆಗೆ ಅಂದರೆ ದ್ವಿತೀಯ ಪಿಯುಸಿ ಮುಗಿಯುವವರೆಗೆ ನೀಡಲಾಗುತ್ತದೆ. 8ನೇ ತರಗತಿ ವಿದ್ಯಾರ್ಥಿಗಳು 2023-24ನೇ ಸಾಲಿನ ನ್ಯಾಷನಲ್ ಮೀನ್ಸ್ ಕಮ್ ಮೆರಿಟ್ ವಿದ್ಯಾರ್ಥಿವೇತನಕ್ಕೆ ಆನ್‌ಲೈನ್ ಅರ್ಜಿ ಸಲ್ಲಿಕೆ ದಿನಾಂಕ 13-09-2023ರಿಂದ ಆರಂಭಗೊಳ್ಳಲಿದೆ. ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ 04-10-2023 ಆಗಿದೆ.
NMMS ಪರೀಕ್ಷೆ ವಿಧಾನ
8ನೇ ತರಗತಿ ವಿದ್ಯಾರ್ಥಿಗಳು ಎನ್ ಎಂಎಂಎಸ್ ವಿದ್ಯಾರ್ಥಿ ವೇತನ ಪಡೆಯೋದಕ್ಕೆ ಪ್ರವೇಶ ಪರೀಕ್ಷೆ ಇರಲಿದೆ. ಇದರಲ್ಲಿ ಬಹುಆಯ್ಕೆಯ ಪ್ರಶ್ನೆಗಳಿರುತ್ತವೆ. ಪ್ರತಿ ಪ್ರಶ್ನೆಗೆ 1 ಅಂಕ ನಿಗಧಿಯಾಗಿರುತ್ತದೆ. ಒಟ್ಟು 2 ಪ್ರಶ್ನೆ ಪತ್ರಿಕೆಗಳಿರುತ್ತವೆ.
ವಿದ್ಯಾರ್ಥಿ ವೇತನವನ್ನು ನೇರವಾಗಿ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಹಾಕಲಾಗುತ್ತದೆ
ವಿವಿಧ ರಾಜ್ಯಗಳು / ಕೇಂದ್ರಾಡಳಿತ ಪ್ರದೇಶಗಳಿಗೆ ವಿದ್ಯಾರ್ಥಿವೇತನದ ಕೋಟಾ ಇದೆ. ಎಲ್ಲಾ ಮೂಲಗಳಿಂದ ಪೋಷಕರ ಆದಾಯ 1,50,000 ರೂ.ಗಿಂತ ಹೆಚ್ಚಿಲ್ಲದ ವಿದ್ಯಾರ್ಥಿಗಳು ವಿದ್ಯಾರ್ಥಿವೇತನ ಪಡೆಯಲು ಅರ್ಹರಾಗಿರುತ್ತಾರೆ. ರಾಜ್ಯ ಸರ್ಕಾರದ ಮಾನದಂಡಗಳ ಪ್ರಕಾರ ಮೀಸಲಾತಿ ಇದೆ. ವಿದ್ಯಾರ್ಥಿವೇತನದ ವಿದ್ಯಾರ್ಥಿಗಳ ಆಯ್ಕೆಯನ್ನು ರಾಜ್ಯ ಸರ್ಕಾರಗಳು ನಡೆಸುವ ಪರೀಕ್ಷೆಯ ಮೂಲಕ ಮಾಡಲಾಗುತ್ತದೆ. ವಿದ್ಯಾರ್ಥಿವೇತನವನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತ್ರೈಮಾಸಿಕ ಆಧಾರದ ಮೇಲೆ ನೇರವಾಗಿ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗುತ್ತದೆ.