GST: ಡೀಸೆಲ್ ವಾಹನಗಳ ಮೇಲೆ ಶೇ.10ರಷ್ಟು ಹೆಚ್ಚುವರಿ ಜಿಎಸ್‌ಟಿ ವರದಿ, ಸ್ಪಷ್ಟನೆ ನೀಡಿದ ನಿತಿನ್ ಗಡ್ಕರಿ.

ಡೀಸೆಲ್ ಚಾಲಿತ ವಾಹನ ಇದ್ದವರಿಗೆ ಶಾಕಿಂಗ್ ವರದಿ ,ನಿತಿನ್ ಗಡ್ಕರಿ ಪ್ರತಿಕ್ರಿಯೆ,

Gadkari Clarifies About Additional Tax On Diesel Vehicle Purchase: ಡೀಸೆಲ್ ವಾಹನ ಇದ್ದವರಿಗೆ ಜಿಎಸ್‌ಟಿ ಯಲ್ಲಿ ಹೆಚ್ಚಳ, ”ವಾಯು ಮಾಲಿನ್ಯ ಕಡಿಮೆ ಮಾಡುವ ನಿಟ್ಟಿನಲ್ಲಿ ಡೀಸೆಲ್ ವಾಹನಗಳು ಮತ್ತು ಜೆನ್​ಸೆಟ್‌ಗಳ (ಡೀಸೆಲ್ ಜನರೇಟರ್) ಮೇಲೆ ‘ಮಾಲಿನ್ಯ ತೆರಿಗೆ’ ರೂಪದಲ್ಲಿ ಶೇ.10ರಷ್ಟು ಹೆಚ್ಚುವರಿ ಜಿಎಸ್‌ಟಿ ವಿಧಿಸಲು ಕೇಂದ್ರ ಹಣಕಾಸು ಸಚಿವರಿಗೆ ಮನವಿ ಮಾಡಲಾಗುತ್ತದೆ” ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ Nitin Gadkari ಹೇಳಿದ್ದಾರೆ ಎಂಬುವುದು ವರದಿಯಾಗಿದೆ.

ನವದೆಹಲಿಯಲ್ಲಿ ಇಂದು ನಡೆದ ಭಾರತೀಯ ಆಟೋಮೊಬೈಲ್ ತಯಾರಕರ ಸಂಘದ 63ನೇ ವಾರ್ಷಿಕ ಸಮಾವೇಶದಲ್ಲಿ ಮಾತನಾಡಿದ ಸಚಿವರು, ”ಹೆಚ್ಚುತ್ತಿರುವ ಮಾಲಿನ್ಯದ ಮಟ್ಟವು ನಾಗರಿಕರ ಆರೋಗ್ಯಕ್ಕೆ ಅಪಾಯವಾಗಿದೆ. ಡೀಸೆಲ್ ಚಾಲಿತ ವಾಹನಗಳ ಮೇಲೆ ಶೇ.10ರಷ್ಟು ಹೆಚ್ಚುವರಿ ಜಿಎಸ್‌ಟಿಯನ್ನು ಹಾಕಬೇಕೆಂದು ಕೋರಿ ನಾನು ಇಂದು ಸಂಜೆ ಹಣಕಾಸು ಸಚಿವರಿಗೆ ಪತ್ರವನ್ನು ಹಸ್ತಾಂತರಿಸಲಿದ್ದೇನೆ” ಎಂಬುವುದಾಗಿ ಹೇಳಿದ್ದಾರೆ ಎಂದು ವರದಿಯಾಗಿತ್ತು. ಈ ಕುರಿತು ಖುದ್ದು ಸಚಿವರೇ ಸ್ಪಷ್ಟನೆ ಕೊಟ್ಟಿದ್ದು, ಇಂತಹ ಯಾವುದೇ ಪ್ರಸ್ತಾವನೆಯು ಸರ್ಕಾರದ ಮುಂದಿಲ್ಲ ಎಂದು ತಿಳಿಸಿದ್ದಾರೆ.

nitin gadkari clarifies about additional tax on diesel vehicle purchase
Image Credit: Thebegusarai

ಸಾಮಾಜಿಕ ಜಾಲತಾಣದಲ್ಲಿ ಸಚಿವರ ಸ್ಪಷ್ಟನೆ

ಈ ಕುರಿತು ವರದಿ ಬೆನ್ನಲ್ಲೇ ಸಚಿವ Nitin Gadkari ಸಾಮಾಜಿಕ ಜಾಲತಾಣದ ‘ಎಕ್ಸ್​’ನಲ್ಲಿ ಸ್ಪಷ್ಟನೆ ನೀಡಿದ್ದಾರೆ. ಡೀಸೆಲ್ ವಾಹನಗಳ ಮಾರಾಟದ ಮೇಲೆ ಹೆಚ್ಚುವರಿ 10 % ಜಿಎಸ್‌ಟಿಯನ್ನು ಸೂಚಿಸುವ ಮಾಧ್ಯಮ ವರದಿಗಳನ್ನು ಸ್ಪಷ್ಟಪಡಿಸುವ ತುರ್ತು ಅಗತ್ಯವಿದೆ. ಅಂತಹ ಯಾವುದೇ ಪ್ರಸ್ತಾವನೆಯು ಪ್ರಸ್ತುತ ಸರ್ಕಾರದ ಸಕ್ರಿಯ ಪರಿಗಣನೆಯಲ್ಲಿಲ್ಲ ಎಂಬುದನ್ನು ಸ್ಪಷ್ಟಪಡಿಸುದು ಅತ್ಯಗತ್ಯ.

2070ರ ವೇಳೆಗೆ ಕಾರ್ಬನ್ ನೆಟ್​ ಶೂನ್ಯವನ್ನು ಸಾಧಿಸಲು ಮತ್ತು ಡೀಸೆಲ್‌ನಂತಹ ಅಪಾಯಕಾರಿ ಇಂಧನಗಳಿಂದ ಉಂಟಾಗುವ ವಾಯು ಮಾಲಿನ್ಯದ ಮಟ್ಟವನ್ನು ಕಡಿಮೆ ಮಾಡಲು ಮತ್ತು ಆಟೋಮೊಬೈಲ್ ಮಾರಾಟದಲ್ಲಿನ ತ್ವರಿತ ಬೆಳವಣಿಗೆಗೆ ಅನುಗುಣವಾಗಿ, ಸ್ವಚ್ಛ ಮತ್ತು ಹಸಿರು ಪರ್ಯಾಯ ಇಂಧನಗಳನ್ನು ಸಕ್ರಿಯವಾಗಿ ಅಳವಡಿಸಿಕೊಳ್ಳುವುದು ಅತ್ಯಗತ್ಯವಾಗಿದೆ. ಇಂಧನಗಳು ಆಮದು ಬದಲಿಗಳಾಗಿರಬೇಕು, ವೆಚ್ಚ ಪರಿಣಾಮಕಾರಿ, ಸ್ಥಳೀಯ ಮತ್ತು ಮಾಲಿನ್ಯ ಮುಕ್ತವಾಗಿರಬೇಕು. ಎಂದು ತಮ್ಮ X ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ನಿತಿನ್ ಗಡ್ಕರಿ ಪೋಸ್ಟ್ ವಿವರ
ದೇಶದ ಬಹುತೇಕ ವಾಣಿಜ್ಯ ವಾಹನಗಳು ಪ್ರಸ್ತುತ ಡೀಸೆಲ್‌ನಿಂದ ನಡೆಯುತ್ತಿವೆ. ಪ್ರಯಾಣಿಕ ವಾಹನ ವಿಭಾಗದಲ್ಲಿ ಮಾರುತಿ ಸುಜುಕಿ ಇಂಡಿಯಾ ಮತ್ತು ಹೋಂಡಾ ಸೇರಿದಂತೆ ವಿವಿಧ ಕಾರು ತಯಾರಕರು ಈಗಾಗಲೇ ಡೀಸೆಲ್ ಕಾರುಗಳ ಉತ್ಪಾದನೆಯನ್ನು ನಿಲ್ಲಿಸಿದ್ದಾರೆ. ದೇಶದಲ್ಲಿ ಈಗಾಗಲೇ ಡೀಸೆಲ್ ಕಾರುಗಳ ಕೊಡುಗೆ ತೀವ್ರವಾಗಿ ಕುಸಿದಿದೆ, ತಯಾರಕರು ಮಾರುಕಟ್ಟೆಯಲ್ಲಿ ಅವುಗಳನ್ನು ಮಾರಾಟ ಮಾಡುವುದನ್ನು ನಿಲ್ಲಿಸಬೇಕಾಗಿದೆ” ಎಂದು ‘ಎಕ್ಸ್’​​ನಲ್ಲಿ ಗಡ್ಕರಿ ಪೋಸ್ಟ್​ ಮಾಡಿದ್ದಾರೆ.

Leave A Reply

Your email address will not be published.