Matru Vandana: ಬಾಣಂತಿಯರಿಗೆ ಗುಡ್ ನ್ಯೂಸ್ ನೀಡಿದ ಕೇಂದ್ರ ಸರ್ಕಾರ, ಈ ಯೋಜನೆಯಲ್ಲಿ ಸಿಗಲಿದೆ 11,000 ರೂ ಉಚಿತ.

ಕೇಂದ್ರ ಸರ್ಕಾರದಿಂದ ಗರ್ಭಿಣಿ ಹಾಗು ಬಾಣಂತಿ ಮಹಿಳೆಯರಿಗೆ ಸಿಗಲಿದೆ 11,000 ರೂ ಉಚಿತ, ಇಂದೇ ಅರ್ಜಿ ಹಾಕಿ.

Pradhan Mantri Matru Vandana Yojana: ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಒಂದು ಉತ್ತಮ ಯೋಜನೆಯನ್ನು ಜಾರಿಗೆ ತರಲಾಗಿದೆ. ಈ ಯೋಜನೆಯು ಮಹಿಳೆಯರಿಗೆ ಬಹಳ ಉಪಯುಕ್ತ ಆಗಲಿದೆ ಇದರಲ್ಲಿ ಯಾವುದೇ ಅನುಮಾನವಿಲ್ಲ.

ಯಾಕೆಂದರೆ ಈ ಯೋಜನೆಯು ಗರ್ಭಿಣಿ ಹಾಗು ಬಾಣಂತಿ ಮಹಿಳೆಯರಿಗೆ ಸಂಬಂಧಿಸಿದ್ದಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಜಾರಿಗೊಳಿಸಲಾದ ಪ್ರಧಾನ ಮಂತ್ರಿ ಮಾತೃವಂದನಾ (Matru Vandana) ಯೋಜನೆಯ ಸೌಲಭ್ಯ ಪಡೆಯಲು ಅರ್ಹ ಗರ್ಭಿಣಿ ಹಾಗೂ ಬಾಣಂತಿ ಮಹಿಳೆಯರು ನೋಂದಾಯಿಸಿಕೊಳ್ಳಬಹುದಾಗಿದೆ.

Pradhan Mantri Matru Vandana Yojana
Image Credit: Abplive

ಮಾತೃವಂದನಾ ಯೋಜನೆಯ ಸಂಪೂರ್ಣ ಮಾಹಿತಿ

ಈ ಯೋಜನೆಯು ಗರ್ಭಿಣಿ ಹಾಗು ಬಾಣಂತಿ ಮಹಿಳೆಯರಿಗೆ ಆಯೋಜಿಸಲಾಗಿದ್ದು, ಈ ಯೋಜನೆಯಡಿ ಮೊದಲ ಪ್ರಸವದ ಗರ್ಭಿಣಿ ಹಾಗೂ ಬಾಣಂತಿ ಮಹಿಳೆಯರಿಗೆ 5,000 ರೂ.ಗಳ ಪ್ರೋತ್ಸಾಹಧನ ನೀಡಲಾಗುವುದು.ಎರಡನೇ ಪ್ರಸವದಲ್ಲಿ ಜನಿಸುವ ಹೆಣ್ಣು ಮಗುವಿಗೆ 6,000 ರೂ. ಗಳ ಪ್ರೋತ್ಸಾಹಧನ ನೀಡಲಾಗುವುದು.

ಈ ಪ್ರೋತ್ಸಾಹಧನವು ಗರ್ಭಿಣಿ / ಬಾಣಂತಿ ಮಹಿಳೆಯರು ಪೂರಕ ಆಹಾರ ಪಡೆಯಲು ಹಾಗೂ ಆರೋಗ್ಯವಂತ ಮಗುವಿನ ಜನನಕ್ಕೆ ಮತ್ತು ಪಾಲನೆಗೆ ಸಹಕಾರಿಯಾಗಲಿದೆ.

Matru Vandana Yojana
Image Credit: Newsnationtv

ಮಾತೃವಂದನಾ ಯೋಜನೆಗೆ ಅರ್ಜಿ ಹಾಕಲು ಬೇಕಾಗಿರುವ ಮುಖ್ಯ ದಾಖಲೆಗಳು

ಮಾತೃವಂದನಾ ಯೋಜನೆಗೆ ಅರ್ಜಿ ಹಾಕಲು ನಿಗಧಿತ ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿ, ಫಲಾನುಭವಿಯ ಆಧಾರ್ ಕಾರ್ಡ್ ಪ್ರತಿ, ತಾಯಿ ಮತ್ತು ಶಿಶು ರಕ್ಷಣಾ ಕಾರ್ಡ್ ಪ್ರತಿ, ಪಡಿತರ ಚೀಟಿ / ಜಾತಿ ಮತ್ತು ಆದಾಯ ಪ್ರಮಾಣ ಪತ್ರ/ ನರೇಗಾ ಕಾರ್ಡ್/ ಇ-ಶ್ರಮ್ ಕಾರ್ಡ್/ ಆಯುಷ್ಮಾನ್ ಕಾರ್ಡ್ ಇವುಗಳಲ್ಲಿ ಯಾವುದಾದರೂ ಒಂದರ ಜೆರಾಕ್ಸ್ ಪ್ರತಿಯನ್ನು ಸಲ್ಲಿಸಿ ನೋಂದಣಿ ಮಾಡಿಕೊಳ್ಳಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಮೀಪದ ಅಂಗನವಾಡಿ ಕೇಂದ್ರದ ಅಂಗನವಾಡಿ ಕಾರ್ಯಕರ್ತೆಯರು, ಮಹಿಳಾ ಮೇಲ್ವಿಚಾರಕಿ ಅಥವಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Pradhan Mantri Matru Vandana Yojana Money
Image Credit: Kannada News

ಮಾತೃವಂದನಾ ಯೋಜನೆಯ ಕಂತಿನ ಮಾಹಿತಿ

ಮಾತೃವಂದನಾ ಯೋಜನೆಯಡಿ ಮೊದಲನೇ ಪ್ರಸವದ ಗರ್ಭಿಣಿ/ ಬಾಣಂತಿಗೆ ಗರ್ಭಧಾರಣೆ ಖಾತರಿ ನಂತರ ಮೊದಲನೇ ಕಂತಿನಲ್ಲಿ 3,000 ರೂ.ಗಳನ್ನು, ಮೊದಲನೇ ಪ್ರಸವದ ಬಾಣಂತಿಗೆ ಎರಡನೇ ಕಂತಿನಲ್ಲಿ ಮಗು ಜನಿಸಿದ ನಂತರ 2,000 ರೂ. ಗಳನ್ನು ಹಾಗೂ ಎರಡನೇ ಪ್ರಸವದ ಹೆಣ್ಣು ಮಗು ಜನಿಸಿದ 3 ತಿಂಗಳ ನಂತರದಲ್ಲಿ 6,000 ರೂ. ಗಳನ್ನು ನೇರ ನಗದು ವರ್ಗಾವಣೆ (ಡಿ.ಬಿ.ಟಿ) ಮೂಲಕ ಫಲಾನುಭವಿಯ ಆಧಾರ್ ಜೋಡಣೆಯಾದ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗುವುದು.

Leave A Reply

Your email address will not be published.