Public Exam: 5, 8 ಮತ್ತು 9 ನೇ ತರಗತಿ ಪರೀಕ್ಷೆಯಲ್ಲಿ ಬಹುದೊಡ್ಡ ಬದಲಾವಣೆ, ಈ ವರ್ಷದಿಂದಲೇ ಜಾರಿ.

ಇನ್ನುಮುಂದೆ ವಿದ್ಯಾರ್ಥಿಗಳಿಗೆ ಪರೀಕ್ಷೆಯ ನಿಯಮದಲ್ಲಿ ಭಾರೀ ಬದಲಾವಣೆ, ಸರ್ಕಾರದಿಂದ ಮಹತ್ವದ ಆದೇಶ.

Public Exam Latest Update: ಶಾಲಾ ಶಿಕ್ಷಣ ಇಲಾಖೆಯಿಂದ ( School Education Department ) ಹೊಸ ನಿಯಮ ಜಾರಿಯಾಗಿದೆ. ಇನ್ನು ಮುಂದೆ 5, 8, 9ನೇ ತರಗತಿಗೆ ಪಬ್ಲಿಕ್ ಪರೀಕ್ಷೆ ( Public Exam ) ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ ನಿಗದಿ ಪಡಿಸಲಾಗಿತ್ತು. ಇದಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿ ಅಧಿಕೃತವಾಗಿ ಗೆಜೆಟ್ ಅಧಿಸೂಚನೆಯನ್ನು ಹೊರಡಿಸಿದೆ.

ಈ ಕುರಿತಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಯವರು ಗೆಜೆಟ್ ಅಧಿಸೂಚನೆಯನ್ನು ಹೊರಡಿಸಿದ್ದಾರೆ. ಅದರಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯನ್ನು ಸಕ್ಷಮ ಪ್ರಾಧಿಕಾರವೆಂದು ಸರ್ಕಾರ ಅಧಿಸೂಚನೆಯಲ್ಲಿ ದಿನಾಂಕ 07-10-2023ರಂದು ಕರ್ನಾಟಕ ರಾಜ್ಯ ಪತ್ರದಲ್ಲಿ ಹೊರಡಿಸಿತ್ತು ಎಂದಿದ್ದಾರೆ.

Public Exam Latest Update
Image Credit: Thehansindia

5, 8, 9ನೇ ತರಗತಿಗೆ ‘ಪಬ್ಲಿಕ್ ಪರೀಕ್ಷೆ ಹಾಗು 11ನೇ ತರಗತಿಯ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ ನೆಡೆಸಲಾಗುತ್ತದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಕಾಯ್ದೆ 1966ರ ಕಲಂ 15(ಎ)(iv)ರಲ್ಲಿ ಇತರೆ ಪರೀಕ್ಷೆಗಳನ್ನು ನಡೆಸಲು ಅವಕಾಶವಿದ್ದು, ಅದರಂತೆ 2023-24ನೇ ಸಾಲಿನಿಂದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ವತಿಯಿಂದ 5, 8, 9ನೇ ತರಗತಿಗಳ ವಿದ್ಯಾರ್ಥಿಗಳಿಗೆ ಸಂಕಲನಾತ್ಮಕ ಮೌಲ್ಯಮಾಪನ-2 ( SA-2) ಮತ್ತು 11ನೇ ತರಗತಿಯ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಯನ್ನು ನಡೆಸಲು ಅನುಮತಿ ನೀಡಿದೆ ಎಂದಿದ್ದಾರೆ.

ಸಂಕಲನಾತ್ಮಕ ಮೌಲ್ಯಮಾಪನ-2(SA-2) ಹಾಗೂ ವಾರ್ಷಿಕ ಪರೀಕ್ಷೆಯನ್ನು ನಡೆಸುವ ಸಂಬಂಧ ಪ್ರತಿ ವರ್ಷ ಸರ್ಕಾರಿ ಆದೇಶವನ್ನು ಪಡೆಯುವುದು ಕಡ್ಡಾಯವಾಗಿರುತ್ತದೆ ಎಂದು ಹೇಳಿದ್ದಾರೆ.

Karnataka Public Exam Updates
Image Credit: Thequint

ವಿದ್ಯಾರ್ಥಿಗಳ ಪರೀಕ್ಷಾ ನಿಯಮದಲ್ಲಿ ಬಾರಿ ಬದಲಾವಣೆ

ಹಲವು ವರ್ಷಗಳಿಂದಲೂ SSLC ಮತ್ತು ದ್ವಿತೀಯ PUC ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ಮಾಡಲಾಗುತ್ತಿತ್ತು ಆದರೆ ಈ ವರ್ಷದಿಂದ 5, 8, 9ನೇ ತರಗತಿಗೆ ‘ಪಬ್ಲಿಕ್ ಪರೀಕ್ಷೆ ಹಾಗು 11ನೇ ತರಗತಿಯ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ ನೆಡೆಸಲಾಗುತ್ತದೆ’ ಎಂದು ಶಾಲಾ ಶಿಕ್ಷಣ ಇಲಾಖೆಯಿಂದ ಸೂಚನೆ ಜಾರಿಗೆ ಬಂದಿದೆ. ಈ ಪರೀಕ್ಷೆಯ ವಿಧಾನವು ಮುಂದೆ ಭವಿಷ್ಯದಲ್ಲಿ ವಿದ್ಯಾರ್ಥಿಗಳಿಗೆ ಉಪಯುಕ್ತವಾಗಲಿದೆ ಎಂಬುದಾಗಿದೆ.

Leave A Reply

Your email address will not be published.