Health Scheme: BPL ಮತ್ತು APL ಕಾರ್ಡ್ ಇದ್ದವರಿಗೆ ಸರ್ಕಾರದಿಂದ ಇನ್ನೊಂದು ಗುಡ್ ನ್ಯೂಸ್, ಹೊಸ ಆರೋಗ್ಯ ಯೋಜನೆ ಜಾರಿಗೆ.
ರಾಜ್ಯ ಸರಕಾರದಿಂದ ಹೊಸ ಯೋಜನೆ ಜಾರಿಗೆ, BPL ಸೇರಿ ಎಲ್ಲಾ ಪಡಿತರ ಚೀಟಿದಾರರಿಗೆ ಈ ಯೋಜನೆ ಅನುಕೂಲಕರ ಆಗಲಿದೆ.
Puneeth Rajkumar Hrudaya Jyothi Health Scheme: ಕರ್ನಾಟಕ ರಾಜ್ಯದಲ್ಲಿ ಒಂದು ಉತ್ತಮ ಯೋಜನೆ ಜಾರಿಗೆ ಬರಲಿದೆ. ಈ ಯೋಜನೆಯು ಹಲವರ ಜೀವವನ್ನು ಉಳಿಸುವುದರಲ್ಲಿ ಯಾವುದೇ ಅನುಮಾನ ಇಲ್ಲ. ನಾವು ಈಗ ಇಲ್ಲಿ ಹೇಳುತ್ತಿರುವ ಯೋಜನೆಯ ಹೆಸರು ಡಾ. ಪುನೀತ್ ರಾಜ್ ಕುಮಾರ್ ಹೃದಯಜ್ಯೋತಿ ಯೋಜನೆ.
ಈ ಯೋಜನೆಯ ಮುಖ್ಯ ಉದ್ದೇಶವು ಹೃದಯಾಘಾತಕ್ಕೆ ಒಳಗಾದವರಿಗೆ ತಕ್ಷಣ ಚಿಕಿತ್ಸೆ ನೀಡುವುದಾಗಿದೆ ಹಾಗು ಈ ಯೋಜನೆಯು APL-BPL ಸೇರಿ ಎಲ್ಲಾ ಪಡಿತರ ಚೀಟಿದಾರರಿಗೆ ಸಿಗಲಿದೆ. ಈ ಡಾ. ಪುನೀತ್ ರಾಜ್ ಕುಮಾರ್ ಹೃದಯಜ್ಯೋತಿ ಯೋಜನೆಯನ್ನು ನವೆಂಬರ್ ಅಂದರೆ ಇಂದೇ ತಿಂಗಳಲ್ಲಿ ಜಾರಿಗೆ ತರಲಾಗುವುದು ಎನ್ನಲಾಗಿದೆ.

ಡಾ. ಪುನೀತ್ ರಾಜ್ ಕುಮಾರ್ ಹೃದಯಜ್ಯೋತಿ ಯೋಜನೆ ಬಗ್ಗೆ ಮಾಹಿತಿ
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಸುದ್ದಿಗಾರರೊಂದಿಗೆ ಮಾತನಾಡಿ ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆ ನವೆಂಬರ್ ಅಂತ್ಯಕ್ಕೆ ಚಾಲನೆ ನೀಡಲಿದ್ದು, ಮುಖ್ಯಮಂತ್ರಿಗಳು ಬಜೆಟ್ ನಲ್ಲಿ ಘೋಷಿಸಿರುವ ಡಾ. ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆ ಜಾರಿಗೆ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.
ರಾಜ್ಯದ 16 ಸೂಪರ್ ಸ್ಪೆಷಾಲಿಟಿ, 85 ಜಿಲ್ಲಾ ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ ಯೋಜನೆ ಜಾರಿಯಾಗಲಿದೆ ಎಂದು ಹೇಳಿದ್ದಾರೆ. 85 ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳನ್ನು ಸ್ಪೋಕ್ ಕೇಂದ್ರಗಳಾಗಿ, 16 ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಹಬ್ ಗಳನ್ನಾಗಿ ರೂಪಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಹೃದಯ ಸಂಬಂಧಿ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದು
ತಕ್ಷಣ ಎದೆ ನೋವು ಕಾಣಿಸಿಕೊಂಡವರು ಸ್ಪೋಕ್ ಕೇಂದ್ರಗಳಿಗೆ ಭೇಟಿ ನೀಡಬೇಕಾಗುತ್ತದೆ. ಅಲ್ಲಿ ಕೂಡಲೇ ಅವರಿಗೆ ಇಸಿಜಿ ಮಾಡಿಸಿ ಕೃತಕ ಬುದ್ಧಿಮತ್ತೆ ತಂತ್ರಜ್ಞಾನದ ಮೂಲಕ ಪರಿಸ್ಥಿತಿ ಅವಲೋಕಿಸಿ ಗಂಭೀರ ಪರಿಸ್ಥಿತಿ ಇದ್ದರೆ ಟೆನೆಕ್ಟ್ ಪ್ಲಸ್ ಇಂಜೆಕ್ಷನ್ ನೀಡಲಾಗುವುದು.
ಅಲ್ಲಿಂದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಹೆಚ್ಚಿನ ಚಿಕಿತ್ಸೆ ಕೊಡಿಸಲಾಗುತ್ತದೆ. ಟೆನೆಕ್ಟ್ ಪ್ಲಸ್ ಇಂಜೆಕ್ಷನ್ ಗೆ 35 ರಿಂದ 40 ಸಾವಿರ ರೂ. ಖರ್ಚಾಗಲಿದ್ದು, ಸ್ಪೋಕ್ ಕೇಂದ್ರಗಳಲ್ಲಿ ಇದನ್ನು ಉಚಿತವಾಗಿ ನೀಡಲಾಗುತ್ತದೆ ಎಂದು ಹೇಳಿದ್ದಾರೆ. ಈ ಸ್ಪೋಕ್ ಕೇಂದ್ರದಿಂದ ಹಲವರಿಗೆ ಸಹಾಯಕ ಆಗಲಿದೆ ಎನ್ನಲಾಗಿದೆ.