Rahul Gandhi: ಅಯ್ಯೋದ್ಯೆ ರಾಮ ಮಂದಿರಕ್ಕೆ ಭೇಟಿ ನೀಡುತ್ತೀರಾ….? ಸ್ಪಷ್ಟನೆ ನೀಡಿದ ರಾಹುಲ್ ಗಾಂಧಿ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಯವರು ಅಯೋಧ್ಯೆಯ ರಾಮ ಮಂದಿರಕ್ಕೆ ಭೇಟಿ ನೀಡುವ ಕುರಿತು ಊಹಾಪೋಹಗಳು
Rahul Gandhi Ayodhya Ram Aandir: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಅಯೋಧ್ಯೆಯ ರಾಮ ಮಂದಿರಕ್ಕೆ ಭೇಟಿ ನೀಡುವ ಕುರಿತು ಅನೇಕ ಅಭಿಪ್ರಾಯಗಳು ಬರುತ್ತಿದೆ. ಭಾರತ್ ಜೋಡೋ ಯಾತ್ರೆಯ ಸಂಯೋಜಕ ಹಾಗು ರಾಹುಲ್ ಗಾಂಧಿಯ ಪ್ರತಿಷ್ಠಾನದ CEO ವಿಜಯ್ ಮಹಾಜನ್ ಅವರು ಸ್ಥಳೀಯ ಕಾಂಗ್ರಸ್ ಮುಖಂಡರೊಂದಿಗೆ ಶ್ರೀ ರಾಮ ಮಂದಿರದ (Ram Mandir) ಮುಖ್ಯ ಅರ್ಚಕರನ್ನು ಭೇಟಿ ಮಾಡಿದ್ದಾರೆ.
ಮಾಹಿತಿ ಪ್ರಕಾರ ಸಭೆ ಒಂದು ವಾರದ ಹಿಂದೆ ನೆಡೆದಿದೆ ಸಭೆಯಲ್ಲಿ ರಾಹುಲ್ ಗಾಂಧಿ ರಾಮ ಜನ್ಮ ಭೂಮಿಗೆ ಭೇಟಿಯಾಗುವ ಕುರಿತು ಚರ್ಚೆಗಳು ನಡೆದಿದೆ. ಆದರೆ, ಭೇಟಿ ಕುರಿತು ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ರಾಮ ಮಂದಿರಕ್ಕೆ ಭೇಟಿ ನೀಡಿ ಅವರ ಆಶೀರ್ವಾದ ಪಡೆಯುವ ಹಕ್ಕು ಪ್ರತಿಯೊಬ್ಬರಿಗೂ ಇದೆ
“ರಾಜೀವ್ ಗಾಂಧಿ ಪ್ರತಿಷ್ಠಾನದ ಪದಾಧಿಕಾರಿಗಳು, ಕೆಲವು ಸ್ಥಳೀಯ ಕಾಂಗ್ರೆಸ್ ನಾಯಕರು ಆಚಾರ್ಯ ಸತ್ಯೇಂದ್ರ ದಾಸ್ ಅವರನ್ನು ರಾಮಘಾಟ್‌ನಲ್ಲಿರುವ ಅವರ ಆಶ್ರಮದಲ್ಲಿ ಭೇಟಿಯಾದರು” ಎಂದು ಮೂಲಗಳು ತಿಳಿಸಿವೆ. ರಾಹುಲ್ ಗಾಂಧಿ ಭೇಟಿಯ ವೇಳೆ ಆಚಾರ್ಯ ಸತ್ಯೇಂದ್ರ ದಾಸ್ ಅವರು ರಾಮ ಮಂದಿರಕ್ಕೆ ಭೇಟಿ ನೀಡಿ ಅವರ ಆಶೀರ್ವಾದ ಪಡೆಯುವ ಹಕ್ಕು ಪ್ರತಿಯೊಬ್ಬರಿಗೂ ಇದೆ ಎಂದು ಹೇಳಿದ್ದಾರೆ.
“ರಾಹುಲ್ ಗಾಂಧಿ ರಾಮಲಲ್ಲಾ ರನ್ನು ಭೇಟಿ ಮಾಡಲು ಬಯಸಿದರೆ, ಅವರಿಗೆ ಸ್ವಾಗತವಿದೆ. ಆದರೆ, ಸ್ಥಳೀಯ ಕಾಂಗ್ರೆಸ್ಸಿಗರು ಅವರ ಭೇಟಿಯ ದಿನಾಂಕವನ್ನು ಖಚಿತಪಡಿಸಿಲ್ಲ” ಎಂದು ದಾಸ್ ಮಾಧ್ಯಮಗಳನ್ನು ಉದ್ದೇಶಿಸಿ ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಪಾಲ್ಗೊಳ್ಳುವ ಸಾಧ್ಯತೆಯಿದೆ
ಸದ್ಯ ರಾಮಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದ್ದು, ಜನವರಿ 21ರಿಂದ 23ರ ನಡುವೆ ನಡೆಯಲಿರುವ ರಾಮ ಮಂದಿರದ ಮಹಾಮಸ್ತಕಾಭಿಷೇಕ ಕಾರ್ಯಕ್ರಮಕ್ಕೆ ದೊಡ್ಡ ಮಟ್ಟದಲ್ಲಿ ವ್ಯವಸ್ಥೆ ಮಾಡಲಾಗುತ್ತಿದೆ. ಇತ್ತೀಚೆಗೆ ವಿಶ್ವ ಹಿಂದೂ ಪರಿಷತ್, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮತ್ತು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಸದಸ್ಯರು ಮಹಾಮಸ್ತಕಾಭಿಷೇಕ ಸಮಾರಂಭದ ವಿಸ್ತೃತ ಯೋಜನೆಯನ್ನು ರೂಪಿಸಲು ಸಭೆ ನಡೆಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಪಾಲ್ಗೊಳ್ಳುವ ಸಾಧ್ಯತೆಯಿದೆ.
ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನೆ ಬಗ್ಗೆ ಮಾಹಿತಿ
ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನೆ ಅದ್ಧೂರಿಯಾಗಿ ನಡೆಯಲು ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೂಚಿಸಿದ್ದಾರೆ. ಆದಿತ್ಯನಾಥ್ ಅವರು ರಾಮ ಮಂದಿರದ ಅಭಿವೃದ್ಧಿಯನ್ನು ನೋಡಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ಯುಪಿ ಸರ್ಕಾರವು ರಾಮಪಥಗಳಲ್ಲಿ ಒಂದನ್ನು ಉದ್ಘಾಟಿಸಿತು. ಮುಂದಿನ ವರ್ಷ ಜನವರಿಯಲ್ಲಿ ಅಯೋಧ್ಯೆಯಲ್ಲಿ ರಾಮಮಂದಿರದ ಶಂಕುಸ್ಥಾಪನೆ ಸಮಾರಂಭದಲ್ಲಿ ಪ್ರಧಾನಿ ಮೋದಿ ಪಾಲ್ಗೊಳ್ಳಲಿದ್ದಾರೆ ಎನ್ನಲಾಗಿದೆ.