Rajasthan Election: ಪ್ರತಿ ಮಹಿಳೆಗೆ 10000 ಮತ್ತು ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್, ಕಾಂಗ್ರೆಸ್ ಸರ್ಕಾರದ ಇನ್ನೊಂದು ಘೋಷಣೆ.

ಮಹಿಳೆಯರಿಗೆ, ವಿದ್ಯಾರ್ಥಿಗಳಿಗೆ ಹಾಗು ರೈತರಿಗೆ ಬಿಗ್ ಆಫರ್ ಕೊಟ್ಟ ಕಾಂಗ್ರೆಸ್ ಸರ್ಕಾರ

Rajasthan Government Guarantee: ಸದ್ಯದಲ್ಲೇ ಚುನಾವಣೆ ಹತ್ತಿರ ಬರುತಿದ್ದು, ಎಲ್ಲಾ ರಾಜ್ಯದಲ್ಲೂ ಯೋಜನೆಗಳ ಸುರಿಮಳೆಯೇ ಸುರಿಯುತ್ತಿದೆ. ಈ ಹಿನ್ನೆಲೆಯಲ್ಲಿ ಜೈಪುರದಲ್ಲಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿ ಸರ್ಕಾರಿ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್, ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆ (ಒಪಿಎಸ್​) ಅನುಷ್ಠಾನ, ಎಲ್ಲರಿಗೆ 15 ಲಕ್ಷ ವಿಮೆ ರಕ್ಷಣೆ ಸೇರಿ ಕಾಂಗ್ರೆಸ್​ನ 7 ಗ್ಯಾರಂಟಿಗಳನ್ನು ಘೋಷಿಸಿದರು ಹಾಗು ಚುನಾವಣೆಯಲ್ಲಿ ಮರು ಆಯ್ಕೆ ಆದರೆ ಈ ಎಲ್ಲಾ ಯೋಜನೆಗಳನ್ನು ಜಾರಿಗೆ ತರಲಾಗುವುದು ಎಂದು ಭರವಸೆ ನೀಡಿದರು.

Rajasthan Election
Image Credit: Oneindia

ಕಾಂಗ್ರೆಸ್ ಸರ್ಕಾರದಿಂದ ಹೊಸ ಯೋಜನೆಗಳ ಭರವಸೆ

ಈಗಾಗಲೇ ಕರ್ನಾಟಕದಲ್ಲಿ ಗ್ಯಾರೆಂಟಿ ಯೋಜನೆಗಳಿಂದ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಿದ್ದು, ಇನ್ನುಳಿದ ರಾಜ್ಯದಲ್ಲೂ ಇದೆ ಐಡಿಯಾ ಪ್ರಾರಂಭ ಆಗಿದ್ದು, ತಮ್ಮ ಸರ್ಕಾರವು ಮರು ಆಯ್ಕೆಯಾದರೆ ಪ್ರಸ್ತಾಪಿಸಿದ ಗ್ಯಾರಂಟಿಗಳನ್ನು ಜಾರಿಗೆ ತರಲಾಗುವುದು ಎಂದು ಜೈಪುರದಲ್ಲಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಭರವಸೆ ನೀಡಿದರು.

ಎಲ್ಲಾ ವರ್ಗದವರಿಗೂ ಯೋಜನೆಗಳನ್ನು ನೀಡಲಾಗುವುದು

ಜೈಪುರದಲ್ಲಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಮಾತನಾಡಿ ತಮ್ಮ ಸರ್ಕಾರವು 1 ಕೋಟಿ ಮಹಿಳೆಯರಿಗೆ ಮೂರು ವರ್ಷಗಳವರೆಗೆ ಉಚಿತ ಇಂಟರ್ನೆಟ್ ಸೇವೆಯೊಂದಿಗೆ ಸ್ಮಾರ್ಟ್‌ಫೋನ್‌ಗಳನ್ನು ನೀಡುತ್ತದೆ. ಪ್ರತಿ ವಿದ್ಯಾರ್ಥಿಗೆ ಇಂಗ್ಲಿಷ್ ಮಾಧ್ಯಮದ ಶಿಕ್ಷಣ ನೀಡಲಾಗುವುದು. ಏಳು ಗ್ಯಾರಂಟಿಗಳಲ್ಲಿ 1.05 ಕೋಟಿ ಕುಟುಂಬಗಳಿಗೆ 500 ರೂ.ಗೆ ಅಡುಗೆ ಅನಿಲ ಸಿಲಿಂಡರ್‌, ಕುಟುಂಬದ ಮಹಿಳೆಗೆ ವಾರ್ಷಿಕ 10,000ರೂ. ಗೌರವಧನ ಒಳಗೊಂಡಿದೆ ಎಂದು ಘೋಷಿಸಿದರು. ರಾಜಸ್ಥಾನ ವಿಧಾನಸಭೆಯ ಎಲ್ಲ 200 ಸ್ಥಾನಗಳಿಗೆ ನ.25 ರಂದು ಮತದಾನ ನಡೆಯಲಿದ್ದು, ಡಿ.3 ರಂದು ಮತ ಎಣಿಕೆ ನಡೆಯಲಿದೆ ಎನ್ನಲಾಗಿದೆ.

rajasthan government guarantee
Image Credit: IBC24

ರೈತರಿಗಾಗಿ ಸಾಲ ಮನ್ನಾ

ರೈತರ ಕಷ್ಟಗಳಿಗೆ ಸ್ಪಂದಿಸಿ ಅವರು ಮಾಡಿಕೊಂಡ ಸಾಲಕ್ಕೆ ಸರಕಾರ ಹೊಣೆ ಆಗಲಿದ್ದು, ರೈತರ ಸಾಲ ಮನ್ನಾ ಮಾಡುವುದಾಗಿ ಕಾಂಗ್ರೆಸ್ ಹಿರಿಯ ನಾಯಕ ರಾಹುಲ್ ಗಾಂಧಿ ನೀಡಿದ ಭರವಸೆಯನ್ನು ಸರಿಯಾದ ಸಮಯದಲ್ಲಿ ಈಡೇರಿಸಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

Leave A Reply

Your email address will not be published.