Ration Card : ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಿದವರಿಗೆ ಗುಡ್ ನ್ಯೂಸ್, ಇನ್ನೊಂದು ಘೋಷಣೆ ಮಾಡಿದ ಸರ್ಕಾರ.
ರಾಜ್ಯ ಸರಕಾರದಿಂದ ಪಡಿತರ ಚೀಟಿ ವಿತರಣೆ ಕುರಿತು ಹೊಸ ನಿಯಮ ಕಡ್ಡಾಯ , ಶೀಘ್ರ ನಿಯಮ ಜಾರಿಗೆ ಬರಲಿದೆ
Ration Card Latest Update: ಹೊಸ ಪಡಿತರ ಚೀಟಿ ಅರ್ಜಿಯ ಬಗ್ಗೆ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು ಹೇಳಿಕೆ ನೀಡಿದ್ದಾರೆ. ರಾಜ್ಯ ಸರ್ಕಾರದಿಂದ ಹೊಸದಾಗಿ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದವರಿಗೆ ಒಂದು ಶುಭ ಸುದ್ದಿಇದೆ.
ಹಲವು ಸಮಯದಿಂದ ರೇಷನ್ ಕಾರ್ಡ್ ಅರ್ಜಿ ವಿತರಣೆಯ ಬಗ್ಗೆ ನಿರ್ಬಂಧ ಹೇರಿದ್ದು, ಈಗ ಹೊಸ ರೇಷನ್ ಕಾರ್ಡ್ ಅರ್ಜಿಯ ಬಗ್ಗೆ ಶೀಘ್ರವೇ ಅರ್ಹ ಫಲಾನುಭವಿಗಳಿಗೆ ರೇಷನ್ ಕಾರ್ಡ್ ವಿತರಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ.
ಆದಷ್ಟು ಶೀಘ್ರ ಪಡಿತರ ಚೀಟಿ ಅರ್ಜಿ ಪರಿಶೀಲನೆ
ಅರ್ಹ ಕುಟುಂಬಗಳಿಗೆ ಹೊಸ ಪಡಿತರ ಚೀಟಿಗಳನ್ನು ವಿತರಣೆ ಮಾಡುವ ಕುರಿತು ಮಾಹಿತಿ ನೀಡಿರುವ ಸಚಿವರು, ರಾಜ್ಯದಲ್ಲಿ ಹೊಸ ಪಡಿತರ ಚೀಟಿಗಾಗಿ 2.90 ಲಕ್ಷ ಅರ್ಜಿಗಳು ಸಲ್ಲಿಕೆಯಾಗಿವೆ. ಆದಷ್ಟು ಶೀಘ್ರ ಈ ಎಲ್ಲಾ ಅರ್ಜಿಗಳನ್ನು ಪರಿಶೀಲನೆ ಮಾಡಿ ಹೊಸ ಪಡಿತರ ಚೀಟಿಗಳನ್ನು ವಿತರಣೆ ಮಾಡಲಾಗುವುದು ಎಂದು ಹೇಳಿದ್ದಾರೆ.
ಪಡಿತರ ಚೀಟಿಗೆ ಈಗಾಗಲೇ ಅರ್ಜಿ ಸಲ್ಲಿಸಿದವರ ಅರ್ಜಿಗಳ ಪರಿಶೀಲನಾ ಕಾರ್ಯ ಶೇ.75ರಷ್ಟು ಪರಿಶೀಲನಾ ಕಾರ್ಯ ಪೂರ್ಣಗೊಂಡಿದೆ. ಪರಿಶೀಲನಾ ಕಾರ್ಯ ಸಂಪೂರ್ಣವಾಗಿ ಮುಗಿದ ನಂತರದಲ್ಲಿ ಅರ್ಜಿ ಸಲ್ಲಿಸಿದವರ ಪೈಕಿ ಅರ್ಹರಿಗೆ ಮಾತ್ರವೇ ಪಡಿತರ ಚೀಟಿ ಕೈ ಸೇರಲಿದೆ ಎನ್ನಲಾಗಿದೆ.
ಹೊಸ ರೇಷನ್ ಕಾರ್ಡ್ ಗಾಗಿ ಕಾಯುತ್ತಿರುವ ಜನ ಸಾಮಾನ್ಯರು
ಜನ ಸಾಮಾನ್ಯರು ಬಹಳ ಸಮಯದಿಂದ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿ ಕಾಯುತ್ತಿದ್ದಾರೆ. ಪಡಿತರ ಚೀಟಿ ಹೊಂದಿದವರು ಮಾತ್ರ ಸರ್ಕಾರದಿಂದ ಸಿಗುವ ಸೌಲಭ್ಯ ಪಡೆಯಬಹುದಾಗಿದೆ. ಆದ್ದುದರಿಂದ ಪಡಿತರ ಚೀಟಿಯ ಅರ್ಜಿಯನ್ನು ಆದಷ್ಟು ಬೇಗ ಪರಿಶೀಲಿಸಿ ಪ್ರತಿಯೊಬ್ಬರು ಪಡಿತರ ಚೀಟಿ ಹೊಂದುವಂತೆ ಮಾಡಿದರೆ ಸರಕಾರದ ಸೌಲಭ್ಯ ಎಲ್ಲರೂ ಪಡೆಯಲು ಸಹಾಯಕ ಆಗಲಿದೆ.