RTC And Aadhaar: ಸ್ವಂತ ಆಸ್ತಿ ಮತ್ತು ಜಮೀನು ಹೊಂದಿರುವ ರೈತರು ತಕ್ಷಣ ಈ ಕೆಲಸ ಮಾಡಿ, ಇಲ್ಲವಾದರೆ ಪರಿಹಾರ ರದ್ದು.

ಸ್ವಂತ ಆಸ್ತಿ ಮತ್ತು ಜಮೀನು ಹೊಂದಿರುವ ರೈತರು ತಕ್ಷಣ ಪಹಣಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಬೇಕು.

RTC Link With Aadhar Card: ದೇಶದಲ್ಲಿ ಆಧಾರ್ ಕಾರ್ಡ್ (Aadhaar Card) ಮಹತ್ವ ಈಗಾಗಲೇ ಎಲ್ಲರಿಗೂ ತಿಳಿದಿರುತ್ತದೆ. ಹಾಗೆಯೆ ಆಧಾರ್ ಕಾರ್ಡ್ ಅನ್ನು ಪಾನ್ ಕಾರ್ಡ್(Pan Card) ಜೊತೆ, ರೇಷನ್ ಕಾರ್ಡ್ ಜೊತೆ, ಹಾಗೆ ಬ್ಯಾಂಕ್ ಪಾಸ್ ಬುಕ್ ಜೊತೆಗೂ ಕೂಡ ಲಿಂಕ್ ಮಾಡುವಂತೆ ಸರ್ಕಾರ ಈಗಾಗಲೇ ತಿಳಿಸಿದೆ. ಹಾಗೆಯೆ ರೈತರು ಇನ್ನುಮುಂದೆ ತಮ್ಮ ಪಹಣಿ ಪತ್ರಿಕೆಯಲ್ಲಿ (RTC) ಆಧಾರ್ ಲಿಂಕ್ ಮಾಡುವಂತೆ ಆದೇಶಿಸಿದೆ. ಇದಕ್ಕೆ ಮುಖ್ಯ ಕಾರಣ ರಾಜ್ಯದಲ್ಲಿ ಶೇ.70 ರಷ್ಟು ಸಣ್ಣ ರೈತರಿದ್ದಾರೆ.

ಆದರೆ, ಕೇಂದ್ರ ಸರ್ಕಾರದ ಹಳೆಯ ಅಂಕಿ-ಅಂಶಗಳ ಪ್ರಕಾರ ರಾಜ್ಯದಲ್ಲಿನ ಸಣ್ಣ ರೈತರ ಸಂಖ್ಯೆ ಶೇ.44 ಮಾತ್ರ. ಇದರಿಂದ ರಾಜ್ಯಕ್ಕೆ ಲಭ್ಯವಾಗುವ ಬರ ಪರಿಹಾರದಲ್ಲೂ ಅನ್ಯಾಯವಾಗುತ್ತಿದೆ. ಹೀಗಾಗಿ ಗ್ರಾಮ ಲೆಕ್ಕಿಗರು ಮುಂದಿನ ದಿನಗಳಲ್ಲಿ ರೈತರ ಪಹಣಿಗಳನ್ನು ಆಧಾರ್ ನಂಬರ್ ಜೊತೆಗೆ ಲಿಂಕ್ ಮಾಡಿದರೆ ರಾಜ್ಯದ ಸಣ್ಣ ರೈತರ ಅಂಕಿ-ಸಂಖ್ಯೆ ನಿಖರವಾಗಿ ತಿಳಿಯಲಿದೆ ಎನ್ನಲಾಗಿದೆ .

RTC And Aadhar Link
Image Credit: Original Source

ರೈತರು ಹೊಂದಿರುವ ಜಮೀನಿನ ಬಗ್ಗೆ ನಿಖರ ದಾಖಲೆ ಅವಶ್ಯಕೆತೆ ಇದೆ

ನಗರದ ಜಿಲ್ಲಾಡಳಿತದ ಸಭಾಂಗಣದಲ್ಲಿ ಮಂಗಳವಾರ ನಡೆದ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಚಿವ ಕೃಷ್ಣ ಬೈರೇಗೌಡ ಅವರು, ಜಿಲ್ಲೆಯಲ್ಲಿ ಈಗಾಗಲೇ ಬೆಳೆ ಸಮೀಕ್ಷೆ ಮುಗಿದಿದೆ. ಆದರೆ, ಶೇ.33 ರಷ್ಟು ರೈತರ ಒಟ್ಟು ಜಮೀನಿನ ವಿಸ್ತೀರ್ಣದ ಮಾಹಿತಿ ನಿಖರವಾಗಿ ನಮೂದಿಸಲಾಗಿಲ್ಲ. ಅಧಿಕಾರಿಗಳ ಇಂತಹ ನಡೆಯಿಂದ ರೈತರಿಗೆ ಅನ್ಯಾಯವಾಗಲಿದೆ” ಎಂದು ಅಧಿಕಾರಿಗಳನ್ನು ಎಚ್ಚರಿಸಿದ್ದಾರೆ.

RTC Link With Aadhar Card
Image Credit: Original Source

ರೈತರಿಗೆ ನ್ಯಾಯಯುತ ಪರಿಹಾರ ಒದಗಿಸಿಕೊಡುವುದು ಬಹಳ ಮುಖ್ಯ

ಮಳೆ ಇಲ್ಲದ ಕಾರಣ ರೈತರು ಬೆಳೆ ಕೈಸೇರದೆ ಸಂಕಷ್ಟಕ್ಕೀಡಾಗಿದ್ದಾರೆ. ಇಂತಹ ಸಂದರ್ಭದಲ್ಲಿ ನಾವು ರೈತರ ಪರ ನಿಲ್ಲಬೇಕಾಗಿದೆ. ಹೀಗಾಗಿ ರೈತರಿಗೆ ನ್ಯಾಯಯುತ ಪರಿಹಾರ ತಲುಪಿಸಲು ಮುಂದಿನ ವಾರದ ಒಳಗಾಗಿ ಅಧಿಕಾರಿಗಳು ತ್ವರಿತ ಗತಿಯಲ್ಲಿ ರೈತರ ಜಮೀನಿನ ನಿಖರ ಮಾಹಿತಿಯನ್ನು ನಮೂದಿಸಿ ಎಂದರು.

ಗ್ರಾಮ ಆಡಳಿತ ಅಧಿಕಾರಿಗೆ ಆತನ ಅಧಿಕಾರದ ವ್ಯಾಪ್ತಿಯಲ್ಲಿ ಯಾವ ರೈತನಿಗೆ ಎಲ್ಲಿ.. ಎಷ್ಟು ಎಕರೆ ಜಮೀನಿದೆ? ಎಂಬ ಕನಿಷ್ಟ ಮಾಹಿತಿ ಇದ್ದೇ ಇರುತ್ತದೆ. ಅದನ್ನು ಮತ್ತೆ ರೈತನಲ್ಲಿ ಕೇಳಿ ತಂತ್ರಾಂಶದಲ್ಲಿ ನಮೂದಿಸಬೇಕು. ಅಧಿಕಾರಿಗಳು ರೈತರ ಜಮೀನಿನ ಸಂಪೂರ್ಣ ವಿಸ್ತೀರ್ಣವನ್ನು ನಮೂದಿಸದಿದ್ದರೆ ರೈತರಿಗೆ ನ್ಯಾಯಯುತ ಪರಿಹಾರ ನೀಡಲು ಸಾಧ್ಯವಿಲ್ಲ. ಇದರಿಂದ ರೈತರಿಗೆ ಅನ್ಯಾಯವಾಗಲಿದೆ ಎಂದು ತಾಲ್ಲೂಕುಗಳ ತಹಶೀಲ್ದಾರರಿಗೆ ಹೇಳಿದರು.

Leave A Reply

Your email address will not be published.