Siddaramaiah: SC/ST ಮತ್ತು ಹಿಂದುಳಿದ ವಿದ್ಯಾರ್ಥಿಗಳಿಗೆ ಇನ್ನೊಂದು ಗುಡ್ ನ್ಯೂಸ್ ಕೊಟ್ಟ ಸಿದ್ದರಾಮಯ್ಯ, ದೊಡ್ಡ ಘೋಷಣೆ.

SC/ST ಮತ್ತು ಹಿಂದುಳಿದ ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿಗಳಿಂದ ಬಿಗ್ ಆಫರ್.

SC/ST Reservation In Karnataka: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಒಂದಾದ ಮೇಲೊಂದು ಹೊಸ ಹೊಸ ಯೋಜನೆಗಳನ್ನು ಜಾರಿಗೆ ತರುತ್ತಿದ್ದಾರೆ. ಜನರ ಅನುಕೂಲಕ್ಕಾಗಿ ಈ ಯೋಜನೆಗಳು ಎನ್ನುವುದು ಅಷ್ಟೇ ಸತ್ಯವಾಗಿರುತ್ತದೆ. ಹಾಗೆ ಮುಖ್ಯ ಮಂತ್ರಿಗಳ ಅಧ್ಯಕ್ಷತೆಯಲ್ಲಿ ಇಂದು ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಜರುಗಿತು.

CM Siddaramaiah latest News
Image Credit: Vijaykarnataka

ವಿದ್ಯಾರ್ಥಿಗಳಿಗೆ ಗುಣಮಟ್ಟದ ಕಿಟ್ ವಿತರಣೆ

ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಇಲಾಖೆಗಳ ವಸತಿ ನಿಲಯಗಳ 5,48,000 ಮಕ್ಕಳಿಗೆ ವಿದ್ಯಾರ್ಥಿಗಳಿಗೆ ಟೂತ್ ಪೇಸ್ಟ್ , ಬ್ರಶ್, ಕೊಬ್ಬರಿ ಎಣ್ಣೆ, ಮೈ ಸೋಪು, ಬಟ್ಟೆ ಸೋಪು ಒಳಗೊಂಡ 93 ರೂ. ಗಳ ಕಿಟ್ ಗಂಡುಮಕ್ಕಳಿಗೆ ಹಾಗೂ ಹೆಣ್ಣು ಮಕ್ಕಳಿಗೆ 135 ರೂ.ಗಳ ವೆಚ್ಚದಲ್ಲಿ ಶುಚಿ ಸಂಭ್ರಮ ಕಿಟ್ ನೀಡಲು ಟೆಂಡರ್ ಕರೆಯಲು ಸಭೆಯಲ್ಲಿ ಒಪ್ಪಿಗೆ ನೀಡಲಾಯಿತು.ಕಿಟ್ ಗಳ ವಿತರಣೆಗೆ ವರ್ಷಕ್ಕೆ 90 ಕೋಟಿ ರೂ.ಗಳ ವೆಚ್ಚವಾಗಲಿದೆ.

ಗುಣಮಟ್ಟದ ಆಹಾರಧಾನ್ಯಗಳನ್ನು ವಿತರಣೆಗೆ ಆದೇಶ

ಪ್ರಸ್ತುತ ತಲಾ 1650ರೂ. ಪ್ರೀ ಮೆಟ್ರಿಕ್, 1750 ರೂ.ಗಳನ್ನು ಪೋಸ್ಟ್ ಮೆಟ್ರಿಕ್ ಮಕ್ಕಳಿಗೆ ಆಹಾರಧಾನ್ಯಗಳಿಗಾಗಿ ನಿಗದಿಪಡಿಸಿದೆ. ರಾಗಿ, ಧಾನ್ಯ, ಎಣ್ಣೆಯನ್ನು ಜಿಲ್ಲಾಧಿಕಾರಿಗಳ ಮಟ್ಟದಲ್ಲಿ ತಾಲ್ಲೂಕುವಾರು ಪ್ಯಾಕೇಜ್ ಗಳ ಟೆಂಡರ್ ಕರೆದು ಪಡೆಯಲಾಗುತ್ತಿದೆ. ಈ ವ್ಯವಸ್ಥೆ ಯನ್ನು ಸರಿಪಡಿಸಿ ಗುಣಮಟ್ಟದ ಆಹಾರಪದಾರ್ಥಗಳನ್ನು ಒದಗಿಸಬೇಕು ಎಂದು ಮುಖ್ಯ ಮಂತ್ರಿಗಳು ಸೂಚಿಸಿದರು.

SC/ST Reservation In Karnataka
Image Credit: Dtnext

ಉನ್ನತ ಶಿಕ್ಷಣಕ್ಕೆ ಆಧ್ಯತೆ

ಸ್ವಂತ ಕಟ್ಟಡ ಇಲ್ಲದ ಶಾಲೆಗಳಿದ್ದರೆ , ಅದೇ ಕ್ಷೇತ್ರದ ಮತ್ತೊಂದು ಹೋಬಳಿಗೆ ಶಾಲೆಯನ್ನು ಸ್ಥಳಾಂತರ ಮಾಡುವಂತೆ ಸೂಚಿಸಿದರು. ಮೊರಾರ್ಜಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವಂತೆ ಸೂಚಿಸಿದ್ದು, ಶಿಕ್ಷಕರ ಗುಣಮಟ್ಟವೂ ಮುಖ್ಯ. ಶಿಕ್ಷಕರಿಗೆ ತರಬೇತಿ (ಓರಿಯೆಂಟೇಷನ್) ಕಾರ್ಯಕ್ರಮ ನೀಡಿ ಗುಣಮಟ್ಟದ ಶಿಕ್ಷಣ ನೀಡುವ ಮಟ್ಟಕ್ಕೆ ತರಬೇಕು ಎಂದು ಸೂಚಿಸಿದರು. ಐಸೆಕ್ ಮತ್ತು ಐ ಐ ಎಸ್ ಸಿ ಸಂಸ್ಥೆಗಳ ಮೂಲಜ ಕ್ರೈಸ್ ಶಾಲೆಗಳ ಶಿಕ್ಷಕರ ಮೌಲ್ಯಮಾಪನ ಮಾಡಿಸುವಂತೆ ಸೂಚಿಸಿದರು.

ಬಡ ಮಕ್ಕಳಿಗೆ  ಶಿಕ್ಷಣ ನೀಡುವುದು ಮುಖ್ಯ

ಇವತ್ತು ಯಾವ ಮಕ್ಕಳೂ ದಡ್ಡರಲ್ಲ, ಅವಕಾಶ ಮತ್ತು ಉತ್ತಮ ಕಲಿಕೆಯ ವಾತಾವರಣ ಸಿಕ್ಕರೆ ಎಲ್ಲರೂ ರಾಂಕ್ ಪಡೆಯುತ್ತಾರೆ. ಕಲಿಕೆಯ ವಾತಾವರಣ ಪರಿಣಾಮ ಬೀರುತ್ತದೆ ಎಂದರು. ಮೊರಾರ್ಜಿ ಶಾಲೆಗಳನ್ನು ಪ್ರಾರಂಭಿಸಿದ್ದೇ ಬಡವರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯ ಬೇಕೆಂಬ ಉದ್ದೇಶದಿಂದ. ಇದನ್ನು ಗಮನದಲ್ಲಿ ಇಟ್ಟುಕೊಂಡು ಕೆಲಸ ಮಾಡುವಂತೆ ಸೂಚಿಸಿದರು.

ಶಾಲೆಗೆ ಪ್ರವೇಶ ನೀಡುವ ಸಂದರ್ಭದಲ್ಲಿ ಶೇ 80 ರಷ್ಟು ಅರ್ಹತೆಯಾಧಾರದ ಮೇಲೆ ಹಾಗೂ ಶೇ 20 ರಷ್ಟು ಸ್ಥಳೀಯರಿಗೆ ಮೀಸಲಿಡಬೇಕು. ಈ ನಿಟ್ಟಿನಲ್ಲಿ ಸಾಧಕ ಬಾಧಕಗಳನ್ನು ಪರಿಶೀಲಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು. ಬಡ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎನ್ನುವುದು ಪ್ರಥಮ ಆಧ್ಯತೆಯಾಗಿರಲಿ ಎಂದು ಸೂಚಿಸಿದರು.

Leave A Reply

Your email address will not be published.