Shrama Shakti: ರಾಜ್ಯದ ಪ್ರತಿ ಮಹಿಳೆಗೆ ಸರ್ಕಾರದಿಂದ 50,000 ರೂ, ಮಹಿಳೆಯರಿಗಾಗಿ ಬಂತು ಇನ್ನೊಂದು ಯೋಜನೆ.

ರಾಜ್ಯದ ಮಹಿಳೆಯರಿಗಾಗಿ ಬಂತು ಶ್ರಮಶಕ್ತಿ ಯೋಜನೆ.

Shrama Shakti Scheme for women’s: ರಾಜ್ಯ ಸರ್ಕಾರವು ಒಂದು ಮಹತ್ವದ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯಡಿ ರಾಜ್ಯದ ಅಲ್ಪಸಂಖ್ಯಾತರು ತಮ್ಮ ಆರ್ಥಿಕ ಸ್ಥಿತಿಯನ್ನು ಸುಧಾರಿಸಿಕೊಳ್ಳಬಹುದಾಗಿದೆ. ಸರ್ಕಾರವು ಈ ಮೂಲಕ ಅಲ್ಪಸಂಖ್ಯಾತ ಮಹಿಳೆಯರಿಗೆ ದೀಪಾವಳಿಯ ಸಿಹಿಸುದ್ದಿ ನೀಡಿದೆ ಎನ್ನಬಹುದು.

ಈ ಯೋಜನೆಯು ಅಲ್ಪಸಂಖ್ಯಾತ ಸಮುದಾಯದ ವಿಧವೆ, ವಿಚ್ಛೇದಿತ, ಅವಿವಾಹಿತ ಮಹಿಳೆಯರಿಗೆ ಮಾತ್ರ ಸೀಮಿತ ಆಗಿರುತ್ತದೆ. ಈ ಯೋಜನೆಯಡಿ ಅಲ್ಪಸಂಖ್ಯಾತ ಸಮುದಾಯದ ವಿಧವೆ, ವಿಚ್ಛೇದಿತ, ಅವಿವಾಹಿತ ಮಹಿಳೆಯರು ಸಹಾಯಧನ, ಸಾಲ ಸೌಲಭ್ಯಕ್ಕೆ ಅರ್ಜಿ ಹಾಕಬಹುದಾಗಿದೆ.

Shrama Shakti Scheme
Image Credit: Telegraphindia

ಅಲ್ಪಸಂಖ್ಯಾತರಿಗೆ ಯೋಜನೆಯ ಸೌಲಭ್ಯ

ರಾಜ್ಯ ಸರ್ಕಾರವು ಅಲ್ಪಸಂಖ್ಯಾತರಿಗೆಂದೆ ಈ ಯೋಜನೆಯನ್ನು ಜಾರಿಗೆ ತಂದಿದೆ. ಅಲ್ಪಸಂಖ್ಯಾತ ವರ್ಗಕ್ಕೆ ಸೇರುವ ಕ್ರೈಸ್ತ, ಮುಸಲ್ಮಾನ, ಜೈನ್, ಆಂಗ್ಲೋ ಇಂಡಿಯನ್ಸ್, ಬೌದ್ಧ, ಸಿಖ್ ಮತ್ತು ಪಾರ್ಸಿ ಜನಾಂಗದವರು ಈ ಯೋಜನೆಯ ಸೌಲಭ್ಯವನ್ನು ಪಡೆಯಬಹುದಾಗಿದೆ. ಅಲ್ಪಸಂಖ್ಯಾತ ಸಮುದಾಯದ ವಿಧವೆ, ವಿಚ್ಛೇದಿತ , ಅವಿವಾಹಿತ ಮಹಿಳೆಯರಿಗೆ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು 2023-24 ನೇ ಸಾಲಿನ ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು ಆನ್‍ಲೈನ್ ಅರ್ಜಿ ಆಹ್ವಾನಿಸಿದೆ.

shrama shakti scheme for women's
Image Credit: Original Source

Shrama Shakti Scheme

ಕಲಾತ್ಮಕ ಮತ್ತು ತಾಂತ್ರಿಕ ಕೌಶಲ್ಯ ಗಳನ್ನೂ ಮುಂದಿನ ಪೀಳಿಗೆಗೂ ಉಳಿಸಿಕೊಳ್ಳುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ. ಕುಲಕಸುಬುದಾರರಿಗೆ ತರಬೇತಿ ನೀಡಿ ಅವರು ತಮ್ಮ ಕಲಾತ್ಮಕ ಮತ್ತು ತಾಂತ್ರಿಕ ಕೌಶಲ್ಯವನ್ನು ವೃದ್ಧಿಸಿಕೊಂಡು ಅದೇ ಕಸುಬನ್ನು ಮುಂದುವರೆಸಲು ಅಥವಾ ಸಣ್ಣ ವ್ಯಾಪಾರವನ್ನು ಪ್ರಾರಂಭಿಸಲು ಅಥವಾ ಅಭಿವೃದ್ಧಿಗೊಳಿಸಲು ಶ್ರಮಶಕ್ತಿ ಸಾಲ ಯೋಜನೆಯಡಿ ನಿಗಮದಿಂದ ಶೇ. 50% ಸಹಾಯಧನದೊಂದಿಗೆ ಕಡಿಮೆ ಬಡ್ಡಿ ದರದಲ್ಲಿ ರೂ. 50 ಸಾವಿರ ಸಾಲ ಸೌಲಭ್ಯವನ್ನು ನೀಡಲಾಗುವುದು. ಆಸಕ್ತರು ಈ ಎಲ್ಲಾ ಯೋಜನೆಗಳಿಗೆ ಅರ್ಜಿಯನ್ನು ವೆಬ್‍ಸೈಟ್ www.kmdconline.karnataka.gov.in ರಲ್ಲಿ ಸಲ್ಲಿಸಬೇಕು. ಹಾಗು ಇನ್ನಿತರ ಅನೇಕ ಮಾಹಿತಿಯನ್ನು ಈ ವೆಬ್‍ಸೈಟ್ ನಲ್ಲಿ ತಿಳಿಯಬಹುದಾಗಿದೆ.

Leave A Reply

Your email address will not be published.