Board Exam: SSLC ಪರೀಕ್ಷೆ ಬರೆಯುವ ಎಲ್ಲಾ ಮಕ್ಕಳಿಗೆ ಸರ್ಕಾರದ ಇನ್ನೊಂದು ಆದೇಶ, ನ 4 ಕೊನೆಯ ದಿನಾಂಕ.
SSLC ಪರೀಕ್ಷೆ ಬರೆಯುವ ಎಲ್ಲಾ ಮಕ್ಕಳಿಗೆ ಸರ್ಕಾರದ ಇನ್ನೊಂದು ಆದೇಶ.
SSLC Annual Exam -1 Apply: ಎಸ್ಸೆಸ್ಸೆಲ್ಸಿ ಪರೀಕ್ಷೆ ಬಗ್ಗೆ ಮಾಹಿತಿ ಬೇಕಾದವರು ಸಂಪೂರ್ಣ ಮಾಹಿತಿ ಇಲ್ಲಿ ಪಡೆಯಿರಿ ಮುಂದಿನ ವರ್ಷದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು (SSLC Exam) ನೀವು ಬರೆಯುದಾದರೆ ಇಷ್ಟು ವರ್ಷದಂತಿಲ್ಲ ಪರೀಕ್ಷೆಯ ನಿಯಮ,ಅಂದರೆ 2023-24ನೇ ಸಾಲಿನಿಂದ ಜಾರಿಗೆ ಬರುವಂತೆ SSLC ಗೆ 3 ಪರೀಕ್ಷೆಗಳನ್ನು ನಡೆಸಲಾಗುತ್ತಿದೆ.
ಮಾರ್ಚ್ 2024ರಲ್ಲಿ ನಡೆಯಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆ-1ಕ್ಕೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ವಿದ್ಯಾರ್ಥಿಗಳ ನೋಂದಣಿಯನ್ನುಆರಂಭಿಸಿದೆ. ನೋಂದಣಿ ಕಾರ್ಯ ಮಂಗಳವಾರ ಆರಂಭವಾಗಿದ್ದು, ನವೆಂಬರ್ 4 ಕೊನೆಯ ದಿನವಾಗಿದೆ.

ಎಸ್ಸೆಸ್ಸೆಲ್ಸಿ ಪರೀಕ್ಷೆಯ ಅಭ್ಯರ್ಥಿಗಳ ನೋಂದಣಿಯಾ ವಿವರ
ಪರೀಕ್ಷೆ-1ಕ್ಕೆ ಅರ್ಹ ಅಭ್ಯರ್ಥಿಗಳ ನೋಂದಣಿ ಮಾಹಿತಿಯನ್ನು ಮಂಡಳಿ ಜಾಲತಾಣ https://kseab.karnataka.gov.in/ ನಲ್ಲಿ ಶಾಲಾ ಲಾಗಿನ್ ಪಡೆಯಲು ಯೋಜಿಸಲಾಗಿದೆ. ರಾಜ್ಯದ ಎಲ್ಲ ಸರ್ಕಾರಿ, ಮಾನ್ಯತೆ ಪಡೆದಿರುವ ಅನುದಾನಿತ ಮತ್ತು ಖಾಸಗಿ ಶಾಲೆಗಳು ಆಯಾ ಶಾಲೆಯ ಅಭ್ಯರ್ಥಿ, ಖಾಸಗಿ ಮತ್ತು ಪುನರಾವರ್ತಿತ ವಿದ್ಯಾರ್ಥಿಗಳನ್ನು ನೋಂದಣಿ ಮಾಡಿಕೊಳ್ಳಬಹುದು.
ಶಾಲಾ ಮುಖ್ಯ ಶಿಕ್ಷಕರು ತಮ್ಮ ಶಾಲಾ ಲಾಗಿನ್ ನಲ್ಲಿ ಮಂಡಳಿ ವತಿಯಿಂದ User Name ಮತ್ತು ಪಾಸ್‌ವರ್ಡ್ ಬಳಸಿ ಆನ್‌ಲೈನ್‌ನಲ್ಲಿ ನೋಂದಣಿ ಮಾಡಬಹುದು. ಶಾಲಾ ವಿದ್ಯಾರ್ಥಿಗಳ ಮಾಹಿತಿ, ಭಾವಚಿತ್ರ ಮತ್ತು ಸಹಿಯನ್ನು ಅಪ್‌ಲೋಡ್ ಮಾಡಬೇಕು.

ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಪರೀಕ್ಷಾ ಶುಲ್ಕದಲ್ಲಿ ವಿನಾಯಿತಿ
ಪರಿಶಿಷ್ಟ ಜಾತಿ, ಪಂಗಡ ವಿದ್ಯಾರ್ಥಿಗಳ ಆಧಾರ್ ಲಿಂಕ್ ಆಗಿರುವ ಬ್ಯಾಂಕ್ ಖಾತೆಯ ವಿವರಗಳನ್ನು ಕಡ್ಡಾಯವಾಗಿ ನೋಂದಣಿ ಮಾಡಬೇಕು. ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಪರೀಕ್ಷಾ ಶುಲ್ಕದಲ್ಲಿ ವಿನಾಯಿತಿ ಪಡೆಯಲು ಜಾತಿ ಮತ್ತು ಆದಾಯ ಪ್ರಮಾಣಪತ್ರ ಸಲ್ಲಿಸಬೇಕು ಎಂದು ಮಂಡಳಿ ನಿರ್ದೇಶಕರು ತಿಳಿಸಿದ್ದಾರೆ.
ಮಾಹಿತಿಯ ತಿದ್ದುಪಡಿಗೆ ನೇರವಾಗಿ ಅವಕಾಶ ಇರುವುದಿಲ್ಲ.
ಶಾಲಾ ವಿದ್ಯಾರ್ಥಿಗಳ ಬಹುತೇಕ ಮಾಹಿತಿಯನ್ನು ಸ್ಯಾಟ್ಸ್ ದತ್ತಾಂಶದಿಂದ ಪಡೆಯುತ್ತಿರುವುದರಿಂದ ಅಭ್ಯರ್ಥಿಯ ಹೆಸರು, ತಂದೆ, ತಾಯಿ ಹೆಸರು, ಜನ್ಮ ದಿನಾಂಕ, ಪ್ರವರ್ಗ, ಲಿಂಗ, ಧರ್ಮ ಮತ್ತು ಮಾಧ್ಯಮ ಇವುಗಳಲ್ಲಿ ಯಾವುದೇ ತಿದ್ದುಪಡಿ ಇದ್ದಲ್ಲಿ ಮಂಡಳಿಯ ಜಾಲತಾಣದಲ್ಲಿ ನೇರವಾಗಿ ಮಾಡಲು ಸಾಧ್ಯವಿಲ್ಲ. ಸ್ಯಾಟ್ಸ್ ನಲ್ಲಿ ತಿದ್ದುಪಡಿ ಮಾಡಿದ ನಂತರ ಮಂಡಳಿ ಶಾಲಾ ಲಾಗಿನ್ ನಲ್ಲಿ ನೋಂದಣಿ ಮಾಡುವಂತೆ ಸಲಹೆ ನೀಡಿದೆ.