DA Hike: ಸರ್ಕಾರೀ ನೌಕರರ ತುಟ್ಟಿಭತ್ಯೆ 4% ಹೆಚ್ಚಳ, ಸ್ಪಷ್ಟನೆ ನೀಡಿದ ರಾಜ್ಯ ಸರ್ಕಾರ.

ಸರ್ಕಾರೀ ನೌಕರರ ತುಟ್ಟಿಭತ್ಯೆ ಹೆಚ್ಚಳದ ಬಗ್ಗೆ ಸ್ಪಷ್ಟನೆ ನೀಡಿದ ಸರ್ಕಾರ.

State Government Employees DA Hike: ಸಾಮಾಜಿಕ ಮಾಧ್ಯಮಗಳಲ್ಲಿ ಕೆಲವೊಂದು ಸುದ್ದಿ, ಪೋಟೋ, ಆದೇಶ ಪ್ರತಿಗಳು ಕ್ಷಣ ಮಾತ್ರದಲ್ಲಿ ವೈರಲ್ ಆಗುತ್ತಾ ಇರುತ್ತದೆ . ಹೀಗೆ ಆಗಿರೋ ವೈರಲ್ ಆದೇಶದಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ(DA) ಶೇ.4ರಷ್ಟು ಹೆಚ್ಚಳ ಮಾಡಲಾಗಿದೆ. ಇದಕ್ಕೆ ಸಿಎಂ ಸಿದ್ಧರಾಮಯ್ಯ ಅನುಮೋದನೆ ನೀಡಿದ್ದಾರೆ. ಶೀಘ್ರವೇ ಆರ್ಥಿಕ ಇಲಾಖೆ ಆದೇಶ ಹೊರಡಿಸಲಿದೆ ಎಂಬುದಾಗಿಯೂ ಒಂದಾಗಿದೆ.

ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿಸುದ್ದಿ ಎನ್ನುವಂತೆ ತುಟ್ಟಿಭತ್ಯೆ ( Dearness Allowance – DA) ಶೇ.4ರಷ್ಟು ಹೆಚ್ಚಳ ಮಾಡಲಾಗಿದೆ. ರಾಜ್ಯ ಸರ್ಕಾರ ಇದಕ್ಕೆ ಅನುಮೋದನೆ ನೀಡಲಾಗಿದೆ ಅನ್ನೋ ಆದೇಶವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಇದರಿಂದ ರಾಜ್ಯ ಸರ್ಕಾರಿ ನೌಕರರು ಖುಷಿಗೊಂಡಿದ್ದರು. 

State Government Employees DA Hike
Image Credit: Hindustantimes

ನಕಲಿ ಪೋಸ್ಟ್ ತಂದ ಅವಾಂತರ

ತುಟ್ಟಿಭತ್ಯೆ(DA) ಶೇ.4ರಷ್ಟು ಹೆಚ್ಚಳ ಮಾಡಲಾಗಿದೆ ಎಂಬ ಸುದ್ದಿ ಬಗ್ಗೆ ಪ್ರತಿಕ್ರಿಯಿಸಿರುವಂತ ರಾಜ್ಯ ಸರ್ಕಾರಿ ನೌಕರರ ಸಂಘಟ ರಾಜ್ಯಾಧ್ಯಕ್ಷ ಸಿಎಸ್ ಷಡಕ್ಷರಿ ಅವರು, ಇದು ಕಳೆದ ಬಾರಿಯ ಆದೇಶವಾಗಿದೆ. ಅದನ್ನೇ ನಕಲು ಮಾಡಿ ಯಾರೋ ಕಿಡಿಗೇಡಿಗಳು ಪೋಸ್ಟ್ ಮಾಡಿದ್ದಾರೆ. ಇದು ಸುಳ್ಳು ಸುದ್ದಿಯಾಗಿದೆ ಎಂದು ಹೇಳಿಕೆ ಕೊಟ್ಟಿದ್ದಾರೆ. ರಾಜ್ಯ ಸರ್ಕಾರ ಇನ್ನೂ ಆದೇಶ ಹೊರಡಿಸಿಲ್ಲ ಅಂತ ಸ್ಪಷ್ಟ ಪಡಿಸಿದ್ದಾರೆ.

State Government Employees Latest Update
Image Credit: Livemint

ಮುಂದಿನ ಹಂತದಲ್ಲಿ ಆದೇಶ ಮಾಡುವ ನಿರೀಕ್ಷೆ

ಕೇಂದ್ರ ಸರ್ಕಾರ ಕಳೆದ ಆಗಸ್ಟ್.6 ರಂದು ನೌಕರರಿಗೆ ನೀಡುವ ತುಟ್ಟಿಭತ್ಯೆ ಶೇ.3ರಷ್ಟು ಹೆಚ್ಚಿಸಿತ್ತು. ರಾಜ್ಯ ಸರ್ಕಾರ ಕೂಡ ಸರ್ಕಾರಿ ನೌಕರರಿಗೆ ಈಗ ಶೇ.4ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಲಿದ್ದು, ಅದರ ಬಗ್ಗೆ ಸರಿಯಾದ ಮಾಹಿತಿ ನೀಡುತ್ತೇವೆ, ಆದ್ರೆ ಇದು ಜುಲೈ.1ರಿಂದಲೇ ಪೂರ್ವಾನ್ವಯ ಆಗುವಂತೆ ಜಾರಿಗೆ ಬರಲಿದೆ ಅನ್ನೋ ಆದೇಶ ಕಾಫಿ ವೈರಲ್ ಆಗಿತ್ತು, ಈ ವಿಷಯ ಫೇಕ್, ನಕಲಿ ಆದೇಶ ಕಾಪಿಯಾಗಿದ್ದು, ಆ ರೀತಿಯ ಯಾವುದೇ ಆದೇಶವನ್ನು ರಾಜ್ಯ ಸರ್ಕಾರ ಹೊರಡಿಸಿಲ್ಲ ಎಂದು ಸ್ಪಷ್ಟನೆ ನೀಡಲಾಗಿದೆ .

Leave A Reply

Your email address will not be published.