WhatsApp: ವಾಟ್ಸಾಪ್ ನಲ್ಲಿ ಬಂತು ಇನ್ನೊಂದು ಹೊಸ ಫೀಚರ್, ಈಗ ಫಿಲ್ಟರ್ ಮಾಡಿ ನಿಮ್ಮ ಚಾಟ್.

ಇನ್ನಷ್ಟು ಹೊಸ ಫೀಚರ್ ಪರಿಚಯಿಸಿದ Whatsapp, ಫಿಲ್ಟರ್ ಮಾಡುವ ಫೀಚರ್ ಪರಿಚಯಿಸಿದ ವಾಟ್ಸಾಪ್.

WhatsApp New Feature: Whatsapp ದಿನದಿಂದ ದಿನಕ್ಕೆ ಬದಲಾವಣೆಯತ್ತ ಸಾಗುತ್ತಿದೆ. ವೈಶಿಷ್ಟತೆಗಳೊಂದಿಗೆ ಈಗಾಗಲೇ ಹಲವು ಅಪ್ಲಿಕೇಶನ್ ಅನ್ನು ತನ್ನ ಗ್ರಾಹಕರಿಗೆ ವಾಟ್ಸಪ್ (WhatsApp) ನೀಡಿದೆ. ಅಷ್ಟೇ ಅಲ್ಲದೆ ಇನ್ನು ಹಲವು ಅಪ್ಡೇಟ್ ಬಗ್ಗೆ ಮಾಹಿತಿ ಹೊರಬೀಳುತ್ತಿದೆ. ಹೀಗಿರುವಾಗ ಇದೀಗ ಮತ್ತೊಂದು ನೂತನ ಆಯ್ಕೆಯ ಬಗ್ಗೆ ಮಾಹಿತಿ ಹೊರಬಿದ್ದಿದೆ.

ಸದ್ಯದಲ್ಲೇ Whatsapp ​ನಲ್ಲಿ ಫಿಲ್ಟರ್ ಆಯ್ಕೆ ಬರಲಿದ್ದು, ಇದು ಚಾಟ್ ಲಿಸ್ಟ್​ನಲ್ಲಿ ಮಹತ್ವದ ಬದಲಾವಣೆ ತರಲಿದೆ. Whatsapp ಅಪ್‌ಡೇಟ್‌ಗಳ ಟ್ರ್ಯಾಕರ್, WabetaInfo ನ ವರದಿಯ ಪ್ರಕಾರ, ಮೆಟಾ-ಮಾಲೀಕತ್ವದ ಇನ್‌ಸ್ಟಂಟ್ ಮೆಸೇಜಿಂಗ್ ಅಪ್ಲಿಕೇಶನ್ ಬಳಕೆದಾರರಿಗೆ ಚಾಟ್ ಪಟ್ಟಿಯನ್ನು ಫಿಲ್ಟರ್ ಎಂಬ ಹೊಸ ವೈಶಿಷ್ಟ್ಯವನ್ನು ನೀಡಲು ಮುಂದಾಗಿದೆ. ಸದ್ಯ ಈ ಫೀಚರ್ ಅಭಿವೃದ್ದಿ ಹಂತದಲ್ಲಿದೆ ಎಂದು ಹೇಳಲಾಗಿದೆ.

WhatsApp New Feature
Image Credit: FB

Whatsapp ಅಪ್ಡೇಟ್

Whatsapp ಬೀಟಾ 2.23.14.17 ಅಪ್ಡೇಟ್​ನಲ್ಲಿ ಚಾಟ್ ಫಿಲ್ಟರ್ ಎಂಬ ಆಯ್ಕೆ ಕಂಡುಬಂದಿದೆ. ಈ ಹೊಸ ಟೂಲ್ ಬಗ್ಗೆ ಸ್ಕ್ರೀನ್ ಶಾಟ್ ಕೂಡ ಹರಿದಾಡುತ್ತಿದೆ. ಈ ಆಯ್ಕೆಯ ಮೂಲಕ ಚಾಟ್ ಲಿಸ್ಟ್​ ಅನ್ನು ಸುಲಭವಾಗಿ ನಿರ್ವಹಿಸಲು ಸಾಧ್ಯವಾಗುತ್ತದೆ. Whatsapp​ನಲ್ಲಿ ಸಾಲು ಸಾಲು ಅಪ್ಡೇಟ್​ಗಳು ಬರಲು ತಯಾರಾಗಿದೆ. ಈ ಆಯ್ಕೆಯ ಮೂಲಕ ಚಾಟ್ ಲಿಸ್ಟ್​ ಅನ್ನು ಸುಲಭವಾಗಿ ನಿರ್ವಹಿಸಲು ಸಾಧ್ಯವಾಗುತ್ತದೆ.

Whatsapp Latest Update
Image Credit: Economictimes

ಸೆಕೆಂಡುಗಳಲ್ಲಿ ಪ್ರಮುಖ ಚಾಟ್‌ಗಳನ್ನು ಪ್ರವೇಶಿಸಲು ಅವಕಾಶ

ಮಾಹಿತಿಯ ಪ್ರಕಾರ, ಫಿಲ್ಟರ್​ನಲ್ಲಿ ಮೂರು ಆಯ್ಕೆಗಳು ಇರಲಿದೆ. ಅನ್​ರೀಡ್ ಮೆಸೇಜೆಸ್, ವೈಯಕ್ತಿಕ ಸಂಭಾಷಣೆಗಳು ಮತ್ತು ವ್ಯವಹಾರ ಸಂಭಾಷಣೆಗಳು ಹೀಗೆ ಮೂರು ಆಯ್ಕೆಗಳು ಇರಲಿದೆ. ವಾಟ್ಸ್​ಆಯಪ್​ ಮೇಲ್ಬಾಗದ ಬಲ ಮೂಲೆಯಲ್ಲಿ ಈ ಫಿಲ್ಟನ್ ಬಟನ್ ಇರಲಿದೆ ಎಂದು ಹೇಳಲಾಗಿದೆ. ಈ ವೈಶಿಷ್ಟ್ಯದ ಮೂಲಕ ಬಳಕೆದಾರರು ಸೆಕೆಂಡುಗಳಲ್ಲಿ ಪ್ರಮುಖ ಚಾಟ್‌ಗಳನ್ನು ಪ್ರವೇಶಿಸಬಹುದು. ಆದರೆ, ಗ್ರೂಪ್ ಚಾಟ್ ​ಗಳಿಗೆ ಇದು ಅನ್ವಯ ಆಗುವುದಿಲ್ಲ. ಇದಕ್ಕಾಗಿ ಯಾವುದೇ ಆಯ್ಕೆ ಕಂಡುಬಂದಿಲ್ಲ ಎನ್ನಲಾಗಿದೆ.

Leave A Reply

Your email address will not be published.