Yuva Nidhi: ಡಿಪ್ಲೋಮ ಮತ್ತು ಪದವೀಧರರಿಗೆ ಗುಡ್ ನ್ಯೂಸ್, ಯುವ ನೀಡಿ ಯೋಜನೆಯ ಬಿಗ್ ಅಪ್ಡೇಟ್.

ಯುವನಿಧಿ ಯೋಜನೆ ಬಗ್ಗೆ ಸಿಎಂ ಸ್ಪಷ್ಟನೆ, ಘೋಷಣೆ ಮಾಡಿದ ಸಿದ್ದರಾಮಯ್ಯ.

Yuva Nidhi Scheme Latest Update: ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ನಿಮಿತ್ತ ಕಲಬುರಗಿ ಪೊಲೀಸ್ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ರವರು ಗೃಹಜ್ಯೋತಿಯೋಜನೆ ಅಡಿ 200 ಯುನಿಟ್​​ವರೆಗೆ ವಿದ್ಯುತ್ ಉಚಿತವಾಗಿ ನೀಡಲಾಗುತ್ತಿದೆ ಎಂದರು.

ಹಾಗೆಯೆ ಡಿಪ್ಲೋಮಾ, ಪದವೀಧರರಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದಾರೆ , ಈ ವರ್ಷದ ಅಂತ್ಯಕ್ಕೆ ಯುವನಿಧಿ ಯೋಜನೆ ಜಾರಿಗೆ ತರಲಾಗುವುದು ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಘೋಷಣೆ ಮಾಡಿದ್ದಾರೆ. ಸಿದ್ದರಾಮಯ್ಯ ಅವರು ಯುವ ನಿಧಿ ಯೋಜನೆಯ ಬಗ್ಗೆ ಇನ್ನೊಂದು ಅಪ್ಡೇಟ್ ನೀಡಿದ್ದಾರೆ. 

Yuva Nidhi Scheme Latest Update
Image Credit: Pmmodiyojana

ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆ ಅನುಷ್ಠಾನ

ರಾಜ್ಯ ಕಾಂಗ್ರೆಸ್ ಸರ್ಕಾರ ಕೊಟ್ಟ ಭರವಸೆಯಂತೆಯೇ ಐದು ಗ್ಯಾರಂಟಿ ಯೋಜನೆಗಳ ಪೈಕಿ ನಾಲ್ಕು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ. ಶಕ್ತಿ ಯೋಜನೆ ಅಡಿ ಪ್ರತಿ ದಿನ 50 ರಿಂದ 60 ಲಕ್ಷ ಮಹಿಳೆಯರು ಉಚಿತವಾಗಿ ಪ್ರಯಾಣಿಸುತ್ತಿದ್ದಾರೆ. ಇದಕ್ಕಾಗಿ ವಾರ್ಷಿಕ 4,000 ಕೋಟಿ ವೆಚ್ಚ ಮಾಡಲಾಗುತ್ತಿದೆ.

ಅನ್ನಭಾಗ್ಯ ಯೋಜನೆ 4.42 ಕೋಟಿ ಜನರಿಗೆ ಅಡಿ 5 ಕೆಜಿ ಅಕ್ಕಿ ಹಾಗೂ ಇನ್ನು ಐದು ಕೆಜಿ ಅಕ್ಕಿಯ ಹಣ ನೀಡಲಾಗುತ್ತಿದೆ. ಇದಕ್ಕಾಗಿ 10 ಸಾವಿರ ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ಗೃಹಜ್ಯೋತಿಯೋಜನೆ ಅಡಿ 200 ಯುನಿಟ್​​ವರೆಗೆ ವಿದ್ಯುತ್ ಉಚಿತವಾಗಿ ನೀಡಲಾಗುತ್ತಿದೆ 2.14 ಕೋಟಿ ವಿದ್ಯುತ್ ಗ್ರಾಹಕರು ಇದರ ಪ್ರಯೋಜನ ಪಡೆದುಕೊಳ್ಳಲಿದ್ದಾರೆ.

congress goernment yuva nidhi scheme
Image Credit: Oneindia

ಯುವನಿಧಿ ಯೋಜನೆ ಜಾರಿಗೆ ಬಗ್ಗೆ ಸಿಎಂ ಭರವಸೆ

ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅನೇಕ ಯೋಜನೆಗಳನ್ನು ಈಗಾಗಲೇ ಜಾರಿಗೆ ತಂದಿದ್ದು ಇನ್ನು ಡಿಪ್ಲೋಮಾ, ಪದವೀಧರರಿಗೆ ಈ ವರ್ಷದ ಅಂತ್ಯಕ್ಕೆ ಯುವನಿಧಿ ಯೋಜನೆ ಜಾರಿಗೆ ತರುತ್ತೇವೆ ಎಂದು ಭರವಸೆ ನೀಡಿದ್ದಾರೆ .

Leave A Reply

Your email address will not be published.